Categories: ಮಂಗಳೂರು

9ನೇ ವರ್ಷದ ‘ಸತ್ಯ-ಧರ್ಮ’ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

ಬಂಟ್ವಾಳ:  ಗ್ರಾಮೀಣ ಪ್ರದೇಶದ ಯುವಕರ ಸಂಘಟನೆ ಮೂಲಕ ಕೃಷಿಕರ ಶಿಸ್ತುಬದ್ಧ ಕಂಬಳ ಕ್ರೀಡೆ ನಡೆಸುತ್ತಿರುವುದು ಇತರರಿಗೆ ಮಾದರಿಯಾಗಿದೆ ಎಂದು ಕಕ್ಯಪದವು ಸೇವಾ ಸಹಕಾರಿ ಸಂಘದ ಅಧ್ಯಕ್ಷ ಚೆನ್ನಪ್ಪ ಸಾಲ್ಯಾನ್ ಹೇಳಿದ್ದಾರೆ.

ಇಲ್ಲಿನ ಉಳಿ ಗ್ರಾಮದ ಕಕ್ಯಪದವು ಮೈರ -ಬರ್ಕೆಜಾಲು ಎಂಬಲ್ಲಿ ಶ್ರೀ ರಾಮಾಂಜನೇಯ ಗೆಳೆಯರ ಬಳಗದ ವತಿಯಿಂದ ಶನಿವಾರ ಆರಂಭಗೊಂಡ 9ನೇ ವರ್ಷದ ‘ಸತ್ಯ-ಧರ್ಮ’ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕಕ್ಯಪದವು ಶ್ರೀ ಪಂಚದುರ್ಗ ಪ್ರೌಢಶಾಲೆ ಸಂಚಾಲಕ ದಾಮೋದರ ನಾಯಕ್ ಉಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಂಬಳ ಕ್ಷೇತ್ರದಲ್ಲಿ ಕಕ್ಯಪದವು ಜನರ ಕೊಡುಗೆ ಮತ್ತು ಸಾಧನೆ ಮಹತ್ತರವಾಗಿದೆ ಎಂದರು.

ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ರೋಹಿತ್ ಹೆಗ್ಡೆ ಎರ್ಮಾಳ್, ಉಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುರೇಶ ಮೈರಾ, ಉಪಾಧ್ಯಕ್ಷ ಚಿದಾನಂದ ರೈ ಕಕ್ಯ, ಉದ್ಯಮಿ ನಟೇಶ್ ಪೂಜಾರಿ ಬೆಂಗಳೂರು, ಪ್ರಗತಿಪರ ಕೃಷಿಕ ಸುಧಾಕರ ಶೆಟ್ಟಿ ಶಂಕರಬೆಟ್ಟು ಶುಭ ಹಾರೈಸಿದರು. ಗ್ರಾಮ ಪಂಚಾಯಿತಿ ಸದಸ್ಯ  ಚೇತನ್ ಉರ್ದೊಟ್ಟು,, ಕಂಬಳ ಸಮಿತಿ ಅಧ್ಯಕ್ಷ ಕುಸುಮಾಧರ ಉರ್ಕಿ ಪ್ರಮುಖರಾದ ಕಾರ್ಯಾಧ್ಯಕ್ಷ ಲತೀಶ್ ಕುಕ್ಕಾಜೆ, ತುಷಾರ್ ಭಂಡಾರಿ ಪುಣ್ಕೆದಡಿ, ಉಪಾಧ್ಯಕ್ಷ ಸಾಂತಪ್ಪ ಪೂಜಾರಿ ಹಟ್ಟದಡ್ಕ, ಶ್ರೀ ರಾಮಾಂಜನೇಯ ಗೆಳೆಯರ ಬಳಗ ಅಧ್ಯಕ್ಷ ಮಹೇಂದ್ರ ಕಾಯರ್ ಗುರಿ, ಕೋಶಾಧಿಕಾರಿ ಉಮೇಶ್ ಪೂಜಾರಿ ಮತ್ತಿತರರು ಇದ್ದರು.

ಶಿವಾನಂದ ಮೈರ ಸ್ವಾಗತಿಸಿ, ವಕೀಲ ರಂಜಿತ್ ಮೈರ ವಂದಿಸಿದರು. ಪ್ರಶಾಂತ್ ಮೈರ ಕಾರ್ಯಕ್ರಮ ನಿರೂಪಿಸಿದರು.

10 ಗಂಟೆಗೆ ಕಂಬಳ ಬಂದ್:
ಕೊರೋನ ಕಫ್ಯೂ ೯ ಹಿನ್ನಲೆಯಲ್ಲಿ  ರಾತ್ರಿ 9 ಗಂಟೆಗೆ ಕಂಬಳವನ್ನು ಸ್ಥಗಿತಗೊಳಿಸಿ ಭಾನುವಾರ ಮುಂಜಾನೆ  5 ರ ಬಳಿಕ ಮುಂದುವರಿಸಲು ನಿರ್ಧರಿಸಲಾಗಿದೆ ಮಬಳ ಸಮಿತಿ ಗೌರವಾಧ್ಯಕ್ಷ ,ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಿಳಿಸಿದ್ದಾರೆ.

ಶಾಸಕ ರಾಜೇಶ್ ನಾಯ್ಕ್ ಅವರ ಉಪಸ್ಥಿತಿಯಲ್ಲಿ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ರೋಹಿತ್ ಹೆಗ್ಡೆ ಅವರ  ಅಧ್ಯಕ್ಷತೆಯಲ್ಲಿ ಕಂಬಳ ಕೋಣಗಳ ಮಾಕರ ತುರ್ತು ಸಭೆ ನಡೆಸಿ ಈ ನಿರ್ಧಾರ ಕೈಗೊಳ್ಳಲಾಯಿತು.ಕಂಬಳ ಸಮಿತಿ ಪ್ರ.ಕಾರ್ಯದರ್ಶಿ ರಾಜೀವ್ ಶೆಟ್ಟಿ ಎಡ್ತೂರು ಅವರು ಸ್ವಾಗತಿಸಿ,ವಂದಿಸಿದರು

Sneha Gowda

Recent Posts

ಭೂದೇವಿ ಸಮೇತ ಶ್ರೀಲಕ್ಷ್ಮಿವರಾಹಸ್ವಾಮಿಗೆ ಅಭಿಷೇಕ

ವರಹಾ ಜಯಂತಿಯ ಅಂಗವಾಗಿ ಕೃ?ರಾಜಪೇಟೆ ತಾಲ್ಲೂಕಿನ ಕಲ್ಲಹಳ್ಳಿಯ ಭೂದೇವಿ ಸಮೇತ ಶ್ರೀಲಕ್ಷ್ಮಿ ಭೂವರಾಹಸ್ವಾಮಿಯ ಶಿಲಾಮೂರ್ತಿಗೆ ವಿಶೇ? ಅಭಿ?ಕ ನಡೆಯಿತಲ್ಲದೆ, ಸ್ವಾಮಿಯ…

5 hours ago

ನನ್ನ ವಿರುದ್ಧ ದೇವರಾಜೇಗೌಡ ಮಾಡಿರುವ ಆಪಾದನೆಗಳು ಆಧಾರ ರಹಿತ: ಡಿಕೆ ಶಿವಕುಮಾರ್

ಹಾಸನ ವಿಡಿಯೋ ಪೆನ್​ಡ್ರೈವ್​ ಸೂತ್ರಧಾರಿ ಡಿಕೆ ಶಿವಕುಮಾರ್ ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿ ಆಡಿಯೋವೊಂದನ್ನು…

5 hours ago

ರಾಜ್ಯದ ಹಲವೆಡೆ ಮುಂದಿನ 5 ದಿನಗಳ ಕಾಲ‌ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಇಂದಿನಿಂದ ಮೇ 11ರವರೆಗೆ ವರುಣ ಆಗಮನ ಆಗುವ ಮುನ್ಸೂಚನೆ. ಹಾಗೂ ಮುಂದಿನ 5 ದಿನಗಳ ಕಾಲ‌ ಗುಡುಗು…

6 hours ago

ಬೀದರ್ ಮಾರುಕಟ್ಟೆಯಲ್ಲಿ ಎಲ್ಲಿ ನೋಡಿದರು ಮಾವಿನ ಹಣ್ಣಿನ ದರ್ಬಾರ್‌

ಯುಗಾದಿ ಮುಗಿಯುತ್ತಿದ್ದಂತೆ ಎಲ್ಲೆಡೆ ಮಾವಿನ ಹಣ್ಣುಗಳ ದರ್ಬಾರ ಕಂಡುಬರುತ್ತಿದೆದೆ. ಮಾರುಕಟ್ಟೆಗೆ ಮಾವಿನಕಾಯಿ ಹೆಚ್ಚಾಗಿ ಬರುತ್ತಿದೆ. ಸಾಲಾಗಿ ಜೋಡಿಸಿಟ್ಟ ಮಾವಿನ ಹಣ್ಣು…

6 hours ago

ಬಾಲಕಿ ಮೇಲೆ 2 ರಾಟ್‌ವೀಲರ್ ನಾಯಿಗಳಿಂದ ದಾಳಿ: ಮಾಲೀಕ ಅರೆಸ್ಟ್

ಎರಡು ರಾಟ್‌ವೀಲರ್ ನಾಯಿಗಳು ಐದು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದ ಘಟನೆ ಚೆನ್ನೈನ ಥೌಸಂಡ್ ಲೈಟ್ಸ್ ಪ್ರದೇಶದ ಸಾರ್ವಜನಿಕ…

7 hours ago

ಬೀದರ್: ಬಿಸಿಲಿನ ಝಳಕ್ಕೆ ಚುನಾವಣೆ ಸಿಬ್ಬಂದಿ ತತ್ತರ

ಮಂಗಳವಾರ ನಡೆಯಲಿರುವ ಲೋಕಸಭೆ ಚುನಾವಣೆಗೆ ಚುನಾವಣೆ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸೋಮವಾರ ಮಧ್ಯಾಹ್ನದಿಂದಲೇ ಕರ್ತವ್ಯ ನಿರತ ಸಿಬ್ಬಂದಿ ಮತಗಟ್ಟೆಗೆ…

7 hours ago