News Karnataka Kannada
Tuesday, April 30 2024
ಮಂಗಳೂರು

34ನೇ ವರ್ಷದ “ಮಂಗಳೂರು ದಸರಾ” ಅ.15ರಿಂದ ಪ್ರಾರಂಭ

Managalure Dasara
Photo Credit : News Kannada

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿ ಮಹೋತ್ಸವ ಕಳೆದ 33 ವರ್ಷಗಳಿಂದ ವರ್ಷಂಪ್ರತಿ ಕ್ಷೇತ್ರದಲ್ಲಿ ನಡೆಯುತ್ತಿದ್ದು ಈ ಬಾರಿಯೂ ವಿಶ್ವವಿಖ್ಯಾತ “ಮಂಗಳೂರು ದಸರಾ” ಶ್ರೀ ಕ್ಷೇತ್ರದ ನವೀಕರಣದ ರುವಾರಿ ಬಿ. ಜನಾರ್ಧನ ಪೂಜಾರಿಯವರ ಮಾರ್ಗದರ್ಶನದಲ್ಲಿ ಇದೇ ತಿಂಗಳ ಅ.15ರಂದು ಶ್ರೀ ಗಣೇಶ, ನವದುರ್ಗೆ ಮತ್ತು ಶ್ರೀ ಶಾರದಾ ಮಾತೆಯ ಮೂರ್ತಿ ಪ್ರತಿಷ್ಠಾಪನೆಗೊಳಿಸಿ ಪ್ರಾರಂಭವಾಗಲಿದೆ” ಎಂದು ದೇವಳದ ಅಧ್ಯಕ್ಷ ಹೆಚ್.ಎಸ್. ಸಾಯಿರಾಂ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಬಳಿಕ ಮಾತಾಡಿದ ಕೋಶಾಧಿಕಾರಿ ಪದ್ಮರಾಜ್ ಆರ್. ಅವರು, “ದಸರಾ ಮಹೋತ್ಸವವು ಅ.25ರವರೆಗೆ ನಾನಾ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ನಡೆಯಲಿದ್ದು, ಅ. 24ರಂದು 4 ಗಂಟೆಗೆ ಸರಿಯಾಗಿ “ಮಂಗಳೂರು ದಸರಾ” ಮೆರವಣಿಗೆ ಮಾಜಿ ಸಚಿವ ಬಿ. ಜನಾರ್ಧನ
ಪೂಜಾರಿಯವರ ಮಾರ್ಗದರ್ಶನದಲ್ಲಿ ಮಂಗಳೂರು ನಗರದ ರಾಜರಸ್ತೆಯಲ್ಲಿ ಸಾಗಿ ಶ್ರೀ ಕ್ಷೇತ್ರದ ಪುಷ್ಕರಿಣಿಯಲ್ಲಿ ಮೂರ್ತಿ ವಿಸರ್ಜನೆ ನಡೆಯಲಿದೆ.

ಅ.15ರಿಂದ ಅಕ್ಟೋಬರ 23ರವರೆಗೆ ದಿನಂಪ್ರತಿ ಸಂಜೆ 6.00 ರಿಂದ ರಾತ್ರಿ 9.00 ಗಂಟೆಯವರೆಗೆ ಪ್ರಖ್ಯಾತ ಕಲಾವಿದರಿಂದ
ಸಾಂಸ್ಕೃತಿಕ ಕಾರ್ಯಕ್ರಮಗಳು ಶ್ರೀ ಕ್ಷೇತ್ರದಲ್ಲಿ ನಡೆಯಲಿದೆ. ಮಂಗಳೂರು ದಸರಾ ಮೆರವಣಿಗೆಯಲ್ಲಿ ಜಿಲ್ಲೆ ಹಾಗೂ ರಾಜ್ಯದ ಹಲವಾರು ಕಡೆಗಳಿಂದ ಬರುವ ಭಾರತೀಯ ಸನಾತನ ಧರ್ಮದ, ಇತಿಹಾಸ ಭಾವದ ನೆನಪುಗಳನ್ನು ಸ್ಮರಿಸುವ ವಿಶೇಷ ಟ್ಯಾಬ್‌ ಗಳು ಭಾಗವಹಿಸಲಿದ್ದು ಈ ಸುಂದರ ಮೆರವಣಿಗೆ ವಿಶೇಷ ಮೆರುಗು ನೀಡಲಿದೆ.

ಸಾಂಸ್ಕೃತಿಕ ಮೆರವಣಿಗೆ ಸಾಗುವ ರಸ್ತೆಯ ಎರಡೂ ಬದಿಗಳಲ್ಲಿರುವ ಎಲ್ಲಾ ಕಟ್ಟಡದ ಮಾಲಕರು ತಮ್ಮ ತಮ್ಮ ಕಟ್ಟಡಗಳನ್ನು
ವಿದ್ದುದ್ದೀಪದಿಂದ ಅಲಂಕರಿಸಿ “ಮಂಗಳೂರು ದಸರಾ” ಹಬ್ಬದಲ್ಲಿ ಪಾಲ್ಗೊಳ್ಳಬೇಕು ಎಂದು ಇದೇ ಸಂದರ್ಭದಲ್ಲಿ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಉಪಾಧ್ಯಕ್ಷೆ ಉರ್ಮಿಳಾ ರಮೇಶ್, ಪ್ರಧಾನ ಕಾರ್ಯದರ್ಶಿ ಮಾಧವ ಸುವರ್ಣ, ಹರಿಕೃಷ್ಣ ಬಂಟ್ವಾಳ್, ಸಮಿತಿ ಸದಸ್ಯರಾದ ಕೆ. ಮಹೇಶ್ಚಂದ್ರ, ರವಿಶಂಕರ್ ಮಿಜಾರ್, ಎಂ. ಶೇಖರ್ ಪೂಜಾರಿ, ಸಂತೋಷ್ ಕುಮಾರ್, ಜಗದೀಪ್ ಡಿ. ಸುವರ್ಣ, ದೇವೇಂದ್ರ ಪೂಜಾರಿ, ಡಾ.ಅನುಸೂಯ ಬಿ.ಟಿ. ಸಾಲಿಯಾನ್, ಕಿಶೋರ್ ಯೆಯ್ಯಾಡಿ, ಚಂದನ್, ಡಾ. ಬಿ.ಜಿ. ಸುವರ್ಣ, ವಾಸುದೇವ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು