News Karnataka Kannada
Tuesday, April 30 2024
ಮಂಗಳೂರು

ಮಂಗಳೂರು ಮಿಲಾಗ್ರಿಸ್ ವಿದ್ಯಾ ಸಂಸ್ಥೆಯ ವತಿಯಿಂದ 74ನೇ ಗಣರಾಜ್ಯೋತ್ಸವ ದಿನಾಚರಣೆ

74th Republic Day celebrations at Milagres Educational Institute, Mangaluru
Photo Credit : News Kannada

ಮಂಗಳೂರು: ಜನವರಿ 26, 2022ರಂದು ಮಂಗಳೂರು ಮಿಲಾಗ್ರಿಸ್ ವಿದ್ಯಾ ಸಂಸ್ಥೆಯ ವತಿಯಿಂದ 74ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಮಿಲಾಗ್ರಿಸ್ ಚರ್ಚ್ ಪಾಲನಾ ಸಮಿತಿಯ ಕಾರ್ಯದರ್ಶಿಯಾಗಿರುವ ಡಯಾನ ಡಿ’ಸೋಜಾ ಧ್ವಜರೋಹಣ ನೆರವೇರಿಸಿ ತಮ್ಮ ಭಾಷಣದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಮಹಾನ್ ಆದರ್ಶ, ಮೌಲ್ಯ, ಹಾಗೂ ತ್ಯಾಗಗಳ ಬಗ್ಗೆ ತಿಳಿಸುತ್ತಾ ಯುವಕರು ದೇಶ ಭಕ್ತಿಯ ಜೊತೆಗೆ ದೇಶದ ಅಭಿವೃದ್ಧಿಗೆ ಶ್ರಮಿಸಬೇಕೆಂದು ಕರೆ ನೀಡಿದರು.

ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲರಾದ ವಂದ. ಗುರುಗಳಾದ ಮೈಕಲ್ ಸಾಂತೂಮಾಮಾಯೋರ್ ಅಧ್ಯಕ್ಷ ತೆಯನ್ನು ವಹಿಸಿದರು. ಮಿಲಾಗ್ರಿಸ್ ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ  ಸ್ಟ್ಯಾನಿ ಬ್ಯಾರೆಟ್ಟೊ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮೆಲ್ವಿನ್ ವಾಸ್, ಮಿಲಾಗ್ರಿಸ್ ಸೆಂಟ್ರಲ್ ಸ್ಕೂಲ್ ನ ಪ್ರಾಂಶುಪಾಲರಾದ ವಂದ ಗುರು. ಉದಯ ಫೆರ್ನಾಂಡಿಸ್, ಎನ್ ಸಿ ಸಿ ವಿಭಾಗ ಸಂಯೋಜಕರಾದ ಡೆನ್ಜಿಲ್ ಪಿಂಟೋ, ವಿದ್ಯಾರ್ಥಿ ಪ್ರತಿನಿಧಿ ಅಶ್ವಿನ್ ಒರ್ನೆಲೋ, ಈ ಕಾರ್ಯಕ್ರಮದ ಸಂಯೋಜಕರಾದ ಜೋನ್ ಫೆರ್ನಾಂಡಿಸ್ ಇವರು ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಅಂಜುಮ್ ಸ್ವಾಗತಿಸಿ, ವಿದ್ಯಾರ್ಥಿ ನಿಕ್ಸನ್ ವಾಸ್ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿ ಹನ್ನಾ
ವಂದಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು