News Karnataka Kannada
Thursday, May 02 2024
ಮಂಗಳೂರು

ಬಂಟ್ವಾಳ: ಪೈಟಿಂಗ್ ಕೆಲಸ ಮಾಡುತ್ತಿದ್ದ ವೇಳೆ ಆಯ ತಪ್ಪಿ ಬಿದ್ದ ವ್ಯಕ್ತಿ ಸಾವು

Bantwal: A man died after falling while working as a painting worker in Bantwal.
Photo Credit : Pexels

ಬಂಟ್ವಾಳ: ಪೈಟಿಂಗ್ ಕೆಲಸ ಮಾಡುತ್ತಿದ್ದ ವೇಳೆ ಆಯ ತಪ್ಪಿ ಬಿದ್ದ ಗಂಭೀರವಾಗಿವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೋರ್ವನು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಸೋರ್ನಾಡು ಎಂಬಲ್ಲಿ ನಡೆದಿದೆ.

ಜಕ್ರಿಬೆಟ್ಟು ಪಲ್ಲಿಕಂಡ ನಿವಾಸಿ ಪ್ರಸಿಲ್ಲಾ ವೇಗಸ್ ಅವರ ಪತಿ ರಾಬರ್ಟ್ ವೇಗಸ್ (51) ಮೃತಪಟ್ಟ ವ್ಯಕ್ತಿ. ವಿಜಯ್ ಎಂಬ ಪೈಟಿಂಗ್ ಗುತ್ತಿಗೆದಾರನ ಜೊತೆ ರಾಬರ್ಟ್‌ ವೇಗಸ್ ಅವರು ಪೈಟಿಂಗ್ ಕೆಲಸಕ್ಕೆ ಇದ್ದು, ಸೋರ್ನಾಡು ಎಂಬಲ್ಲಿ ಪೈಟಿಂಗ್ ಕೆಲಸ ಮಾಡುತ್ತಿದ್ದ ವೇಳೆ ಸುಮಾರು 1 ಗಂಟೆ ವೇಳೆಗೆ ಆಕಸ್ಮಿಕವಾಗಿ ಮೇಲಿನಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.

ಇವರನ್ನು ಚಿಕಿತ್ಸೆ ಗಾಗಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಗಂಭೀರವಾಗಿ ಗಾಯಗೊಂಡ ರಾಬರ್ಟ್ ಅವರು ಚಿಕಿತ್ಸೆಗೆ ಸ್ಪಂದಿಸದೆ ರಾತ್ರಿ ವೇಳೆ ಮೃತಪಟ್ಟ ಬಗ್ಗೆ ವೈದ್ಯರು ತಿಳಿಸಿದ್ದಾರೆ.
ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು