News Karnataka Kannada
Wednesday, April 17 2024
Cricket
ಮಂಗಳೂರು

ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಸೇರ್ಪಡೆಗೆ ಬಿಜೆಪಿ ಗಡುವು !

Arun
Photo Credit : News Kannada

ಮಂಗಳೂರು: ಕಳೆದ ವಿಧಾನಸಭಾ ಚುನಾವಣೆ ಸಂದರ್ಭ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಕ್ಷೇತ್ರದಿಂದ ಬಿಜೆಪಿ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ರಾಜ್ಯದ ಗಮನ ಸೆಳೆದಿದ್ದ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರ ಸೇರ್ಪಡೆಗೆ ಬಿಜೆಪಿ  ಗಡುವು ವಿಧಿಸಿದೆ ಎಂದು ಮೂಲಗಳು ತಿಳಿಸಿವೆ.

ಆದಷ್ಟು ಬೇಗ ನಿರ್ಧಾರ ತಿಳಿಸುವಂತೆ ಗಡುವು ವಿಧಿಸಿರುವುದರ ಜತೆಗೆ ಕೆಲವೊಂದು ಷರತ್ತುಗಳನ್ನೂ ಪುತ್ತಿಲ ಆವರಿಗೆ ಬಿಜೆಪಿ ನಾಯಕರು ಒಡ್ಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಇಂದು (ಫೆ.05) ಅರುಣ್ ಪುತ್ತಿಲ ಸಮಾಲೋಚನಾ ಸಭೆ ಕರೆದಿದ್ದಾರೆ. ವಿಧಾನಸಭೆ ಚುನಾವಣೆಯ ನಂತರ ಅವರು ಹುಟ್ಟುಹಾಕಿರುವ ಪುತ್ತಿಲ ಪರಿವಾರದ ಸಭೆ ನಡೆಯಲಿದ್ದು, ಅಂತಿಮ ತೀರ್ಮಾನದ ಬಗ್ಗೆ ಕಾರ್ಯಕರ್ತರ ಜತೆ ಸಮಾಲೋಚನೆ ನಡೆಯಲಿದೆ.

ಬಿಜೆಪಿಗೆ ಸಡ್ಡು ಹೊಡೆದು ಅರಂಭಗೊಂಡಿದ್ದ ಪುತ್ತಿಲ ಪರಿವಾರ ಮತ್ತು ಅದರ ಮುಖಂಡರಿಂದ ನಿರಂತರವಾಗಿ ಬಿಜೆಪಿ ವಿರುದ್ಧ ಚಟುವಟಿಕೆ ನಡೆಯುತ್ತಿದೆ ಎಂದು ಬಿಜೆಪಿಯ ಹಲವು ನಾಯಕರು ಆರೋಪಿಸಿದ್ದಾರೆ. ಹೀಗಾಗಿ ಬಿಜೆಪಿಗೆ ವಿರುದ್ಧವಾಗಿ ಆರಂಭಿಸಿರುವ ಪುತ್ತಿಲ ಪರಿವಾರ ವಿಸರ್ಜಿಸಿ ಬರುವಂತೆ ಷರತ್ತು ವಿಧಿಸಲಾಗಿದೆ ಎನ್ನಲಾಗಿದೆ.

ಇನ್ನು ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಪುತ್ತಿಲ ಅಭಿಮಾನಿಗಳು, ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಕಾರ್ಯಕರ್ತರ ಅಭಿಪ್ರಾಯ ಪಡೆದು ಮುಂದುವರೆಯಲು ಪುತ್ತಿಲ ನಿರ್ಧರಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು