News Karnataka Kannada
Monday, May 06 2024
ಮಂಗಳೂರು

ಸುರತ್ಕಲ್ ಬಂಟರ ಸಂಘದಿಂದ “ಆಟಿದ ಪೊರ್ಲು” ಅಭಿನಂದನಾ ಕಾರ್ಯಕ್ರಮ

"Aatida Porlu" felicitation programme by Surathkal Bunts Association
Photo Credit : News Kannada

ಸುರತ್ಕಲ್: ಬಂಟರ ಸಂಘ  ಸುರತ್ಕಲ್ ಮತ್ತು ಮಹಿಳಾ ವೇದಿಕೆ, ಬಂಟರ ಸಂಘ ಸುರತ್ಕಲ್ ಸಹಯೋಗದಲ್ಲಿ ಆಟಿದ ಪೊರ್ಲು ಮತ್ತು ಅಭಿನಂದನಾ ಕಾರ್ಯಕ್ರಮ ಸುರತ್ಕಲ್ ಬಂಟರ ಸಂಘದ ಸಭಾಭವನದಲ್ಲಿ ಜರುಗಿತು.

ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಬಂಟರ ಸಂಘದ ಮಾಜಿ ಅಧ್ಯಕ್ಷ ಎಂ. ದೇವಾನಂದ ಶೆಟ್ಟಿ ಅವರು, “ಆಟಿ ತಿಂಗಳು ತುಳುವರಲ್ಲಿ ಅತ್ಯಂತ ಭಿನ್ನವಾದುದು. ನಮ್ಮ ಪೂರ್ವಜರು ಆಟಿ ತಿಂಗಳನ್ನು ಕಷ್ಟದಿಂದ ಕಳೆಯುತ್ತಿದ್ದರು. ಇಂದಿನ ಕಾಲದಲ್ಲೂ ಯುವಜನತೆ ಆಟಿ ತಿಂಗಳ ಆಚರಣೆ, ಸಂಪ್ರದಾಯವನ್ನು ಮರೆಯದೆ ಇರುವುದು ಶ್ಲಾಘನೀಯ” ಎಂದರು.

ಬಳಿಕ ಮಾತಾಡಿದ ಮುಲ್ಕಿ ಮೂಡಬಿದ್ರೆ ಕ್ಷೇತ್ರದ ಶಾಸಕ ಉಮಾನಾಥ್ ಎ ಕೋಟ್ಯಾನ್ ಅವರು, “ಆಟಿ ತಿಂಗಳ ಕಷ್ಟ, ವಿಶೇಷವಾದ ತಿಂಡಿ ತಿನಿಸು, ನಮ್ಮ ಹಿರಿಯರ ನೆನಪು ಎಲ್ಲವೂ ಸದಾ ನೆನಪಲ್ಲಿ ಉಳಿಯುವಂತದ್ದು. ಅದನ್ನು ಇಂದು ಮಾತ್ರವಲ್ಲ ಮುಂದಿನ ಪೀಳಿಗೆಯ ಮಕ್ಕಳೂ ಕೂಡಾ ತಿಳಿಯುವಂತಾಗಬೇಕು. ಆಟಿ ತಿಂಗಳ ತುಳುನಾಡಿನ ಆಚರಣೆಗಳು ಮುಂದಿನ ತಲೆಮಾರಿಗೂ ಹೀಗೆಯೇ ಉಳಿಯಬೇಕು” ಎಂದರು.

ಪುತ್ತೂರು ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಮಾತನಾಡಿ “ಬಂಟರ ಸಮಾಜ ಬಲಿಷ್ಠವಾದ ಸಮಾಜವಾಗಿದೆ. ಸಾಮಾಜಿಕವಾಗಿ ಗುರುತಿಸಲ್ಪಡುತ್ತಿರುವ ಬಂಟರ ಸಮಾಜ ಆಟಿದ ಪೊರ್ಲು ಎನ್ನುವಂತಹ ವಿಶಿಷ್ಟ ಕಾರ್ಯಕ್ರಮ ಹಮ್ಮಿಕೊಂಡಿದೆ. ಇದಕ್ಕಾಗಿ ಸುರತ್ಕಲ್ ಬಂಟರ ಸಂಘವನ್ನು ಅಭಿನಂದಿಸುತ್ತೇನೆ. ರಾಜ್ಯ ಸರಕಾರ ಚುನಾವಣೆ ಪೂರ್ವ ಪ್ರಣಾಳಿಕೆಯಲ್ಲಿ ಬಂಟ ಸಮಾಜಕ್ಕೆ 250 ಕೋಟಿ ರೂ ಮೀಸಲಿಟ್ಟಿದೆ. ಸಮಾಜದ ಪ್ರಮುಖರು ಬಂಟ ನಿಗಮ ಸ್ಥಾಪನೆಗೆ ಒತ್ತಾಯಿಸಬೇಕಾದ ಅಗತ್ಯವಿದೆ ಎಂದರು.

ವೇದಿಕೆಯಲ್ಲಿ ಕುವೆಂಪು ವಿಶ್ವವಿದ್ಯಾನಿಲಯ ಶಿವಮೊಗ್ಗದಿಂದ ಗೌರವ ಡಾಕ್ಟರೇಟ್ ಪುರಸ್ಕೃತರಾದ ಡಾ.ಎ. ಸದಾನಂದ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತಾಡಿದ ಅವರು, “ಬಿರುದು, ಸನ್ಮಾನದಿಂದ ಜವಾಬ್ದಾರಿ ಹೆಚ್ಚುತ್ತದೆ ಎನ್ನುವುದು ನನ್ನ ಭಾವನೆ. ನನ್ನನ್ನು ಇಲ್ಲಿಗೆ ಕರೆಸಿ ಗೌರವಿಸಿದ ಸುರತ್ಕಲ್ ಬಂಟರ ಸಂಘಕ್ಕೆ ಚಿರಋಣಿಯಾಗಿದ್ದೇನೆ. ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿರುವ ಸಂಘಟನೆ ಇನ್ನಷ್ಟು ಬೆಳೆದು ಹೆಮ್ಮರವಾಗಲಿ” ಎಂದರು.

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮಾತನಾಡಿ, “ಬಂಟರ ಸಮಾಜ ಬೇರೆ ಸಮಾಜಕ್ಕೆ ಮಾದರಿಯಾಗಿ ಬೆಳೆದಿದೆ. ನಾವು ಬಂಟ ನಿಗಮ ಬೇಕೆಂದು ಕೇಳುತ್ತಲೇ ಬಂದಿದ್ದೇವೆ. ಸದನದಲ್ಲಿ ಪುತ್ತೂರು ಶಾಸಕರು ಕೂಡಾ ಆ ಬಗ್ಗೆ ಧ್ವನಿ ಎತ್ತಿರುವುದು ಸಂತೋಷದ ವಿಷಯ. ಸರಕಾರ ನೀಡಿರುವ ಭರವಸೆಯನ್ನು ಕೂಡಲೇ ಈಡೇರಿಸಬೇಕು. ನಾವೇನು ಭಿಕ್ಷೆ ಕೇಳುತ್ತಿಲ್ಲ ನಮ್ಮ ಹಕ್ಕನ್ನು ಕೇಳುತ್ತಿದ್ದೇವೆ ಅಷ್ಟೇ. ಎಲ್ಲಾ ಸಮುದಾಯಕ್ಕೂ ಸಹಾಯ ಹಸ್ತ ಚಾಚುತ್ತಿರುವ ಸಮಾಜ ನಮ್ಮದು” ಎಂದರು.

ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವೈ. ಮಾತನಾಡಿ, “ಕೃಷಿ ವಿಷಯಕ್ಕೆ ನಾವು ಹೆಚ್ಚಿನ ಒತ್ತು ಕೊಡಬೇಕಾದ ಅಗತ್ಯವಿದೆ. ಎಲ್ಲರೂ ಇಂಜಿನಿಯರ್ ಗಳಾದಲ್ಲಿ ತಿನ್ನಲು ಏನೂ ಸಿಗಲಿಕ್ಕಿಲ್ಲ. ಹೀಗಾಗಿ ಕೃಷಿ ಸಂಪ್ರದಾಯವನ್ನು ನಮ್ಮ ಬಂಟ ಸಮಾಜ ಬಿಡಬಾರದು. ಸುರತ್ಕಲ್ ಬಂಟರ ಸಂಘ ಇತರ ಸಮಾಜವನ್ನು ಜೊತೆಗೆ ಕರೆದೊಯ್ಯುವ ಕೆಲಸ ಮಾಡುತ್ತಿದೆ. ನೊಂದವರ ಕಣ್ಣೀರು ಒರೆಸುವ ಸಮಾಜಮುಖಿ ಕೆಲಸ ಮಾಡುತ್ತಾ ಬಂದಿದೆ. ಇದಕ್ಕಾಗಿ ಅಭಿನಂದನೆ ಸಲ್ಲಿಸಬೇಕು” ಎಂದರು.

ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ ಸಮಾಜವನ್ನು ಕಟ್ಟಿ ಬೆಳೆಸುವ ಕಾರ್ಯ ನಿರಂತರವಾಗಿ ನಡೆಯಲಿ ಎಂದರು.

ಆಟಿ ಆಚರಣೆ ಕುರಿತು ಉಪನ್ಯಾಸಕಿ ಜಯಲಕ್ಷ್ಮಿ ಆರ್. ಶೆಟ್ಟಿ ಅವರು ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ನಿಟ್ಟೆ ವಿಶ್ವವಿದ್ಯಾನಿಲಯದ ಪ್ರಭಾರ ಮುಖ್ಯಸ್ಥೆ ಡಾ. ಸಾಯಿಗೀತಾ ಹೆಗ್ಡೆ, ಪತ್ರಕರ್ತ ಹಿರಿಯ ರಂಗಕರ್ಮಿ ಪರಮಾನಂದ ಸಾಲ್ಯಾನ್, ಸಂಗೀತ ನಿರ್ದೇಶಕ ಸತೀಶ್ ಸುರತ್ಕಲ್, ಸಮಾಜ ಸೇವಕ ಅಬ್ದುಲ್ ಆಜೀಜ್ ಸುರತ್ಕಲ್, ಕೃಷಿಕ ವೆಂಕಟೇಶ್ ಶೆಟ್ಟಿ ಚೇಳಾರ್ ಅವರನ್ನು ಸನ್ಮಾನಿಸಲಾಯಿತು.

ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು ಅಧ್ಯಕ್ಷತೆ ವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆಯನ್ನು ಸಲ್ಲಿಸಿದರು. ನಿಕಟಪೂರ್ವ ಅಧ್ಯಕ್ಷ ಸುಧಾಕರ್ ಎಸ್ ಪೂಂಜಾ ಮಾಜಿ ಅಧ್ಯಕ್ಷ ಉಲ್ಲಾಸ್ ಶೆಟ್ಟಿ ಪೆರ್ಮುದೆ, ಸಂಘದ ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಕಟ್ಲ, ಉಪಾಧ್ಯಕ್ಷ ಪುಷ್ಪರಾಜ ಶೆಟ್ಟಿ ಕುಡುಂಬೂರು, ಕೋಶಾಧಿಕಾರಿ ಅವಿನಾಶ್ ಶೆಟ್ಟಿ, ಜೊತೆ ಕಾರ್ಯದರ್ಶಿ ಸುಜೀರ್ ಶೆಟ್ಟಿ ಸೂರಿಂಜೆ, ಮಹಿಳಾ ವೇದಿಕೆ ಅಧ್ಯಕ್ಷೆ ಭವ್ಯ ಎ. ಶೆಟ್ಟಿ, ಕಾರ್ಯದರ್ಶಿ ಸುಜಾತ ಶೆಟ್ಟಿ ಕೃಷ್ಣಾಪುರ, ಉಪಾಧ್ಯೆಕ್ಷೆ ಸರೋಜ ಶೆಟ್ಟಿ, ಕೋಶಾಧಿಕಾರಿ ಜ್ಯೋತಿ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಲೋಕಯ್ಯ ಶೆಟ್ಟಿ ಸ್ವಾಗತಿಸಿದರು. ಲೀಲಾಧರ ಶೆಟ್ಟಿ ವಂದಿಸಿದರು. ಸುಧಾ ಶೆಟ್ಟಿ ಕಾರ್ಯಕ್ರಮ‌ ನಿರ್ವಹಿಸಿದರು.
ಕಾರ್ಯಕ್ರಮದಲ್ಲಿ ಪುರುಷರಿಗೆ ಮತ್ತು ಮಹಿಳೆಯರಿಗೆ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಬಳಿಕ ಸಂಘದ ಮಹಿಳೆಯರಿಂದ, ಮಕ್ಕಳಿಂದ ಜಾನಪದ ನೃತ್ಯ ನಡೆಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು