ಮೂಡುಬಿದಿರೆ: ಆಳ್ವಾಸ್ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.
ಮೂಲತಃ ಬಾಗಲಕೋಟೆ ನಿವಾಸಿ ಆಳ್ವಾಸ್ ಕಾಲೇಜು ಜರ್ನಲಿಸಂ ವಿಭಾಗದ ಹಳೇ ವಿದ್ಯಾರ್ಥಿ ಹನುಮಂತ (24) ಆತ್ಮಹತ್ಯೆ ಮಾಡಿಕೊಂಡವರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.