News Karnataka Kannada
Saturday, May 11 2024
ಮಂಗಳೂರು

ಬಂಟ್ವಾಳ: ಬೈಕ್-ಪಿಕಪ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತ್ಯು

Bantwal: A biker was killed in an accident between a bike and a pick-up in Bantwal.
Photo Credit : By Author

ಬಂಟ್ವಾಳ: ಬೈಕ್ ಹಾಗೂ ಪಿಕಪ್ ಮಧ್ಯೆ ಅಪಘಾತ ಸಂಭವಿಸಿ ಬೈಕ್ ಸವಾರ ರೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕೇಪು ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ.

ಬದಿಯಡ್ಕ ನಿವಾಸಿ ಸಂದೇಶ್ (33 ವ.) ಮೃತ ದುರ್ಧೈವಿಯಾಗಿದ್ದಾರೆ. ಸಂದೇಶ್ ವೃತ್ತಿಯಲ್ಲಿ ವಾಹನ ಚಾಲಕನಾಗಿದ್ದು, ಹವ್ಯಾಸಿ ಗಾಯಕನಾಗಿದ್ದಾರೆ.

ಬಿಜೆಪಿ ಕಾರ್ಯಕರ್ತನಾಗಿ ಗುರುತಿಸಿ ಕೊಂಡಿದ್ದ ಅವರು ಸೆ.೨೩ರಂದು ಸಾಯಂಕಾಲ ವಿಟ್ಲ ಕಡೆಯಿಂದ ಬೈಕ್ ನಲ್ಲಿ ಬದಿಯಡ್ಕ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಎದುರಿನಿಂದ ಬಂದ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದರು. ಕೂಡಲೇ ಸ್ಥಳೀಯರು ಅವರನ್ನು ಆಸ್ಪತ್ರೆಗೆ ಸಾಗಿಸಿದರಾದರೂ ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ತೆರಳಿ ಮಾಹಿತಿ ಸಂಗ್ರಹಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು