News Karnataka Kannada
Monday, April 29 2024
ಮಂಗಳೂರು

ಆಮ್ ಆದ್ಮಿ ಪಾರ್ಟಿ ದ.ಕ.ಜಿಲ್ಲಾ ಅಧ್ಯಕ್ಷರಾಗಿ ಅಶೋಕ್ ಅಡಮಲೆ ನೇಮಕ

Ashok Adamale appointed as Aam Aadmi Party's Dakshina Kannada district president
Photo Credit : Wikimedia

ಮಂಗಳೂರು: ರಾಷ್ಟ್ರೀಯ ರಾಜಕೀಯ ಪಕ್ಷವಾಗಿ ಹೊರಹೊಮ್ಮಿರುವ ಆಮ್ ಆದ್ಮಿ ಪಾರ್ಟಿ ಮುಂಬರುವ ವಿಧಾನಸಭಾ ಚುನಾವಾಣೆ ಹಿನ್ನೆಲೆಯಲ್ಲಿ ಸಂಘಟನೆಯನ್ನು ಪುನರ್ ರಚಿಸಿದ್ದು, ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾಗಿ ಅಶೋಕ್ ಅಡಮಲೆ ಅವರನ್ನು ನೇಮಕ ಮಾಡಲಾಗಿದೆ.

ನಿಕಟಪೂರ್ವ ಅಧ್ಯಕ್ಷ ಸಂತೋಷ್ ಕಾಮತ್ ಅವರಿಗೆ ರಾಜ್ಯ ಸಂಘಟನೆಯಲ್ಲಿ ಜವಾಬ್ದಾರಿ ನೀಡಲಾಗಿದ್ದು, ಜಂಟಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ರಾಜ್ಯದ ಚುನಾವಣೆಯ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಾರ್ಟಿ ರಾಜ್ಯ ಉಸ್ತುವಾರಿ ದೆಹಲಿ ಶಾಸಕ ದಿಲೀಪ್ ಪಾಂಡೆ ಅವರು ರಾಜ್ಯ ಮತ್ತು ಜಿಲ್ಲಾ ಸಮಿತಿಗಳನ್ನು ವಿಸರ್ಜಿಸಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಹೊಸ ಸಮಿತಿಗಳನ್ನು ಪ್ರಕಟಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಕಾರ್ಯದರ್ಶಿಯಾಗಿ ಫ್ಲೊರಿನ್ ಗೊವಿಸ್, ಸಂಘಟನಾ ಕಾರ್ಯದರ್ಶಿಯಾಗಿ ಪುರುಷೋತ್ತಮ ಕೊಲ್ಪೆ ಅವರನ್ನು ನೇಮಕ ಮಾಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು