Categories: ಮಂಗಳೂರು

ಬಂಟ್ವಾಳ ವಿಧಾನಸಭಾ ಕ್ಷೇತ್ರದ 5 ನೇ ಜನಸ್ಪಂದನಾ ಕಾರ್ಯಕ್ರಮ

ಬಂಟ್ವಾಳ: ಕಾನೂನಿನ ಚೌಕಟ್ಟಿನಡಿಯಲ್ಲಿ ಸರಕಾರ ಮಟ್ಟದಲ್ಲಿ ಆಗುವ ಪ್ರತಿಯೊಂದು ಕೆಲಸಗಳನ್ನು ಸ್ಥಳದಲ್ಲಿಯೇ ಪರಿಹಾರ ಒದಗಿಸಲು ಜನಸ್ಪಂದನ ಕಾರ್ಯಕ್ರಮದ ಮೂಲಕ ಪ್ರಯತ್ನಿಸಲಾಗುತ್ತಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಹೇಳಿದರು.

ಅವರು ಮಾಣಿ ಜಿ.ಪಂ‌.ವ್ಯಾಪ್ತಿಯಲ್ಲಿ ನಡೆದ ಬಂಟ್ವಾಳ ವಿಧಾನಸಭಾ ಕ್ಷೇತ್ರದ 5 ನೇ ಜನಸ್ಪಂದನಾ ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತನಾಡಿದರು.ಗ್ರಾಮದ ಜನರು ಸಮಸ್ಯೆ ಗಳ ಕಡತಗಳನ್ನು ಹಿಡಿದುಕೊಂಡು ಕಚೇರಿ ಕಚೇರಿಗೆ ಅಲೆದಾಡಿ ಇತ್ಯರ್ಥವಾಗದ ಸಮಸ್ಯೆಗಳನ್ನು ಪರಿಹಾರ ಮಾಡುವ ಕೆಲಸ ಮಾಡಲಾಗುತ್ತಿದೆ,

ಜನರಿಗೆ ಸ್ಪಂದನೆ ಕೊಡುವ ಮಹತ್ವದ ಕಾರ್ಯಕ್ರಮ ಇದಾಗಿದ್ದು, ಕಾರ್ಯಕ್ರಮದ ಪ್ರಯೋಜನ ಪಡೆಯಲು ಅವರು ವಿನಂತಿ ಮಾಡಿದರು.

ಮಾಣಿ ಜಿ.ಪಂ.ವ್ಯಾಪ್ತಿಯ ಸುಮಾರು 324 ಜನರಿಗೆ ವಿವಿಧ ಇಲಾಖೆಗಳಿಂದ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಣೆ ಮಾಡಲಾಗುತ್ತದೆ ಎಂದು ಅವರು‌ ತಿಳಿಸಿದರು.

ತಹಶಿಲ್ದಾರ್ ಸ್ಮಿತಾರಾಮು ಅವರು ಮಾತನಾಡಿ, ತಾಲೂಕಿನ ಎಲ್ಲಾ ಇಲಾಖೆಗಳನ್ನು ಒಂದೇ ಸೂರಿನಡಿ ಸೇರಿಸಿ ಜನಸಾಮಾನ್ಯರ ಬಳಿಗೆ ಅಧಿಕಾರಿಗಳು ಬಂದು ಸಮಸ್ಯೆ ಪರಿಹರಿಸುವ ಶಾಸಕರ ವಿನೂತನ ‌ಕಾರ್ಯಕ್ರಮ ಇದಾಗಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷ ತೆಯನ್ನು ನೆಟ್ಲ ಮುಡ್ನೂರು ಗ್ರಾಮಪಂಚಾಯತ್ ಅಧ್ಯಕ್ಷ ಸಚ್ಚಿದಾನಂದ ವಹಿಸಿದ್ದರು.

ಅನಂತಾಡಿ ಗ್ರಾ.ಪಂ. ಗಣೇಶ್ ಪೂಜಾರಿ,ಮಾಣಿ ಗ್ರಾ.ಪಂ.ಅಧ್ಯಕ್ಷ ಬಾಲಕೃಷ್ಣ ಆಳ್ವ, ವೀರಕಂಭ ಗ್ರಾ.ಪಂ.ಅಧ್ಯಕ್ಷ ದಿನೇಶ್, ಹಿಂದುಳಿದ ವರ್ಗಗಳ ಅಧಿಕಾರಿ ಬಿಂದಿಯಾ, ಕೆ.ಎಸ್.ಆರ್.ಟಿ.ಸಿ.ಡಿಪೋ ಮ್ಯಾನೇಜರ್ ಶ್ರೀಸ ಭಟ್, ತಾಲೂಕು ಆರೋಗ್ಯ ಅಧಿಕಾರಿ ಅಶೋಕ್ , ಜಿ.ಪಂ.ಇಂಜಿನಿಯರ್ ತಾರಾನಾಥ, ಪಿ.ಡಬ್ಲ್ಯೂ ಡಿ.ಇಲಾಖೆ ಇಂಜಿನಿಯರ್ ಜಯಪ್ರಕಾಶ್, ಅರಣ್ಯ ಇಲಾಖೆಯ ಅಧಿಕಾರಿ ರಾಜೇಶ್ ಬಳಿಗಾರ್, ಪಶುಸಂಗೋಪನೆ ಇಲಾಖೆ ಯ ವೈದ್ಯ ಅಧಿಕಾರಿ ಅವಿನಾಶ್, ವಿಟ್ಲ ಸಿ.ಡಿ.ಪಿ.ಒ. ಉಷಾ, ಕಾರ್ಮಿಕ ಇಲಾಖೆಯ ಅಧಿಕಾರಿ ಮರ್ಲಿನ್ ಮತ್ತಿತರರು ಉಪಸ್ಥಿತರಿದ್ದರು.

ತಾ.ಪಂ.ಇ.ಒ.ರಾಜಣ್ಣ ಸ್ವಾಗತಿಸಿದರು. ದಿನೇಶ್ ಸುವರ್ಣ ರಾಯಿ‌ ಕಾರ್ಯಕ್ರಮ ನಿರೂಪಿಸಿದರು.

Gayathri SG

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

6 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

6 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

6 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

6 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

6 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

7 hours ago