Categories: ಮಂಗಳೂರು

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಿರುದ್ದ ಬಜರಂಗದಳ ಕಿಡಿ!

ಮಂಗಳೂರು: ಗೃಹ ಸಚಿವನಾಗಿದ್ದಾಗ ಬಜರಂಗದಳ ದವರ ಮೇಲೆಯೇ ಗೂಂಡಾ ಕಾಯ್ದೆ ಹಾಕಿದ್ದೆ ಎಂದು ಆರ್ ಅಶೋಕ್ ಹೇಳಿಕೊಂಡಿದ್ದಾರೆ. ಈ ಹೇಳಿಕೆ ವಿರುದ್ದ ಮಂಗಳೂರು ಭಜರಂಗದಳ ಆಕ್ರೋಶ ಹೊರಹಾಕಿದೆ.

ಮಂಗಳೂರಿನ ಬಜರಂಗದಳದ ಕಾರ್ಯಕರ್ತರ ಪ್ರತಿರೋಧ ಎದುರಿಸಲು ಸಿದ್ಧರಾಗಿ ಎಂದು ವಿಪಕ್ಷ ನಾಯಕ ಆರ್‌‌.ಅಶೋಕ್ ಗೆ ಬಜರಂಗದಳ ಮಂಗಳೂರು ವಿಭಾಗ ಸಹಸಂಯೋಜಕ್ ಪುನೀತ್ ಅತ್ತಾವರ ತನ್ನ ಫೇಸ್ ಬುಕ್ ಖಾತೆಯಲ್ಲಿ ಆರ್.ಅಶೋಕ್ ಗೆ ಬಹಿರಂಗ ಎಚ್ಚರಿಕೆ ನೀಡಿದ್ದಾರೆ.

ಅಧಿವೇಶನದಲ್ಲಿ ಮಂಗಳೂರು ಪಬ್ ದಾಳಿ ಬಗ್ಗೆ ಮಾತನಾಡಿದ್ದ ಅಶೋಕ್ಆವತ್ತುಬಜರಂಗದಳ ದ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹಾಕಿದ್ದೆ ಎಂದು ಅಧಿವೇಶನದಲ್ಲಿ ಹೇಳಿದರು. ಈಗಿನ ಗೃಹ ಸಚಿವ ಪರಮೇಶ್ವರ್ ಗೆ ಬುದ್ದಿ ಹೇಳೋ ಭರದಲ್ಲಿ ಹೇಳಿದ್ದ ಅಶೋಕ್, ನಾನು ಯಾವುದೇ ಒತ್ತಡಕ್ಕೆ ಮಣಿಯದೇ ಪಬ್ ದಾಳಿ ಮಾಡಿದ್ದ ಬಜರಂಗದಳ ದವರ ಮೇಲೆ ಗೂಂಡಾ ಕಾಯ್ದೆ ಹಾಕಿದ್ದೆ ಎಂದಿದ್ದಾರೆ.

ಆದರೆ ಸದ್ಯ ಅಶೋಕ್ ಹೇಳಿಕೆ ವಿರುದ್ದ ಕರಾವಳಿ ಭಜರಂಗದಳ ಕೆಂಡಕಾರಿದ್ದಾರೆ. ‘ನೀವು ಆರ್ ಅಶೋಕ್ ಅಲ್ಲ. ಅಡ್ಜಸ್ಟ್ ಮೆಂಟ್ ಅಶೋಕ್ ಅವರೇ.’ ‘ನಿಮ್ಮ ನಾಲಗೆಯನ್ನು ನಾಲಗೆ ರೀತಿಯಲ್ಲಿ ಬಳಸಿ, ಎಕ್ಕಡದ ರೀತಿ ಬಳಸಿಕೊಳ್ಳಬೇಡಿ’ ‘ಅಡ್ಜಸ್ಟ್ ಮೆಂಟ್ ರಾಜಕಾರಣ ಎಂಬ ಕೊಚ್ಚೆಯಲ್ಲಿ ಹೊರಳಾಡುತ್ತಿರುವ ನಿಮಗೆ ಬಜರಂಗದಳದ ಕಾರ್ಯಕರ್ತರ ಹೆಸರು ಎತ್ತಲೂ ಯೋಗ್ಯತೆಯಿಲ್ಲ’ ‘ಪ್ರತಿಪಕ್ಷನಾಯಕನಾಗಿರುವ ನೀವು ಒಂದಲ್ಲ ಒಂದು ದಿನ ಮಂಗಳೂರಿಗೆ ಬಂದೇ ಬರುತ್ತೀರಿ’. ‘ಹಿಂದೂ ವಿರೋಧಿ ಕೃತ್ಯಕ್ಕೆ ಪ್ರತಿರೋಧ ಒಡ್ಡಿ ಹೋರಾಡುವ ನಮಗೆ ನೀವೊಬ್ಬರು ಹೆಚ್ಚಾಗುವುದಿಲ್ಲ. ‘ಒಂದಾ ಬಜರಂಗದಳದ ಕಾರ್ಯಕರ್ತರ ಬಗ್ಗೆ ಆಡಿದ ಮಾತುಗಳನ್ನು ಹಿಂದೆ ಪಡೆಯಿರಿ. ಇಲ್ಲದಿದ್ದರೆ ಬಜರಂಗದಳದ ಕಾರ್ಯಕರ್ತರ ಪ್ರತಿರೋಧವನ್ನು ಎದುರಿಸಲು ಸಿದ್ಧರಾಗಿ ಎಂದು ಫೇಸ್ ಬುಕ್ ನಲ್ಲಿ ಭಜರಂಗದಳ ಮುಖಂಡ ಆರ್.ಅಶೋಕ್ ಗೆ ಎಚ್ಚರಿಕೆ ನೀಡಿದ್ದಾರೆ.

Ashika S

Recent Posts

ಅಕ್ಷಯ ತೃತೀಯದಂದು ಲಕ್ಷ್ಮಿ ಮತ್ತು ಕುಬೇರನಿಗೆ ವಿಶೇಷ ಪೂಜೆ

ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…

42 seconds ago

ಅಕ್ಷಯ ತೃತೀಯ ದಿನದಂದು ಚಿನ್ನ, ಬೆಳ್ಳಿ ದರ ಪಟ್ಟಿ ಹೀಗಿದೆ!

ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…

20 mins ago

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

8 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

8 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

8 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

9 hours ago