ಮಂಗಳೂರು

ಧರ್ಮಸ್ಥಳದಲ್ಲಿ ಐವತ್ತೊಂದನೇ ವರ್ಷದ ಪುರಾಣ ಕಾವ್ಯ ವಾಚನ – ಪ್ರವಚನ ಕಾರ್ಯಕ್ರಮ

ಬೆಳ್ತಂಗಡಿ: ಪುರಾಣ ವಾಚನ – ಪ್ರವಚನದಿಂದ ಸುಖ-ಶಾಂತಿ, ನೆಮ್ಮದಿ ಸಿಗುತ್ತದೆ ಎಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಲಕ್ಷ್ಮೀನಾರಾಯಣ ಅಸ್ರಣ್ಣರು ಹೇಳಿದರು.

ಅವರು ಭಾನುವಾರ ಧರ್ಮಸ್ಥಳದಲ್ಲಿ ಐವತ್ತೊಂದನೇ ವರ್ಷದ ಪುರಾಣ ಕಾವ್ಯ ವಾಚನ – ಪ್ರವಚನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಶ್ರದ್ಧಾ-ಭಕ್ತಿಯಿಂದ ಧರ್ಮದ ಮರ್ಮವನ್ನರಿತು, ಸಾತ್ವಿಕರಾಗಿ, ಸಭ್ಯ – ಸುಸಂಸ್ಕøತ ನಾಗರಿಕರಾಗಿ, ಸಹೃದಯವಂತರಾಗಿ ಸಾರ್ಥಕ ಜೀವನ ನಡೆಸಲು ಪುರಾಣ ವಾಚನ – ಪ್ರವಚನ ಪ್ರೇರಣೆ, ಮಾರ್ಗದರ್ಶನ ನೀಡುತ್ತದೆ. ಸಾಮಾನ್ಯವಾಗಿ ದೇವಸ್ಥಾನಗಳಲ್ಲಿ ನಿತ್ಯವೂ ಅಷ್ಟಾವಧಾನ ನಡೆಸುವ ಸಂಪ್ರದಾಯವಿದೆ. ಆದುದರಿಂದ ಎಲ್ಲಾ ತೀರ್ಥಕ್ಷೇತ್ರಗಳಲ್ಲಿಯೂ ಪುರಾಣ ವಾಚನ – ಪ್ರವಚನ ನಡೆಯಬೇಕು ಎಂದು ಅವರು ಸಲಹೆ ನೀಡಿದರು.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ ಪ್ರತಿಯೊಬ್ಬರಿಗೂ ಜ್ಞಾನದಾಹ ಇರಬೇಕು. ಧರ್ಮಸ್ಥಳದಲ್ಲಿ ಭಕ್ತರ ಜ್ಞಾನದಾಹ ನಿವಾರಣೆಗಾಗಿ ವಸ್ತು ಸಂಗ್ರಹಾಲಯ, ಕಾರ್ ಮ್ಯೂಸಿಯಂ, ಉದ್ಯಾನವನ, ತಾಳೆಗರಿ ಸಂಗ್ರಹ ಮೊದಲಾದ ಸೌಲಭ್ಯಗಳನ್ನು ಒದಗಿಸಲಾಗಿದೆ. ಅವಿಭಕ್ತ ಕುಟುಂಬ ಪದ್ಧತಿಯಲ್ಲಿ ಹಿಂದೆ ಪ್ರತಿ ಮನೆಯಲ್ಲಿ ಪುರಾಣ ವಾಚನ ಮಾಡುವ ಸಂಪ್ರದಾಯವಿತ್ತು. ಆದರೆ, ಆಧುನಿಕ ಜೀವನ ಶೈಲಿ ಮತ್ತು ಕೆಲಸದ ಒತ್ತಡದಿಂದ ಸಂಪ್ರದಾಯವೆಲ್ಲ ಮರೆಯಾಗುತ್ತಿದೆ. ಪುರಾಣಗಳಲ್ಲಿ ನಮ್ಮ ಬದುಕಿನ ಎಲ್ಲಾ ಸಮಸ್ಯೆಗಳಿಗೆ, ಸವಾಲುಗಳಿಗೆ, ಸಾಂಸಾರಿಕ ತಾಪತ್ರಯಗಳಿಗೆ ಸೌಹಾರ್ದಯುತ ಪರಿಹಾರ ದೊರಕುತ್ತದೆ. ಅನೇಕ ಮಂದಿ ಭಕ್ತರು ತಮ್ಮ ಶಾಪ-ತಾಪ ಪರಿಹಾರಕ್ಕಾಗಿ ಕೌಟುಂಬಿಕ ಸಮಸ್ಯೆಗಳ ಇತ್ಯರ್ಥಕ್ಕಾಗಿ ಧರ್ಮಸ್ಥಳಕ್ಕೆ ಬರುತ್ತಾರೆ. ಮಹಿಳೆಯರು, ಹಿರಿಯರು, ನೊಂದವರ ಕಣ್ಣೀರೇ ಶಾಪವಾಗಿ ಪರಿಣಮಿಸುತ್ತದೆ. ಆದುದರಿಂದ ಪುರಾಣ ವಾಚನ – ಪ್ರವಚನದ ಮೂಲಕ ಜ್ಞಾನ ಸಂಗ್ರಹ ಮಾಡಿ ಸಾಂಸಾರಿಕ ಸಮಸ್ಯೆಗಳಿಗೆ ಪರಿಹಾರ ಪಡೆದು ಶಾಂತಿ – ನೆಮ್ಮದಿಯ ಜೀವನ ನಡೆಸಬಹುದು ಎಂದು ಹೆಗ್ಗಡೆಯವರು ಸಲಹೆ ನೀಡಿದರು.

ಧರ್ಮಸ್ಥಳ ಯಕ್ಷಗಾನ ಮೇಳದ ನಿವೃತ್ತ ಕಲಾವಿದ ಕೆ. ಗೋವಿಂದ ಭಟ್ ಮಾತನಾಡಿ, ಧರ್ಮಸ್ಥಳಕ್ಕೆ ಭಕ್ತರು ಆರ್ತರಾಗಿ, ಜ್ಞಾನಿಗಳಾಗಿ, ಜಿಜ್ಞಾಸುಗಳಾಗಿ ಕುತೂಹಲದಿಂದ ತಮ್ಮ ಸವiಸ್ಯೆಗಳ ಪರಿಹಾರ ಹಾಗೂ ಶಾಂತಿ ಪಡೆಯಲು ಬರುತ್ತಾರೆ. ಅವರಿಗೆ ಬೇಕಾದ ಸಕಾಲಿಕ ಪರಿಹಾರ ಮತ್ತು ಮಾರ್ಗದರ್ಶನ ಹಾಗೂ ಸುಜ್ಞಾನದ ಬೆಳಕನ್ನು ನೀಡಿ ಸಾರ್ಥಕ ಬದುಕಿಗೆ ಪ್ರೋತ್ಸಾಹ ನೀಡಲಾಗುತ್ತದೆ ಎಂದು ಹೇಳಿದರು.

ಕಟೀಲು ಲಕ್ಷ್ಮೀನಾರಾಯಣ ಅಸ್ರಣ್ಣರು ಮತ್ತು ನಿವೃತ್ತ ಕಲಾವಿದ ಕೆ. ಗೋವಿಂದ ಭಟ್ ಅವರನ್ನು ಹೆಗ್ಗಡೆಯವರು ಸನ್ಮಾನಿಸಿ ಗೌರವಿಸಿದರು.

ಹವ್ಯಾಸಿ ಯಕ್ಷಗಾನ ಕಲಾವಿದ ಉಜಿರೆ ಆಶೋಕ ಭಟ್ ಸ್ವಾಗತಿಸಿದರು. ಕಾರ್ಯಕ್ರಮ ನಿರ್ವಹಿಸಿದ ಶ್ರೀನಿವಾಸ ರಾವ್ ಧರ್ಮಸ್ಥಳ ಕೊನೆಯಲ್ಲಿ ಧನ್ಯವಾದವಿತ್ತರು.

ಸೆ. 17ರ ವರೆಗೆ ಪ್ರತಿದಿನ ಸಂಜೆ ಗಂಟೆ 6.30 ರಿಂದ 8.00 ರ ವರೆಗೆ ಪುರಾಣ ಕಾವ್ಯ ವಾಚನ – ಪ್ರವಚನ ನಡೆಯುತ್ತದೆ.

Gayathri SG

Recent Posts

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

40 mins ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

48 mins ago

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

58 mins ago

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

1 hour ago

ಮಳೆಯಿಂದಾಗಿ ಪಂದ್ಯ ರದ್ದು; ಪ್ಲೇಆಫ್​ಗೇರಿದ್ದು ಯಾರು ?

ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್‌ಗೂ ಮುನ್ನವೇ…

1 hour ago

ಗುಡ್‌ ನ್ಯೂಸ್:‌ ಶುಗರ್‌, ಹೃದ್ರೋಗ ಸೇರಿ 41 ಔಷಧಿಗಳ ಬೆಲೆ ಕಡಿತ

ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್‌ಗಳ…

2 hours ago