Categories: ಮಂಗಳೂರು

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಮೇ 3ರಂದು 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ

ಧರ್ಮಸ್ಥಳ: ಶ್ರೀಕ್ಷೇತ್ರ ಧರ್ಮಸ್ಥಳ ಅಂದರೆ ಅದು ಧರ್ಮದ ನೆಲೆವೀಡು. ಭಕ್ತ ಕೋಟಿಯ ಆರಾಧನಾ ತಾಣ. ಬೇಡಿದ ಬಯಕೆ ಈಡೇರಿಸುವ ಮಂಜುನಾಥ. ಕೋಟಿ ಕೋಟಿ ಭಕ್ತರು ಆಗಮಿಸುವ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ51ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಮೇ 3ರಂದು ಸಂಜೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ನಡೆಯಲಿದೆ. ಈಗಾಗಲೇ ನೋಂದಣಿ ಮಾಡಿಕೊಂಡಿರುವ 201 ಜೋಡಿಗಳು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಲಿವೆ.

ಮೇ 2ರಂದು ಎಲ್ಲರ ದಾಖಲೆಗಳನ್ನು ಪರಿಶೀಲಿಸಿ ವಧುವಿಗೆ ಸೀರೆ, ರವಿಕೆ ಕಣ ಮತ್ತು ವರನಿಗೆ ಧೋತಿ, ಶಾಲು ನೀಡಲಾಗುತ್ತದೆ. ಮೇ 3ರಂದು ಸಂಜೆ 5ರಿಂದ ವಧೂ-ವರರು ದೇವಸ್ಥಾನಕ್ಕೆ ಪ್ರದಕ್ಷಿಣೆ ಬಂದು ವಿವಾಹ ನೆರವೇರಲಿರುವ ಅಮೃತವರ್ಷಿಣಿ ಸಭಾ ಮಂಟಪಕ್ಕೆ ಭವ್ಯ ಮೆರವಣಿಗೆಯಲ್ಲಿ ಸಾಗುವರು. ಅಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ವಿ. ಹೆಗ್ಗಡೆ, ಚಿತ್ರನಟ ತೂಗುದೀಪ ದರ್ಶನ್ ಅವರು ಮಂಗಳಸೂತ್ರ ವಿತರಿಸುವರು.

ವಿವಾಹ ಸಮಾರಂಭವು ಅವರವರ ಜಾತಿ ಸಂಪ್ರದಾಯದಂತೆ ಸಂಭ್ರಮದಿಂದ ನೆರವೇರಲಿದೆ. ಬಳಿಕ ಅನ್ನಪೂರ್ಣ ಭೋಜನಾಲಯದಲ್ಲಿ ವಿವಾಹ ಭೋಜನ ಇರಲಿದೆ. ವರದಕ್ಷಿಣೆ ಹಾಗೂ ಮದುವೆಗಾಗಿ ಆಗುವ ದುಂದು ವೆಚ್ಚವನ್ನು ತಡೆಯುವ ಉದ್ದೇಶದಿಂದ 1972ರಲ್ಲಿ ಉಚಿತ ಸಾಮೂಹಿಕ ವಿವಾಹ ಸಮಾರಂಭವನ್ನು ಪ್ರಾರಂಭಿಸಲಾಗಿತ್ತು. ಬಳಿಕ ಪ್ರತೀ ವರ್ಷ ನಡೆಯುತ್ತಿದೆ. ಕಳೆದ ವರ್ಷದವರೆಗೆ 12,576 ಜೋಡಿಗಳಿಗೆ ವಿವಾಹವಾಗಿದೆ.

Gayathri SG

Recent Posts

ನಾಳೆ ಪ್ರಚಾರ ನಿಮಿತ್ಯ ಕಲಬುರಗಿಯ ಸೇಡಂ ತಾಲೂಕಿಗೆ ಪ್ರಿಯಾಂಕಾ ಗಾಂಧಿ

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ನಾಳೆ ಸೇಡಂಗೆ ಆಗಮಿಸಲಿದ್ದು, ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರ ಪ್ರಚಾರ…

3 hours ago

ಅಧಿಕಾರಕ್ಕಾಗಿ ಮಾನವಿಯತೆ ಮರೆತಿದ್ದಾರೆ ಖಂಡ್ರೆ : ಭಗವಂತ ಖೂಬಾ

ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿರುವ ಈಶ್ವರ ಖಂಡ್ರೆ, ಈ ಚುನಾವಣೆಯಲ್ಲಿ ಹೇಗಾದರೂ ಮಾಡಿ ಗೆಲ್ಲಲೆಬೆಕೆನ್ನುವ ಉದ್ದೇಶದಿಂದ, ಮನುಷ್ಯತ್ವ, ಮಾನವಿಯತೆ ಮರೆತು ಬಿಟ್ಟಿದ್ದಾರೆ,…

3 hours ago

ಕಾಂಗ್ರೆಸ್‌ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ಹೊಕ್ಕಿ ಹೊಡೆಯುತ್ತಾರೆ: ಯತ್ನಾಳ್‌

'ದೇಶದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ಹೊಕ್ಕಿ ಹೊಡೆಯುತ್ತಾರೆ' ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ…

3 hours ago

ನಾಳೆಯಿಂದ ಪಿಯುಸಿ 2ನೇ ವಾರ್ಷಿಕ ಪರೀಕ್ಷೆ: ವಿದ್ಯಾರ್ಥಿಗಳಿಗೆ ಬಸ್‌ ಪ್ರಯಾಣ ಫ್ರೀ

ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿಯು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಏಪ್ರಿಲ್ 29 ರಿಂದ ಮೇ…

4 hours ago

ಸೆಲ್ಫಿ ತೆಗೆಯುವಾಗ ಕೆರೆಗೆ ಬಿದ್ದ ಮಗಳು : ಕಾಪಾಡಲು ಹೋದ ತಂದೆಯೂ ಸಾವು

ಸೆಲ್ಫಿ ತೆಗೆಯುವಾಗ ಕೆರೆಗೆಬಿದ್ದ ಮಗಳ ರಕ್ಷಣೆಗೆ ಹೋಗಿ ತಂದೆಯೂ ಸಾವನ್ನಪ್ಪಿದ ಧಾರುಣ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕು ಕಾಮಸಮುದ್ರ…

4 hours ago

ಯತ್ನಾಳ್ ಬಾಯಿ, ಬೊಂಬಾಯಿ : ಸಚಿವ ಎಂ.ಬಿ‌.ಪಾಟೀಲ್ ತಿರುಗೇಟು

ಬಸನಗೌಡ ಪಾಟೀಲ್ ಯತ್ನಾಳ್ ಬಾಯಿ, ಬೊಂಬಾಯಿ. ಅವ್ರು, ಬೆಳಿಗ್ಗೆ, ಮಧ್ಯಾಹ್ನ, ರಾತ್ರಿ, ಮಲಗಿ ಎಚ್ಚರಾದ್ಮೇಲೆ ಒಂದು ಹೇಳ್ತಾರೆ. ಇವ್ರ ಮಾತನ್ನ…

4 hours ago