ಮಂಗಳೂರು: ತಾಯಿ ಮತ್ತು ಮಗ ಸಂಚರಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದಲ್ಲಿದ್ದ ಐದು ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಮಂಗಳೂರಿನ ಬೆಂದೂರವೆಲ್ ಬಳಿ ನಡೆದಿದೆ.
ಮೃತ ಬಾಲಕನನ್ನು ಹಾರ್ದಿಕ್ (5) ಎಂದು ಗುರುತಿಸಲಾಗಿದೆ. ತಾಯಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತಕ್ಕೆ ಕಾರಣವಾದ ಬಸ್ ಇನ್ನೊಂದು ಬಸ್ಸನ್ನು ಓವರ್ಟೇಕ್ ಮಾಡುವಾಗ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.