ಬೆಳ್ತಂಗಡಿ: ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ವಾಹನವೊಂದು ಡಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾದ ಘಟನೆ ಧರ್ಮಸ್ಥಳ ಶಾಂತಿವನದ ಸಮೀಪ ಮಂಗಳವಾರ ನಡೆದಿದೆ.
ಅಪಘಾತಕ್ಕೀಡಾದ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಸ್ಥಳೀಯರ ಸಹಕಾರದೊಂದಿಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಯಾಳು 50ರಿಂದ 60ವರ್ಷ ಪ್ರಾಯದ ವ್ಯಕ್ತಿಯಾಗಿದ್ದು ಪ್ರಜ್ಞಾ ಹೀನ ಸ್ಥಿತಿಯಲ್ಲಿದ್ದು ಗಾಯಾಳುವಿನ ಬಗ್ಗೆ ಯಾವುದೇ ಮಾಹಿತಿಗಳು ಲಭ್ಯವಾಗಿಲ್ಲ.
ಡಿಕ್ಕಿ ಹೊಡೆದ ವಾಹನ ಚಾಲಕ ವಾಹನ ನಿಲ್ಲಿಸದೆ ಪರಾರಿಯಾಗಿದ್ದು ವಾಹನದ ಬಗ್ಗೆಯೂ ಯಾವುದೇ ಮಾಹಿತಿ ತಿಳಿದು ಬಂದಿಲ್ಲ ಘಟನೆಯ ಬಗ್ಗೆ ಬೆಳ್ತಂಗಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.