News Karnataka Kannada
Wednesday, April 17 2024
Cricket
ಮಂಗಳೂರು

ಫಾದರ್‌ ಮುಲ್ಲರ್‌ ಸಂಸ್ಥೆಯಲ್ಲಿ ಮಾದಕ ದ್ರವ್ಯ  ವಿರೋಧಿ ದಿನ

'Anti-Misuse and Trafficking Day 2023'
Photo Credit : News Kannada

ಮಂಗಳೂರು: ಫಾದರ್‌ ಮುಲ್ಲರ್‌ ಸಂಸ್ಥೆಯಲ್ಲಿ ಮಾದಕ ದ್ರವ್ಯ  ವಿರೋಧಿ ದಿನ ಆಚರಿಸಲಾಯಿತು.  ಸಭೆಯನ್ನು ಉದ್ದೇಶಿಸಿ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, “ವಿಶ್ವ ಮಾದಕ ದ್ರವ್ಯ ಸಮಸ್ಯೆಯು ಮಾನವಕುಲ ಎದುರಿಸುತ್ತಿರುವ ಅತ್ಯಂತ ಸವಾಲಿನ ಸಮಸ್ಯೆಯಾಗಿದೆ, ಒಬ್ಬ ವ್ಯಕ್ತಿಯು ಮಾದಕ ದ್ರವ್ಯಗಳಿಂದ ಸಂಪೂರ್ಣವಾಗಿ ನಾಶವಾಗುತ್ತಾನೆ,  ಆತನ ಕುಟುಂಬವು  ನರಳುತ್ತದೆ, ಇಂತಹ ದುಷ್ಚಟಗಳನ್ನು ತಡೆಯಲು ಅಧಿಕಾರಿಗಳು, ಪೊಲೀಸರೊಂದಿಗೆ ಸಾರ್ವಜನಿಕರು ಸಹಕರಿಸಬೇಕು ಎಂದರು.

ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ನಿರ್ದೇಶಕ ಫಾದರ್ ರಿಚರ್ಡ್ ಅಲೋಶಿಯಸ್ ಕೊಯೆಲ್ಹೋ  ಮಾತನಾಡಿ, ಮಾದಕ ದ್ರವ್ಯದ ಹಾವಳಿ ಕೃತಕ ಸಂತೋಷವಾಗಿದ್ದು ಅದು ಕತ್ತಲೆಗೆ ದೂಡುತ್ತದೆ ಎಂದರು.

ವಿದ್ಯಾರ್ಥಿಗಳು ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನದಂದು ಪ್ರತಿಜ್ಞೆ ಸ್ವೀಕರಿಸಿದರು ಮತ್ತು ಹೊಸದಾಗಿ ನೇಮಕಗೊಂಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂಪಿ ಐಎಎಸ್ ಪ್ರತಿಜ್ಞೆ ಮಾಡಿದರು.

ಸರಕಾರ ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಸನ್ಮಾನಿಸಲಾಯಿತು. ಎಂಎಲ್ ಸಿ ಹರೀಶ್ ಕುಮಾರ್, ಮಾಜಿ ಎಂಎಲ್ ಸಿ ಐವನ್ ಡಿಸೋಜಾ ಮತ್ತಿತರರು ಉಪಸ್ಥಿತರಿದ್ದರು.

ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ನಿರ್ದೇಶಕ ಫಾದರ್ ರಿಚರ್ಡ್ ಅಲೋಶಿಯಸ್ ಕೊಯೆಲೋ ಸ್ವಾಗತಿಸಿ, ಡಾ.ಹರೀಶ್ ಗೌಡ ವಂದಿಸಿದರು, ಡಾ.ಶಿವಶಂಕರ ಕಾರ್ಯಕ್ರಮ ನಿರೂಪಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು