Categories: ಮಂಗಳೂರು

ಮಗುವಿನ ಹುಟ್ಟುಹಬ್ಬಕ್ಕೆ ಲಂಡನ್ ಉದ್ಯೋಗಿಯಿಂದ ಕುಡ್ಲದ ಆಶ್ರಮಕ್ಕೆ ಉಡುಗೊರೆ

ಮಂಗಳೂರು: ಮಕ್ಕಳ ಹುಟ್ಟುಹಬ್ಬವೆಂದರೆ ಧಾಂಧೂಂ ಎಂದು ಆಚರಿಸೋದು ಈಗಿನ ಟ್ರೆಂಡ್. ಕೇಕ್ ಕಟ್ಟಿಂಗ್, ತಿಂದು ಮಿಕ್ಕಿ ಎಸೆಯುವಷ್ಟು ಊಟೋಪಾಚಾರ ಮಾಡಿ ಸಿಕ್ಕಾಪಟ್ಟೆ ಖರ್ಚು ಮಾಡುತ್ತಾರೆ. ಆದರೆ ಇಲ್ಲೊಬ್ಬರು ತಮ್ಮ ಮಗುವಿನ ಮೊದಲ ವರ್ಷದ ಹುಟ್ಟುಹಬ್ಬವನ್ನು ಅನಾಥಾಶ್ರಮಕ್ಕೆ ವಸ್ತು ಪರಿಕರಗಳನ್ನು ನೀಡಿ ವಿಭಿನ್ನವಾಗಿ ಆಚರಿಸಿದ್ದಾರೆ.

ಹೌದು… ಕೇರಳ ಮೂಲದ, ಸದ್ಯ ಲಂಡನ್ ವಾಸಿ ಸಾಫ್ಟ್‌ವೇರ್ ಇಂಜಿನಿಯರ್ ಅಭಿಜಿತ್ ಎಂಬವರ ಮಗು ಕ್ರಿಶ್ ಅಭಿಜಿತ್ ನಾರಾಯಣ್ ಹುಟ್ಟುಹಬ್ಬ ಇತ್ತೀಚೆಗೆ ತಾನೇ ನಡೆದಿತ್ತು‌. ತಮ್ಮ ಮಗುವಿನ ಮೊದಲ ಹುಟ್ಟುಹಬ್ಬ ವಿಶಿಷ್ಟವಾಗಿ ನಡೆಯಬೇಕೆಂದು ಅಭಿಜಿತ್ – ವೀಣಾ ದಂಪತಿ ಅಂದ್ಕೊಂಡಿದ್ದಾರೆ. ಅದಕ್ಕಾಗಿ ಮಂಗಳೂರಿನ ಬಿಜೈನಲ್ಲಿರುವ ಸ್ನೇಹದೀಪ ಆಶ್ರಮಕ್ಕೆ ಅಗತ್ಯವಿರುವ ವಸ್ತು ಪರಿಕರಗಳನ್ನು ನೀಡಿದ್ದಾರೆ.

ವಾಷಿಂಗ್ ಮಿಷಿನ್, ಸ್ಯಾನಿಟರಿ ಪ್ಯಾಡ್, ಹಣ್ಣು-ಹಂಪಲು, ದಿನಸಿ ಸಾಮಾಗ್ರಿ, ಚಾಕಲೇಟ್ ಹೀಗೆ ಅಗತ್ಯ ವಸ್ತುಗಳನ್ನು ನೀಡಿದ್ದಾರೆ. ಅಭಿಜಿತ್ ಹೀಗೆ ಆಶ್ರಮಗಳಿಗೆ ವಸ್ತುಗಳನ್ನು ನೀಡಲು ತಮ್ಮ ಸ್ನೇಹಿತ ಶರಣ್ ರಾಜ್ ಕೆ.ಆರ್. ಅವರ ಸೇವಾ ಕಾರ್ಯವೇ ಸ್ಪೂರ್ತಿಯಂತೆ‌.

ಶರಣ್ ರಾಜ್ ತಮ್ಮ ಸೇವಾ ಚಟುವಟಿಕೆಗಳನ್ನು ಸೋಶಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಮಾಡುತ್ತಿದ್ದರು. ಇದರಿಂದಲೇ ಸ್ಪೂರ್ತಿ ಪಡೆದ ಅಭಿಜಿತ್ ತಮ್ಮ ಮಗುವಿನ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ್ದಾರೆ. ಇವರ ಈ ಕಾರ್ಯಕ್ಕೊಂದು ಹ್ಯಾಟ್ಸ್ಆಫ್ ಎನ್ನೋಣವೇ.

Chaitra Kulal

Recent Posts

ಅರವಿಂದ್ ಕೇಜ್ರಿವಾಲ್ ಗೆ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಏಳು ಹಂತದ ಲೋಕಸಭೆ ಚುನಾವಣೆಯ ಅಂತಿಮ ಹಂತದ ಮತದಾನವಾದ ಜೂನ್ 1ರವರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ…

14 mins ago

ಚಾಮರಾಜನಗರದಲ್ಲಿ ಉಡ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ

ಜಿಲ್ಲೆಯಲ್ಲಿ ವನ್ಯ ಪ್ರಾಣಿಗಳನ್ನು ಜೀವಂತವಾಗಿ ಸೆರೆ ಹಿಡಿದು ಸಾಗಾಟ ಮಾಡುವ ಜಾಲ ಕಾರ್ಯಾಚರಿಸುತ್ತಿರುವ ಶಂಕೆ ವ್ಯಕ್ತವಾಗಿದೆ. ಪ್ರಾಣಿಗಳನ್ನು ಬೇಟೆಯಾಡಿ ಮಾಂಸ…

26 mins ago

ಮೈಸೂರಿನಲ್ಲಿ ಪರಶುರಾಮ ಜಯಂತಿ ಕಾರ್ಯಕ್ರಮ

ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಪರಶುರಾಮ‌ ಜಯಂತಿ ಅಂಗವಾಗಿ ಚಾಮರಾಜಪುರಂನಲ್ಲಿರುವ ಬ್ರಾಹ್ಮಣ ಯುವ ವೇದಿಕೆ ಕಛೇರಿಯಲ್ಲಿ ಪರಶುರಾಮ ಜಯಂತಿಯನ್ನು…

35 mins ago

ಪಕ್ಷಿಗಳಿಗೆ ಆಹಾರ ನೀಡುತ್ತಿರುವ ಕೆಎಲ್‌ಇ ಸಂಸ್ಥೆಯ ವಿದ್ಯಾರ್ಥಿಗಳು

ವಿದ್ಯಾಕಾಶಿ ಧಾರವಾಡದಲ್ಲಿ ಕೆಎಲ್‌ಇ ಸಂಸ್ಥೆಯ ಬಿಬಿಎ ಕಾಲೇಜಿನ ವಿದ್ಯಾರ್ಥಿಗಳು ಪಕ್ಷಿಗಳಿಗೆ ಆಹಾರ ನೀಡುವ ಕೆಲಸ ಮಾಡುತ್ತಿದ್ದಾರೆ.

46 mins ago

ನರೇಂದ್ರ ದಾಭೋಲ್ಕರ್​ ಹತ್ಯೆ ಕೇಸ್: ಇಬ್ಬರಿಗೆ ಜೀವಾವಧಿ ಶಿಕ್ಷೆ, ಮೂವರು ಖುಲಾಸೆ

ಸುಮಾರು 11 ವರ್ಷಗಳ ನಂತರ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ನೀಡಿದೆ. ನ್ಯಾಯಾಲಯ ಇಬ್ಬರು ಆರೋಪಿಗಳನ್ನು…

1 hour ago

ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕಾಗಿ ವ್ಯಕ್ತಿಯ ಹತ್ಯೆ

ನಗರದಲ್ಲಿ ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ…

1 hour ago