News Karnataka Kannada
Thursday, May 02 2024
ಮಂಗಳೂರು

ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಏರ್ ಇಂಡಿಯ ಎಕ್ಸ್‌ಪ್ರೆಸ್‌ ವಿಮಾನದಲ್ಲಿ ಗೌರವಾರ್ಪಣೆ

Air India Express pays tribute to Padma Shri Harekala
Photo Credit : News Kannada

ಮಂಗಳೂರು: ಏರ್ ಇಂಡಿಯ ಎಕ್ಸ್ ಪ್ರೆಸ್ ವಿಮಾನದಲ್ಲಿ ಹೊರಟಿದ್ದ ಅಕ್ಷರ ಸಂತ, ಪದ್ಮಶ್ರೀ ಹರೇಕಳ ಹಾಜಬ್ಬರನ್ನು ವಿಮಾನದ ಸಿಬ್ಬಂದಿ ಅಭಿನಂದಿಸಿ ಗೌರವಿಸಿದರು.

ಹರೇಕಳ ಹಾಜಬ್ಬ ಏರ್ ಇಂಡಿಯ ಎಕ್ಸ್ ಪ್ರೆಸ್ ವಿಮಾನದಲ್ಲಿ ಮಂಗಳೂರಿನಿಂದ ದಮ್ಮಾಮ್ ಗೆ ಹಿದಾಯ ಫೌಂಡೇಶನ್ ಜುಬೈಲ್ ಘಟಕದ ವತಿಯಂದ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಯಾಣಿಸುತ್ತಿದ್ದರು.

ಈ ವೇಳೆ ಅವರನ್ನು ಗುರುತಿಸಿದ ಏ‌ರ್ ಇಂಡಿಯ ಎಕ್ಸ್ ಪ್ರೆಸ್ ನ ಸಿಬ್ಬಂದಿ ವಿಮಾನದ ಕ್ಯಾಪ್ಟನ್ ನ ಗಮನಕ್ಕೆ ತಂದರು. ಕ್ಯಾಪ್ಟನ್ ವಿಮಾನದಲ್ಲಿರುವ ಪ್ರಯಾಣಿಕರಿಗೆ ಹಾಜಬ್ಬರನ್ನು ಪರಿಚಯಿಸುತ್ತಾ “ಶಿಕ್ಷಣ ರಂಗದಲ್ಲಿ ಅಪೂರ್ವ ಸೇವೆ ಸಲ್ಲಿಸಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ ನಮ್ಮ ವಿಮಾನದಲ್ಲಿ ಪ್ರಯಾಣಿಸುತ್ತಿರುವುದು ನಮಗೆಲ್ಲ ತುಂಬಾ ಸಂತೋಷ ತಂದಿದೆ. ಅವರಿಗೆ ಹೃದಯ ತುಂಬಿದ ಅಭಿನಂದನೆಗಳು ಎಂದರು.

ಪ್ರೇರಣಾ ಭಾಷಣಗಾರ ರಫೀಕ್ ಮಾಸ್ಟರ್ ಮಂಗಳೂರು ಹಾಗೂ ಉದ್ಯಮಿ ಫಾರೂಕ್ ಕನ್ಯಾನ ಪೋರ್ಟ್ ವೇ ಈ ವೇಳೆ ಹಾಜಬ್ಬರ ಜೊತೆಗಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು