Categories: ಮಂಗಳೂರು

ʼದಾಂಡಿಯಾ ನೈಟ್ಸ್ʼಗೆ ಷರತ್ತುಬದ್ಧ ಅನುಮತಿ: ಪ್ರತಿಭಟನೆಯ ಎಚ್ಚರಿಕೆ ನೀಡಿದ ಬಜರಂಗದಳ

ಮಂಗಳೂರು: ದಾಂಡಿಯಾ ನೈಟ್ಸ್ ಇವೆಂಟ್ ಗೆ ಅವಕಾಶ ನೀಡದಂತೆ ಹಿಂದೂ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದೆ. ಮಂಗಳೂರು ನಗರ ಪೊಲೀಸ್ ಇಲಾಖೆಗೆ ಹಿಂದೂ ಪರ ಸಂಘಟನೆಗಳು ಇವೆಂಟ್ ಗೆ ಅವಕಾಶ ನೀಡದಂತೆ ಮನವಿ ಮಾಡಿವೆ.

ದಾಂಡಿಯಾ ನೃತ್ಯ ಉತ್ತರಭಾರತದ ಪವಿತ್ರ ಧಾರ್ಮಿಕ ಕಾರ್ಯಕ್ರಮ. ಈ ಕಾರ್ಯಕ್ರಮದ ಹೆಸರಿನಲ್ಲಿ ಮೋಜು ಮಸ್ತಿ ಮಾಡಲಾಗುತ್ತೆ, ಅಸಭ್ಯವಾಗಿ ವರ್ತಿಸಲಾಗುತ್ತೆ ಎಂದು ಬಜರಂಗದಳ ವಿರೋಧ ವ್ಯಕ್ತಪಡಿಸಿದೆ. ಹೀಗಾಗಿ ವಿಶ್ವ ಹಿಂದೂ ಪರಿಷತ್ ಮನವಿ ಬೆನ್ನಲ್ಲೇ ಮಂಗಳೂರು ಕಮಿಷನರ್ ಅನುಪಮ್ ಅಗರ್ವಾಲ್ ತುರ್ತು ಸಭೆ ಕರೆದಿದ್ದಾರೆ.

ಸಭೆಯ ಬಳಿಕ ಷರತ್ತುಬದ್ಧವಾಗಿ ದಾಂಡಿಯಾ ಇವೆಂಟ್ಸ್ ಆಚರಿಸಲು ಅನುಮತಿ ನೀಡಲಾಗಿದೆ. ಯಾವುದೇ ವಿವಾದಾಸ್ಪದ ಘಟನೆಗಳಿಗೆ ಅವಕಾಶ ನೀಡದಂತೆ ಕಾರ್ಯಕ್ರಮ ನಡೆಸಲು ಆಯೋಜಕರಿಗೆ ಸೂಚನೆ ನೀಡಲಾಗಿದೆ. ಆದರೆ ಕಾರ್ಯಕ್ರಮಕ್ಕೆ ಅವಕಾಶ ನೀಡದಂತೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ಅಗ್ರಹಿಸಿದೆ. ಅನುಮತಿ ನೀಡಿದ್ದೇಯಾದಲ್ಲಿ ಪ್ರತಿಭಟನೆಯ ಎಚ್ಚರಿಕೆಯನ್ನು ಹಿಂದೂ ಮುಖಂಡ ಪ್ರದೀಪ್ ಸರಿಪಲ್ಲ ನೀಡಿದ್ದಾರೆ. ಹೀಗಾಗಿ ಕಾರ್ಯಕ್ರಮಗಳಿಗೆ ಪೊಲೀಸ್ ಭದ್ರತೆ ನೀಡುವ ಸಾದ್ಯತೆಯಿದೆ.

Gayathri SG

Recent Posts

ಚಾಮರಾಜನಗರದಲ್ಲಿ ಉಡ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ

ಜಿಲ್ಲೆಯಲ್ಲಿ ವನ್ಯ ಪ್ರಾಣಿಗಳನ್ನು ಜೀವಂತವಾಗಿ ಸೆರೆ ಹಿಡಿದು ಸಾಗಾಟ ಮಾಡುವ ಜಾಲ ಕಾರ್ಯಾಚರಿಸುತ್ತಿರುವ ಶಂಕೆ ವ್ಯಕ್ತವಾಗಿದೆ. ಪ್ರಾಣಿಗಳನ್ನು ಬೇಟೆಯಾಡಿ ಮಾಂಸ…

3 mins ago

ಮೈಸೂರಿನಲ್ಲಿ ಪರಶುರಾಮ ಜಯಂತಿ ಕಾರ್ಯಕ್ರಮ

ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಪರಶುರಾಮ‌ ಜಯಂತಿ ಅಂಗವಾಗಿ ಚಾಮರಾಜಪುರಂನಲ್ಲಿರುವ ಬ್ರಾಹ್ಮಣ ಯುವ ವೇದಿಕೆ ಕಛೇರಿಯಲ್ಲಿ ಪರಶುರಾಮ ಜಯಂತಿಯನ್ನು…

13 mins ago

ಪಕ್ಷಿಗಳಿಗೆ ಆಹಾರ ನೀಡುತ್ತಿರುವ ಕೆಎಲ್‌ಇ ಸಂಸ್ಥೆಯ ವಿದ್ಯಾರ್ಥಿಗಳು

ವಿದ್ಯಾಕಾಶಿ ಧಾರವಾಡದಲ್ಲಿ ಕೆಎಲ್‌ಇ ಸಂಸ್ಥೆಯ ಬಿಬಿಎ ಕಾಲೇಜಿನ ವಿದ್ಯಾರ್ಥಿಗಳು ಪಕ್ಷಿಗಳಿಗೆ ಆಹಾರ ನೀಡುವ ಕೆಲಸ ಮಾಡುತ್ತಿದ್ದಾರೆ.

24 mins ago

ನರೇಂದ್ರ ದಾಭೋಲ್ಕರ್​ ಹತ್ಯೆ ಕೇಸ್: ಇಬ್ಬರಿಗೆ ಜೀವಾವಧಿ ಶಿಕ್ಷೆ, ಮೂವರು ಖುಲಾಸೆ

ಸುಮಾರು 11 ವರ್ಷಗಳ ನಂತರ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ನೀಡಿದೆ. ನ್ಯಾಯಾಲಯ ಇಬ್ಬರು ಆರೋಪಿಗಳನ್ನು…

43 mins ago

ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕಾಗಿ ವ್ಯಕ್ತಿಯ ಹತ್ಯೆ

ನಗರದಲ್ಲಿ ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ…

53 mins ago

ಬೀದರ್: ಸಂಭ್ರಮದಿಂದ ವಿಶ್ವಗುರು ಬಸವಣ್ಣನವರ ಜಯಂತಿ‌ ಆಚರಣೆ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ‌ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

1 hour ago