News Karnataka Kannada
Tuesday, April 30 2024
ಮಂಗಳೂರು

ಪ್ರವೀಣ್ ನೆಟ್ಟಾರ್ ಹಂತಕರಿಗೆ ಮತ್ತೊಮ್ಮೆ ಎಚ್ಚರಿಕೆ ಸಂದೇಶ

Another warning message to Praveen Nettar's killers
Photo Credit : Twitter

ಸುಳ್ಯ: ಬೆಳ್ಳಾರೆಯ ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರುಹತ್ಯೆ ಪ್ರಕರಣದ ಆರೋಪಿಗಳು ಶರಣಾಗಬೇಕು ಎನ್ನುವ ಎಚ್ಚರಿಕೆಯ ಸಂದೇಶವನ್ನು ಸುಳ್ಯದಲ್ಲಿ ಮತ್ತೊಮ್ಮೆ ಎನ್‌ಐಎ (NIA) ಹೊರಡಿಸಿದೆ. ಇದು ತಲೆಮರೆಸಿಕೊಂಡಿರುವ ಹಂತಕರಿಗೆ ಎರಡನೇ ಎಚ್ಚರಿಕೆಯ ಸಂದೇಶವಾಗಿದೆ.

ಈ ಎಚ್ಚರಿಕೆಗೂ ಬಗ್ಗದಿದ್ದರೆ ಮೂರನೇಯ ಎಚ್ಚರಿಕೆಯ ಸಂದೇಶವನ್ನು ಹೊರಡಿಸಲಾಗುತ್ತದೆ. ಆ ಎಚ್ಚರಿಕೆಯ ಸಂದೇಶದಲ್ಲೂ ಶರಣಾಗದೆ ಹೋದರೆ ತಲೆಮರೆಸಿಕೊಂಡಿರುವ ಆರೋಪಿಗಳ ಆಸ್ತಿಪಾಸ್ತಿಗಳನ್ನು ಎನ್‌ಐಎ ಮುಟ್ಟುಗೋಲು ಹಾಕಿಕೊಳ್ಳಲಿದೆ ಅನ್ನುವ ಮಾಹಿತಿ ಸಿಕ್ಕಿದೆ. ಆಗಸ್ಟ್‌ 18ರೊಳಗೆ ಶರಣಾಗಲೇಬೇಕು ಎಂದು ಸೂಚಿಸಿದೆ.

ಈ ಹಿಂದೆ ಜೂ.30ರೊಳಗೆ ಶರಣಾಗಬೇಕು. ಇಲ್ಲದೇ ಹೋದಲ್ಲಿ ಅವರ ಮನೆಯನ್ನು ಜಪ್ತಿ ಮಾಡುವುದಾಗಿ ಎನ್‌ಐಎ(NIA) ಅಧಿಕಾರಿಗಳು ಧ್ವನಿ ವರ್ಧಕದ ಮೂಲಕ ತಿಳಿಸಿದ್ದರು. ಆದರೆ ಇದುವರೆಗೆ ಪ್ರವೀಣ್ ನೆಟ್ಟಾರು ಹಂತಕರು ಶರಣಾಗಿರಲಿಲ್ಲ. ಇದಕ್ಕೆ ಸಂಬಂಧಿಸಿದಂತೆ ಎರಡು ವಾರಗಳ ಹಿಂದೆ ಎನ್‌ಐಎ ಅಧಿಕಾರಿಗಳು ಸುಳ್ಯ ನಗರದಲ್ಲಿ ಸಾರ್ವಜನಿಕವಾಗಿ ಧ್ವನಿವರ್ಧಕದ ಮೂಲಕ ಅನೌನ್ಸ್‌ ಮಾಡುತ್ತಿದ್ದು, ಆರೋಪಿಗಳ ಸುಳಿವು ಕೊಟ್ಟಲ್ಲಿ ನಗದು ಬಹುಮಾನವನ್ನು ನೀಡಲಾಗುವುದು ಎಂದು ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ.

ಸುಳ್ಯದ (Sullia) ಕಲ್ಲುಮುಟ್ಲುನಲ್ಲಿ ವಾಸವಿದ್ದ ಆರೋಪಿ ಉಮ್ಮರ್ ಫಾರೂಕ್ ಅವರ ಮನೆಗೂ ಹೋಗಿ ನ್ಯಾಯಾಲಯದ ಆದೇಶ ಪ್ರತಿಯನ್ನು ಅಂಟಿಸಿ ಬರಲಾಗಿದೆ. ಜೊತೆಗೆ ಬೆಳ್ಳಾರೆಯಲ್ಲಿಯೂ ಧ್ವನಿವರ್ಧಕದ ಮೂಲಕ ಎನ್‌ಐಎ ನ್ಯಾಯಾಲಯದ ಆದೇಶವನ್ನು ಉದ್ಘೋಷಣೆ ಮಾಡಿ ಆರೋಪಿ ಮುಸ್ತಫರವರ ಮನೆಗೂ ಹೋಗಿ ಆದೇಶ ಪ್ರತಿ ಅಂಟಿಸಿ ಬಂದಿದ್ದರು. ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ(Bellare) ಸಮೀಪ ಪ್ರವೀಣ್ ನೆಟ್ಟಾರು ಅವರನ್ನು ಭೀಕರವಾಗಿ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಲಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು