ಮಂಗಳೂರು

ಆಳ್ವಾಸ್ ವಿರಾಸತ್-23ಕ್ಕೆ ‘ಸಪ್ತ ಮೇಳಗಳ ಮೆರುಗು: ಡಾ. ಎಂ.ಮೋಹನ್ ಆಳ್ವ

ಮೂಡಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ನಡೆಸುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ, 29ನೇ ವರ್ಷದ ‘ಆಳ್ವಾಸ್ ವಿರಾಸತ್ 2023’ ಡಿ.14ರಿಂದ 17ರವರೆಗೆ ಮೂಡಬಿದಿರೆಯ ಪುತ್ತಿಗೆ ಗ್ರಾಮದ ವಿವೇಕಾನಂದ ನಗರದ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ನಡೆಯಲಿದೆ.

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಶುಭಾಶೀರ್ವಾದೊಂದಿಗೆ ನಡೆಯುವ ವಿರಾಸತ್ ಅನ್ನು ದೇಶಕ್ಕಾಗಿ ದೇಹತ್ಯಾಗ ಮಾಡಿದ ವೀರಯೋದ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಅವರಿಗೆ ಅರ್ಪಣೆ ಮಾಡಲಾಗಿದೆ ಎಂದು ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ್ ಆಳ್ವ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಮೊದಲ ದಿನವಾದ ಡಿ.14ರಂದು ಸಂಜೆ 5.30ಕ್ಕೆ ರಾಜ್ಯಪಾಲರಿಗೆ ಗೌರವ ರಕ್ಷೆ ನಡೆಯಲಿದೆ. ಬಳಿಕ 5.45ಕ್ಕೆ ರಾಜ್ಯಪಾಲರಾದ ಥಾವರ್‌ ಚಂದ್ ಗೆಹ್ಲೋಟ್ ವಿರಾಸತ್ ಉದ್ಘಾಟಿಸಲಿದ್ದಾರೆ.

ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ. ವೀರೇಂದ್ರ ಹೆಗ್ಗಡೆ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು ಶಾಸಕ ಉಮಾನಾಥ ಎ.ಕೋಟ್ಯಾನ್, ಜಿಲ್ಲಾಧಿಕಾರಿ ಮುಲೈ ಮುಗಿಲನ್, ಮಾಜಿ ಸಚಿವ ಅಭಯಚಂದ್ರ ಜೈನ್, ಭಾರತ ಸೌಟ್ಸ್ ಗೈಡ್ಸ್ ರಾಜ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ, ಕರ್ನಾಟಕ ಚಿತ್ರಕಲಾ ಪರಿಷತ್ ಅಧ್ಯಕ್ಷ ಡಾ.ಬಿ.ಎಲ್. ಶಂಕರ್, ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್, ಎಂ.ಜಿ.ಆರ್‌.ಗ್ರೂಪ್ ಅಧ್ಯಕ್ಷ ಪ್ರಕಾಶ್ ಶೆಟ್ಟಿ, ಅದಾನಿ ಗ್ರೂಪ್ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ, ಉದ್ಯಮಿಗಳಾದ ಶಶಿಧರ ಶೆಟ್ಟಿ ಬರೋಡ, ಪ್ರಸನ್ನ ಶೆಟ್ಟಿ ಬೆಂಗಳೂರು, ರವೀಂದ್ರನಾಥ ಆಳ್ವ ಮಂಗಳೂರು, ರವಿಶಂಕರ್‌ ಶೆಟ್ಟಿ ಬಂಟ್ವಾಳ, ಮುಸ್ತಫಾ ಎಸ್.ಎಂ, ಪ್ರವೀಣ್ ಕುಮಾರ್, ಶ್ರೀಪತಿ ಭಟ್ ಮೂಡಬಿದಿರೆ, ಪ್ರಮುಖರಾದ ಜಯಶ್ರೀ ಅಮರನಾಥ ಶೆಟ್ಟಿ ಮೂಡುಬಿದಿರೆ, ಪುತ್ತಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕು.ರಾಧಾ ಉಪಸ್ಥಿತರಿರಲಿದ್ದಾರೆ ಎಂದರು.

ಸಂಜೆ 6:35ಕ್ಕೆ ಆಳ್ವಾಸ್ ವಿರಾಸತ್‌ನ ಭವ್ಯ ಸಾಂಸ್ಕೃತಿಕ ಮೆರವಣಿಗೆ ನಡೆಯಲಿದೆ. 100ಕ್ಕಿಂತಲೂ ಅಧಿಕ ದೇಶೀಯ ಜಾನಪದ ಕಲಾ ತಂಡಗಳ 3 ಸಾವಿರಕ್ಕೂ ಮಿಕ್ಕಿದ ಕಲಾವಿದರಿಂದ ವೈವಿಧ್ಯಮಯ ಭವ್ಯ ಸಾಂಸ್ಕೃತಿಕ ಮೆರವಣಿಗೆ ನಡೆಯಲಿದೆ. ಭಜನೆಗಳು, ಪುಷ್ಪಪಲ್ಲಕ್ಕಿಗಳು, ರಾತ್ರಿ 8:05ಕ್ಕೆ ವೇದಘೋಷಗಳು, ಮಂಗಳವಾದ್ಯಗಳೊಂದಿಗೆ ವಿಘ್ನನಿವಾರಕ ವಿನಾಯಕ, ಸರಸ್ವತಿ, ಶ್ರೀ ಲಕ್ಷ್ಮೀ ಹನುಮಂತ, ಶ್ರೀರಾಮ, ಶ್ರೀಕೃಷ್ಣಾದಿ ಆರೂಢ ದೇವರ ಸಾಂಸ್ಕೃತಿಕ ರಥ ಸಂಚಲನ ಮತ್ತು ರಥಾರತಿ ನಡೆಯಲಿದೆ.

ಸಾಂಸ್ಕೃತಿಕ ಕಾರ್ಯಕ್ರಮಗಳು: ಡಿ.15ರಂದು ಸಂಜೆ 6 ರಿಂದ 8ರ ವರೆಗೆ ಚಲನಚಿತ್ರ ಖ್ಯಾತ ಹಿನ್ನೆಲೆ ಗಾಯಕ ಬೆನ್ನಿ ದಯಾಲ್ ಅವರಿಂದ ‘ಗಾನ ವೈಭವ’ ಇರಲಿದೆ. ಡಿ. 16ರಂದು ಚಲನಚಿತ್ರ ಖ್ಯಾತ ಹಿನ್ನೆಲೆ ಗಾಯಕಿ ಶ್ರೇಯಾ ಘೋಷಾಲ್
ಅವರಿಂದ ‘ಭಾವ ಲಹರಿ’ ನಡೆಯಲಿದೆ. ಎರಡೂ ದಿನಗಳೂ ಸಂಜೆ 5:45ಕ್ಕೆ ದ್ವೀಪ ಪ್ರಜ್ವಲನ ಹಾಗೂ ಕಲಾವಿದರಿಗೆ ಸಾಂಪ್ರದಾಯಿಕ ಸ್ವಾಗತ ಇರಲಿದೆ. ಡಿ.17ರಂದು ಸಂಜೆ 5:15ರಂದು ಆಳ್ವಾಸ್ ವಿರಾಸತ್-2023 ಪ್ರಶಸ್ತಿ ಪ್ರದಾನ ನಡೆಯಲಿದೆ. ಈ ಬಾರಿ ಡಾ. ಮೈಸೂರು ಮಂಜುನಾಥ್, ಡಾ. ಪ್ರವೀಣ್, ಗೋಡ್ಕಿಂಡಿ ಹಾಗೂ ವಿಜಯ್ ಪ್ರಕಾಶ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಬಳಿಕ ಸಂಜೆ 6:30ಕ್ಕೆ ಡಾ. ಮೈಸೂರು ಮಂಜುನಾಥ್ ಮತ್ತು ಡಾ.ಪ್ರವೀಣ, ಗೋಡ್ಕಿಂಡಿ ಮತ್ತು ವಿಜಯ್ ಪ್ರಕಾಶ್ ಅವರಿಂದ ‘ತಾಳ-ವಾದ್ಯ- ಸಂಗೀತ’ ನಡೆಯಲಿದೆ. ರಾತ್ರಿ 7:30ಕ್ಕೆ ಚಲನಚಿತ್ರ ಖ್ಯಾತ ಹಿನ್ನೆಲೆ ಗಾಯಕ ವಿಜಯ್ ಪ್ರಕಾಶ್ ಅವರಿಂದ ಸಂಗೀತ ರಸ ಸಂಜೆ ನಡೆಯಲಿದೆ. 9.30ಕ್ಕೆ ಆಳ್ವಾಸ್ ಸಾಂಸ್ಕೃತಿಕ ವೈಭವ ಇರಲಿದೆ.

ವಿವಿಧ ಮೇಳಗಳ ಆಕರ್ಷಣೆ: ಈ ಬಾರಿಯ ಆಳ್ವಾಸ್ ವಿರಾಸತ್‌ನಲ್ಲಿ ಬೆಳಿಗ್ಗೆ 9ರಿಂದ ರಾತ್ರಿ 10 ಗಂಟೆಯವರೆಗೆ ಅನ್ವೇಷಣಾತ್ಮಕ ಕೃಷಿಕ ಶತಾಯುಷಿ ಮಿಜಾರುಗುತ್ತು ಆನಂದ ಆಳ್ವ ಸ್ಮರಣಾರ್ಥ ಕೆ.ಅಮರನಾಥ ಶೆಟ್ಟಿ (ಕೃಷಿಸಿರಿ) ಆವರಣದಲ್ಲಿ ಕೃಷಿ ಮೇಳ ನಡೆಯಲಿದೆ. ಈ ಬಾರಿ ಕೃಷಿ ಮೇಳದಲ್ಲಿ ಹಣ್ಣು ತರಕಾರಿ, ಬೀಜಗಳು, ನರ್ಸರಿಗಳು, ಸಾವಯವ ಹಾಗೂ ರಾಸಾಯನಿಕ ಗೊಬ್ಬರಗಳು, ನೀರು ನೆಲಗಳಲ್ಲಿ ಬೆಳೆಯುವ ವಿವಿಧ ಸಸ್ಯ ಪ್ರಭೇದಗಳು, ಕೃಷಿ ಉಪಕರಣ- ಯಂತ್ರಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳು ಇರಲಿವೆ. ವಿವಿಧ ಕೃಷಿ ಸಸ್ಯ ಪ್ರಭೇದಗಳ ಬೀಜ, ಅವುಗಳನ್ನು ಬೆಳೆಸಲು ಬೇಕಾದ ಯಂತ್ರ-ತಾಂತ್ರಿಕ ಸಲಕರಣೆಗಳು, ಕೃಷಿ ಉತ್ಪನ್ನಗಳು ಈ ಬಾರಿಯ ವಿಶೇಷ ಆಕರ್ಷಣೆಯಾಗಿರಲಿದೆ.

ಆಹಾರ ಮೇಳ: ಈ ಬಾರಿಯ ಆಳ್ವಾಸ್ ವಿರಾಸತ್‌ನಲ್ಲಿ ಆಹಾರ ಮೇಳದಲ್ಲಿ ಹೊಟ್ಟೆಗೆ ಹಿಟ್ಟು ಮಾತ್ರವಲ್ಲ, ಕಣ್ಣಿಗೆ ಸೌಂದರ್ಯ, ನಾಸಿಕಕ್ಕೆ ಕಂಪು, ಬಾಯಲ್ಲಿ ನೀರೂರಿಸುವ ರುಚಿಗಳಿವೆ. ತುಳುನಾಡಿನ ಪರಂಪರೆಯಿಂದ ಹಿಡಿದು, ಅಪ್ಪಟ ದೇಸೀಯ ತಿನಿಸು, ಇಂದಿನ ಫಾಸ್ಟ್‌ಫುಡ್ ವರೆಗಿನ ಆಹಾರ ವೈವಿಧ್ಯಗಳು ಲಭ್ಯ. ನಾಲಗೆಯಲ್ಲಿ ಖಾರ, ಹುಳಿ, ಉಪ್ಪು, ಸಿಹಿ…ಗಳ ಸಂಗಮ. ವಿಭಿನ್ನ ಆಹಾರ ಹಾಗೂ ಆಹಾರೋತ್ಪನ್ನಗಳ ಪ್ರದರ್ಶನ ಮತ್ತು ಮಾರಾಟವೂ ಇದೆ.

ಕರಕುಶಲ ಮತ್ತು ಪ್ರಾಚ್ಯವಸ್ತು ಪ್ರದರ್ಶನ ಮೇಳ: ನಮ್ಮ ಸಂಸ್ಕೃತಿ ಮತ್ತು ಪರಂಪರೆಯು ಅಮೂರ್ತ ಹಾಗೂ ಮೂರ್ತ ರೂಪದಲ್ಲಿ ಹಾಸು ಹೊಕ್ಕಾಗಿರುತ್ತದೆ. ಸಂಸ್ಕೃತಿಯು ಅಮೂರ್ತವಾಗಿ ನಮ್ಮನ್ನು ಆವರಿಸಿದ್ದರೆ, ಪರಂಪರೆಯು ಮೂರ್ತ ರೂಪದಲ್ಲಿ, ಭೌತಿಕ ಸೌಂದರ್ಯದಲ್ಲಿ ಮೈದಳೆಯುತ್ತವೆ. ಅಂತಹ ಪಾರಂಪರಿಕ ಸೌಂದರ್ಯವನ್ನು ಪಂಚೇಂದ್ರೀಯಗಳ ಮೂಲಕ ಅನುಭವಿಸುವುದೂ ಜ್ಞಾನಾರ್ಜನೆ. ಇಂತಹ ಕರಕುಶಲ ಮತ್ತು
ಪ್ರಾಚ್ಯವಸ್ತುಗಳ ಮೇಳವು ವಿರಾಸತ್‌ನ ಸೊಬಗು. ದೇಶದ ಈಶಾನ್ಯ, ಉತ್ತರ, ಪೂರ್ವ ಸೇರಿದಂತೆ ಅಷ್ಟದಿಕ್ಕುಗಳಲ್ಲಿನ ರಾಜ್ಯಗಳ ಸುಮಾರು 100ಕ್ಕೂ ಹೆಚ್ಚು ಮಳಿಗೆಗಳಲ್ಲಿ ಪ್ರದರ್ಶನ ಇರಲಿದೆ.

ಫಲಪುಷ್ಪ ಮೇಳ, ಚಿತ್ರಕಲಾಮೇಳ, ಛಾಯಾಚಿತ್ರ ಪ್ರದರ್ಶನ, ಕಲಾಕೃತಿಗಳ ಪ್ರದರ್ಶನ, ಸ್ಕೌಟ್ ಗೈಡ್ಸ್ ಸಾಹಸಮಯ ಚಟುವಟಿಕೆ ಕೇಂದ್ರ ಇರಲಿದೆ. ಎಲ್ಲರಿಗೂ ಉಚಿತ ಪ್ರವೇಶ ಇರಲಿದ್ದು 40 ಸಾವಿರಕ್ಕೂ ಹೆಚ್ಚು ಆಸನ, ಪಾರ್ಕಿಂಗ್ ವ್ಯವಸ್ಥೆ ಇರಲಿದೆ. ಪ್ರತಿನಿತ್ಯ 1 ಲಕ್ಷ ಜನರು ವಿರಾಸತ್ ನಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

Ashika S

Recent Posts

ಅಮೇರಿಕಾ ಪ್ರಜೆ ಸ್ಯಾಮ್ ತುಳು ಭಾಷ ಪ್ರೇಮಕ್ಕೆ ತುಳುವರೇ ಫಿದಾ

ಅಮೇರಿಕಾದ ಪ್ರಜೆಯೊಬ್ಬರು ತುಳು ಭಾಷೆಗೆ ಫಿದಾ ಆಗಿ ತುಳುವರ ಸಂಸ್ಕೃತಿ ಆರಾಧನೆ ಕಲಿಯಲೆಂದೇ ಅಮೇರಿಕಾದಿಂದ ಮಂಗಳೂರಿಗೆ ಹಾರಿ ಬಂದಿದ್ದಾರೆ.

14 mins ago

ಏರ್‌ ಇಂಡಿಯಾ ವಿಮಾನಕ್ಕೆ ಬಾಂಬ್‌ ಬೆದರಿಕೆ : ಟಿಶ್ಯೂ ಪೇಪರ್‌ನಲ್ಲಿತ್ತು ಸಂದೇಶ

ಶಾಲೆಗಳ ಬಾಂಬ್‌ ಬೆದರಿಕೆ ಬೆನ್ನಲ್ಲೆ ಇದೀಗ ಏರ್‌ ಇಂಡಿಯಾ ವಿಮಾನದಲ್ಲಿ ಬಾಂಬ್‌ ಬೆದರಿಕೆ ಹಾಕಲಾಗಿದ್ದು ಟಾಯ್ಲೆಟ್​ನಲ್ಲಿದ್ದ ಟಿಶ್ಯೂ ಪೇಪರ್‌ನಲ್ಲಿ ಬೆದರಿಕೆ…

45 mins ago

ಸಾಕು ನಾಯಿ ವಿಚಾರಕ್ಕೆ ಮಾಲೀಕನಿಗೆ ಐವರಿಂದ ಹಲ್ಲೆ: ಆರೋಪಿಗಳು ಅರೆಸ್ಟ್‌

ಸಾಕು ನಾಯಿ ವಿಚಾರಕ್ಕೆ ಏಕಾಏಕಿ ಐವರು ನಾಯಿ ಮತ್ತು ಮಾಲೀಕನ ಮೇಲೆ ಹಲ್ಲೆ ನಡೆಸಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ. ಈ…

1 hour ago

ನಿವೃತ್ತಿ ಬಗ್ಗೆ ವಿರಾಟ್ ಕೊಹ್ಲಿ ಬಿಚ್ಚುಮಾತು: ಫ್ಯಾನ್ಸ್​ ಶಾಕ್!

ಉತ್ತಮ ನಿರೀಕ್ಷೆಯೊಂದಿಗೆ ಐಪಿಎಲ್-2024 ಅಭಿಯಾನ ಆರಂಭಿಸಿದ ರಾಯಲ್ ಚಾಲೆಂಜರ್ಸ್​ ಬೆಂಗಳೂರು (ಆರ್‌ಸಿಬಿ) ತನ್ನ ಮೊದಲ ಪಂದ್ಯದಲ್ಲೇ ಸೋಲಿನಿಂದ ಲೀಗ್ ಪ್ರಾರಂಭಿಸಿತು.…

1 hour ago

ಬಾತ್​ ರೂಂನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆ !

ನಗರದಲ್ಲಿ​ ಯುವತಿಯೊಬ್ಬಳ ಅನುಮಾನಾಸ್ಪದ ಸಾವು ಎಲ್ಲರನ್ನು ಬೆಚ್ಚಿ ಬೀಳಿಸಿದೆ. 21 ವರ್ಷ ವಯಸ್ಸಿನ ಪ್ರಭುದ್ಧ ಎಂಬ ಯುವತಿ ಸಾವನ್ನಪ್ಪಿದ್ದಾಳೆ.

2 hours ago

ಅಂಜಲಿ‌ ಕೊಲೆ‌ ಕೇಸ್‌ ನಲ್ಲಿ ಕರ್ತವ್ಯ ಲೋಪ : ಇನ್ಸ್‌ಪೆಕ್ಟರ್, ಮಹಿಳಾ ಪೇದೆ ಅಮಾನತು

ಅಂಜಲಿ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ, ಬೆಂಡಿಗೇರಿ ಪೊಲೀಸ್‌ ಇನ್ಸ್‌ಪೆಕ್ಟರ್ ಸೇರಿ ಓರ್ವ ಸಿಬ್ಬಂದಿಯನ್ನು ಪೊಲೀಸ್ ಕಮೀಷನ‌ರ್ ಅಮಾನತು ಮಾಡಿ ಆದೇಶ…

2 hours ago