ಮಂಗಳೂರು: ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯ ಶಬ್ದಗಳಿಂದ ನಿಂದನೆಯನ್ನು ಖಂಡಿಸಿ ಎನ್ ಎಸ್ ಯುಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಅವರ ನೇತೃತ್ವದಲ್ಲಿ ಇಂದು(ಜ.16) ಮಂಗಳೂರು ನಗರ ಪೊಲೀಸ್ ಉಪ ಆಯುಕ್ತರಿಗೆ ದೂರನ್ನು ಸಲ್ಲಿಸಿದ್ದಾರೆ .
ಇದಕ್ಕೆ ಸ್ಪಂದನೆ ನೀಡಿದ ಪೊಲೀಸ್ ಉಪಾಯುಕ್ತರು, ಪ್ರಕರಣವನ್ನು ಸುರತ್ಕಲ್ ಠಾಣೆಗೆ ವರ್ಗಾಯಿಸಿ ಶೀಘ್ರವೇ ಆರೋಪಿಯನ್ನು ಬಂಧಿಸುತ್ತೆವೆ ಎಂದು ಹೇಳಿದ್ದಾರೆ.