News Karnataka Kannada
Saturday, April 13 2024
Cricket
ಮಂಗಳೂರು

ಕಾರು – ಬೈಕ್ ನಡುವೆ ಅಪಘಾತ : ಬೈಕ್ ಸವಾರ ಗಂಭೀರ

Accident between car and bike: Bike rider critical
Photo Credit : News Kannada

ಬಂಟ್ವಾಳ:  ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಕೊಡಂಗಾಯಿ ಮೈತ್ರೇಯಿ ಗುರುಕುಲದ ಬಳಿ ನಡೆದಿದೆ.

ಕಡಂಬು ನಿವಾಸಿಗಳಾದ ಸಿನಾನ್ ಮತ್ತು ಫೈಜಲ್ ಬೈಕ್ ಸವಾರರು ಎಂದು ಹೇಳಲಾಗಿದ್ದು, ವಾಹನಗಳ ಡಿಕ್ಕಿಯ ರಭಸಕ್ಕೆ ಬೈಕ್ ಸವಾರರೊಬ್ಬನ ತಲೆ ಕಾರಿನ ಗಾಜಿಗೆ ತಾಗಿ ಗಾಜು ಪುಡಿಪುಡಿಯಾಗಿ ಗಂಭೀರ ಗಾಯವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಕಾರು ಚಾಲಕ ಸುಳ್ಯ ಸಮೀಪದ ಕನಕಮಜಲು ನಿವಾಸಿ ಗೋಪಾಲಕೃಷ್ಣ ಎಂದು ಗುರುತಿಸಲಾಗಿದ್ದು, ತನ್ನ ಪುತ್ರಿಯನ್ನು ಮುಡಿಪು ನವೋದಯ ವಸತಿ ಶಾಲೆಗೆ ದಾಖಲಿಸಿ ವಾಪಾಸಾಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು