Categories: ಮಂಗಳೂರು

ಮಂಗಳೂರು: ಮಳಲಿ ಮಸೀದಿಯ ಪ್ರಕರಣ- ನ್ಯಾಯಾಲಯದ ತೀರ್ಪಿನ ವಿರುದ್ಧ ಮೇಲ್ಮನವಿ

ಮಂಗಳೂರು: ಮಳಲಿಪೇಟೆ ಮಸೀದಿಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಮೂರನೇ ಸಿವಿಲ್ ಮತ್ತು ಜೆಎಂಎಫ್ ಸಿ ನ್ಯಾಯಾಲಯವು ಬುಧವಾರ ನೀಡಿದ ತೀರ್ಪಿನ ವಿರುದ್ಧ ರಾಜ್ಯ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಬಿ ಎ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ವಕ್ಫ್ ಕಾಯಿದೆ ಪ್ರಕಾರ ಸಂಬಂಧಿಸಿದ ಯಾವುದೇ ವಿವಾದ ವಿಚಾರ ಸಮಸ್ಯೆ ಅಥವಾ ಇತರ ಸಂಗತಿಗಳ ಬಗ್ಗೆ ಸಿವಿಲ್ ಕಂದಾಯ ನ್ಯಾಯಾಲಯ ಮತ್ತಿತರ ಪ್ರಾಧಿಕಾರದಲ್ಲಿ ಯಾವುದೇ ದಾವೆ ಹೂಡುವಂತಿಲ್ಲ , ಕಲಾಪ ನಡೆಸುವಂತಿಲ್ಲ ಅದರಂತೆ ಮಳಲಿ ಮಸೀದಿ ವಿಚಾರಕ್ಕೆ ಸಂಬಂಧಿಸಿ ಸ್ಥಳೀಯರು ಮೂರನೇ ಸಿವಿಲ್ ಮತ್ತು ಜೆಎಂಎಫ್ ಸಿ ನ್ಯಾಯಾಲಯದ ಮೊರೆ ಹೋದಾಗ ಮಸೀದಿಯ ಪರ ವಕೀಲರು ಇದನ್ನು ಪ್ರಶ್ನಿಸಿ ಮಧ್ಯಂತರ ಅರ್ಜಿಯನ್ನು ಸಲ್ಲಿಸಿದ್ದರು ಆದರೆ ಬುಧವಾರ ಮಂಗಳೂರು ನ್ಯಾಯಾಲಯವು ಆಸ್ತಿಯ ಸಂಬಂಧಿಸಿದಂತೆ ಸಿವಿಲ್ ನ್ಯಾಯಾಲಯ ವಿಚಾರಣೆ ನಡೆಸಬಹುದು ಎಂದು ತಿಳಿಸಿದೆ. ಹಾಗಾಗಿ ಈ ಬಗ್ಗೆ ಕಾನೂನು ತಜ್ಞರ ಸಲಹೆಯನ್ನು ಪಡೆದು ಮತ್ತು ರಾಜ್ಯ ವಕ್ಫ್ ಬೋರ್ಡ್ ನ ಜೊತೆ ಚರ್ಚೆ ನಡೆಸಿ ಹಿಂದಿನ ತೀರ್ಪನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸಲಾಗುವುದು ಎಂದು ತಿಳಿಸಿದ್ದಾರೆ.

ಮಳಲಿ ಮಸೀದಿಗೆ ಸಂಬಂಧಿಸಿ ಮಂಗಳೂರು ಮೂರನೇ ಸಿವಿಲ್ ಮತ್ತು ಜೆಎಂಎಫ್ ಸಿ ನ್ಯಾಯಾಲಯವು ಬುಧವಾರ ನೀಡಿದ ತೀರ್ಪಿನ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಗೊಂದಲಮಯ ಸಂದೇಶಗಳು ಹರಿದಾಡುತ್ತಿವೆ . ಸುದ್ದಿಗೆ ಸಂಬಂಧಿಸಿದ ಪ್ರಕರಣವನ್ನು ಸಿವಿಲ್ ನ್ಯಾಯಾಲಯದಲ್ಲಿ ಕಲಾಪ ನಡೆಸಬಹುದು ಇಲ್ಲವೇ ಎಂಬುದರ ಬಗ್ಗೆ ಮಾತ್ರ ನ್ಯಾಯಾಲಯ ತೀರ್ಪು ನೀಡಿದೆ ಅದರ ಹೊರತು ಬೇರೆ ಯಾವ ತೀರ್ಪು ನೀಡಿಲ್ಲ . ಮಳಲಿ ಮಸೀದಿಗೆ ಸುಮಾರು ಐನೂರು ವರ್ಷಗಳ ಇತಿಹಾಸವಿದೆ. 2ಸಾವಿರದ 3ರಲ್ಲಿ ವಕ್ಫ್ ಬೋರ್ಡ್ ನಲ್ಲಿ ಈ ಮಸೀದಿ ನೊಂದಾಯಿಸ ನೊಂದಾವಣಿ ಆಗಿದೆ ಹಾಗಾಗಿ ಇಂದಿನ ತೀರ್ಪು ವಿರುದ್ಧ ಹೋರಾಟ ಮಾಡಲಿದ್ದೇವೆ ನಮಗೆ ನ್ಯಾಯ ಸಿಗುವ ವಿಶ್ವಾಸ ಇದೆ ಎಂದು ಬಿ ಎ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ತಿಳಿಸಿದ್ದಾರೆ .

Gayathri SG

Recent Posts

ಆರ್‌ಸಿಬಿ ಆಟಗಾರರಿಗೆ ಶೇಕ್ ಹ್ಯಾಂಡ್ ಮಾಡದೇ ಮೈದಾನದಿಂದ ತೆರಳಿದ ಧೋನಿ..!

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 27 ರನ್​ಗಳಿಂದ…

7 mins ago

ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ಬಂದಿದೆ ಹಸಿರು ಕಳೆ

ಬೇಸಿಗೆಯ ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ವರುಣನ ಕೃಪೆಯಿಂದ ಹಸಿರು ಕಳೆ ಬಂದಿದೆ.  ಜನವರಿಯಿಂದ ಏಪ್ರಿಲ್ ತನಕವೂ ಮಳೆ ಸುರಿಯದ…

18 mins ago

ಆರ್​ಸಿಬಿಗೆ ಟ್ವೀಟ್​ ಮೂಲಕ ವಿಜಯ್​ ಮಲ್ಯ ಅಭಿನಂದನೆ

ಶನಿವಾರ ತಡರಾತ್ರಿ ನಡೆದ ಐಪಿಎಲ್​ನ ರೋಚಕ ಪಂದ್ಯದಲ್ಲಿ ಕನ್ನಡಿಗರ ನೆಚ್ಚಿನ ತಂಡವಾದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಹಾಲಿ ಚಾಂಪಿಯನ್​…

28 mins ago

ತಾಯಿಯ ಶವದ ಜೊತೆಗೆ ನಾಲ್ಕು ದಿನ ಕಳೆದಿದ್ದ ಬುದ್ಧಿಮಾಂದ್ಯ ಪುತ್ರಿಯೂ ಮೃತ್ಯು

ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿದ ತನ್ನ ತಾಯಿಯ ಮೃತದೇಹದ ಮುಂದೆ ಅನ್ನ ನೀರು ಇಲ್ಲದೆ ಇದ್ದ ವಿಶೇಷಚೇತನ ಮಗಳು ಕೂಡ…

34 mins ago

ಗರ್ಭಿಣಿಯರಲ್ಲಿ ಅಧಿಕ ರಕ್ತದೊತ್ತಡ ಜೀವಕ್ಕೆ ಗಂಡಾಂತರ

ಇಂದಿನ ದಿನಗಳಲ್ಲಿ ರಕ್ತದೊತ್ತಡದ ಸಮಸ್ಯೆ ಸರ್ವೇಸಾಮಾನ್ಯವಾಗಿದೆ. ಹೀಗೆ ರಕ್ತದೊತ್ತಡ ಸಮಸ್ಯೆ ಕಾಡುವುದಕ್ಕೆ ಕಾರಣಗಳು ಹಲವು. ಅದರಲ್ಲಿಯೂ ಮುಖ್ಯವಾಗಿ ನಮ್ಮ ಜೀವನ…

39 mins ago

ಬೆಂಗಳೂರಿನಲ್ಲಿ ತಿಂಗಳಿಗೆ ಸರಾಸರಿ 4.3 ಕೋಟಿ ಯೂನಿಟ್‌ ಹೆಚ್ಚಳ ವಿದ್ಯುತ್ ಬಳಕೆ

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯಲ್ಲಿ ಗೃಹ ಬಳಕೆಗೆ ತಿಂಗಳಿಗೆ ಸರಾಸರಿ 4.3 ಕೋಟಿ ಯೂನಿಟ್‌ ಹೆಚ್ಚುವರಿಯಾಗಿ ಬಳಕೆಯಾಗಿದೆ.

41 mins ago