News Karnataka Kannada
Saturday, April 27 2024
ಮಂಗಳೂರು

ಮಣ್ಣಗುಡ್ಡದಲ್ಲಿ ಕಸ ಎಸೆದವರಿಂದ 4 ಸಾವಿರ ರೂ. ದಂಡ ವಸೂಲಿ

A fine of Rs 4,000 was imposed on those who threw garbage in Mangudde. Recovery
Photo Credit : News Kannada

ಮಂಗಳೂರು: ನಗರದ ಮಣ್ಣಗುಡ್ಡದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆದವರಿಂದ ಮಂಗಳೂರು ಮಹಾನಗರ ಪಾಲಿಕೆ 4000 ರೂಪಾಯಿ ದಂಡ ವಸೂಲಿ ಮಾಡಿದೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಎಂಸಿಸಿ ಆಯುಕ್ತರು, ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಹಾಕುವುದರಿಂದ ನಗರದ ಸ್ವಚ್ಛತೆ ಮತ್ತು ಸೌಂದರ್ಯ ಹಾಳಾಗುತ್ತಿದೆ. ಹೀಗಾಗಿ ಎಲ್ಲೆಂದರಲ್ಲಿ ಕಸ ಎಸೆಯುವ ಹಾಗೂ ಜಾಗೃತಿ ಮೂಡಿಸುವ ಸಲುವಾಗಿ ಸಾರ್ವಜನಿಕರಿಗೆ ದಂಡ ವಿಧಿಸಲು ನಿರ್ಧರಿಸಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಯಾರಾದರೂ ಕಸ ಎಸೆಯುವುದು ಕಂಡು ಬಂದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು