News Karnataka Kannada
Sunday, May 19 2024
ಮಂಗಳೂರು

ಆರ್ಯಾಪು ಗ್ರಾ.ಪಂ. ಉಪಚುನಾವಣೆಯಲ್ಲಿ ಗೆಲುವು: ಶಾಸಕ ಸಂಜೀವ ಮಠಂದೂರು ಅಭಿನಂದನೆ

Aryapu gram panchayat by-election: BJP-backed candidate Yatheesh D.B. Victory
Photo Credit : News Kannada

ಪುತ್ತೂರು: ಆರ್ಯಾಪು ಗ್ರಾಮ ಪಂಚಾಯತ್ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಯತೀಶ್ ದೇವ ಅವರು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಸಂಭ್ರಮವನ್ನು ಆಚರಿಸಲಾಯಿತು. ಬಿಜೆಪಿ ಕಚೇರಿಯಲ್ಲಿ ಶಾಸಕ ಸಂಜೀವ ಮಠಂದೂರು ಹಾಗೂ ಪ್ರಮುಖರು ಅಭಿನಂಧಿಸಿ, ಶುಭಹಾರೈಸಿದರು.

ಇದೇ ಸಂದರ್ಭ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹಾಗೂ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳಿ, ಪೂಜೆ ಸಲ್ಲಿಸಲಾಯಿತು. ಗೆಲುವು ಪಡೆದ ತಕ್ಷಣ ಬಿಜೆಪಿಗೆ ಕಚೇರಿಗೆ ತೆರಳಿ ಬಳಿಕ ಆರ್ಯಾಪು ಗ್ರಾಮ ಪಂಚಾಯತಿಗೆ ತೆರಳಲಾಯಿತು. ಗಿರೀಶ್ ಗೌಡ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಗಿರೀಶ್ ಗೌಡ ಅವರ ಮನೆಗೆ ತೆರಳಿ, ಅವರ ಭಾವಚಿತ್ರಕ್ಕೆ ಹೂಹಾರ ಹಾಕಲಾಯಿತು.

ಬಳಿಕ ಸಂಟ್ಯಾರ್ ಜಂಕ್ಷನಿನಲ್ಲಿ ಸಂಭ್ರಮಾಚರಣೆ ಆಚರಿಸಲಾಯಿತು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಆರ್ಯಾಪು ಗ್ರಾಪಂ ಅಧ್ಯಕ್ಷೆ ಸರಸ್ವತಿ, ಉಪಾಧ್ಯಕ್ಷೆ ಪೂರ್ಣಿಮಾ, ಸದಸ್ಯ ಹರೀಶ್ ನಾಯಕ್ ಬಳಕ್ಕ ಮೊದಲಾದವರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು