News Karnataka Kannada
Saturday, May 18 2024
ಮಂಗಳೂರು

ಸಿಡಿಲು ಬಡಿದು 10 ದಿನದ ಹಿಂದೆ ಮದುವೆಯಾಗಿದ್ದ ಯುವಕ ಮೃತ್ಯು

10 ದಿನದ ಹಿಂದಷ್ಟೇ ಮದುವೆಯಾಗಿದ್ದ ನವವಿವಾಹಿತ ಸಿಡಿಲು ಬಡಿದು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದಲ್ಲಿ ನಡೆದಿದೆ.
Photo Credit : NewsKarnataka

ಮಂಗಳೂರು: ಹತ್ತು ದಿನದ ಹಿಂದಷ್ಟೇ ಮದುವೆಯಾಗಿದ್ದ ನವವಿವಾಹಿತ ಸಿಡಿಲು ಬಡಿದು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದಲ್ಲಿ ನಡೆದಿದೆ.

ಸುಬ್ರಹ್ಮಣ್ಯ ಗ್ರಾಮದ ಪರ್ವತಮುಖಿ ನಿವಾಸಿ ಸೋಮಸುಂದರ್ (34) ಸಾವನ್ನಪ್ಪಿದ ದುರ್ದೈವಿ. ಸೋಮಸುಂದರ್ 10 ದಿನಗಳ ಹಿಂದಷ್ಟೇ ಮದುವೆಯಾಗಿ ಹೊಸ ಜೀವನಕ್ಕೆ ಕಾಲಿರಿಸಿದ್ದನು. ಸಂಜೆ ಸಮಯದಲ್ಲಿ ಮಳೆ ಸುರಿಯುತ್ತಿದ್ದ ಕಾರಣ ಅಂಗಳದಲ್ಲಿದ್ದ ಅಡಿಕೆಗಳನ್ನು ರಾಶಿ ಮಾಡುತ್ತಿದ್ದರು. ಈ ವೇಳೆ ಭಯಾನಕವಾಗಿ ಸಿಡಿಲು ಬಡಿದಿದೆ.

ತಕ್ಷಣ ಆತನನ್ನು ಸಮೀಪದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿತ್ತು. ಆದರೆ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ವ್ಯಕ್ತಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು