ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಹಿನ್ನೆಲೆ ಎರಡು ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಬುಧವಾರ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ್ದಾರೆ.
ಸಮಾಜದ ಶಾಂತಿ ಕದಡುವ ಕೃತ್ಯಗಳ ಮೇಲೆ ಪೊಲೀಸ್ ಇಲಾಖೆ ಹದ್ದಿನ ಕಣ್ಣಿರಿಸಿದ್ದು, ಅಂತಹಾ ಕಿಡಿಗೇಡಿ ಕೃತ್ಯಗಳ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ಪ್ರಕರಣ ಆರೋಪಿಗಳು ಮೊಬೈಲ್ ಸ್ವಿಚ್ ಆಫ್ ಮಾಡಿ ತಲೆಮರೆಸಿಕೊಂಡಿದ್ದಾರೆ ಎಂದು ಎನ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.