News Karnataka Kannada
Saturday, May 18 2024
ಮಂಗಳೂರು

ಪಶ್ಚಿಮ ವಲಯ ಡಿಐಜಿಪಿ ಆಗಿ ಅಮಿತ್‌ ಸಿಂಗ್‌ ಅಧಿಕಾರ ಸ್ವೀಕಾರ

Amit Singh takes charge as DIGP, Western Zone
Photo Credit : News Kannada

ಮಂಗಳೂರು: ಪಶ್ಚಿಮ ವಲಯ ಡಿಐಜಿಪಿ ಆಗಿ ಐಪಿಎಸ್ ಅಧಿಕಾರಿ ಅಮಿತ್ ಸಿಂಗ್ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್‌ ಅವರು ಅಮಿತ್‌ ಸಿಂಗ್‌ ಅವರನ್ನು ಬರಮಾಡಿಕೊಂಡರು.

ಅಮಿತ್‌ ಸಿಂಗ್‌ ಅವರು ಮಂಗಳೂರು ಮತ್ತು ಪುತ್ತೂರಿನಲ್ಲಿ ಎಎಸ್‌ಪಿಯಾಗಿ, ಹಾಸನ ಮತ್ತು ಕಲಬುರ್ಗಿ ಜಿಲ್ಲೆಗಳಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು.ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ ನಾಲ್ಕು ವರ್ಷ ಕಾರ್ಯನಿರ್ವಹಿಸಿದ್ದರು.

ಅಧಿಕಾರ ಸ್ವೀಕರಿಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಮಾದಕ ಪದಾರ್ಥ ಮಾರಾಟ ದಂಧೆ, ಕೋಮು ದ್ವೇಷ ಹರಡುವಿಕೆ ನಿಗ್ರಹಕ್ಕೆ ಆದ್ಯತೆ ನೀಡುತ್ತೇನೆ. ಸೈಬರ್ ಅಪರಾಧ ಚಟುವಟಿಕೆ ನಿಯಂತ್ರಣಕ್ಕೂ ಹೆಚ್ಚಿನ ನಿಗಾ ವಹಿಸಲಾಗುವುದು’ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು