News Karnataka Kannada
Monday, May 06 2024
ಮಂಗಳೂರು

ಬಂಟ್ವಾಳ: ಮನೆ ಮೇಲೆ ಗುಡ್ಡ ಕುಸಿದು ಓರ್ವ ಮಹಿಳೆ ಸಾವು

A woman died after a hillock collapsed on her house in Bantwal
Photo Credit : News Kannada

ಬಂಟ್ವಾಳ: ಮನೆ ಮೇಲೆ ಗುಡ್ಡ ಕುಸಿದು ಮನೆಯೊಳಗೆ ಇಬ್ಬರು ಮಹಿಳೆಯರು ಸಿಲುಕಿದ ಘಟನೆ ದ.ಕ ಜಿಲ್ಲೆಯ ‌ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದ ನಂದಾವರದಲ್ಲಿ ನಡೆದಿದೆ.

ಈ ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, ಇನ್ನೊರ್ವ ಮಹಿಳೆಯ  ರಕ್ಷಣೆ ಮಾಡಲಾಗಿದೆ. ಮೃತಪಟ್ಟವರನ್ನ ನಂದಾವರ ನಿವಾಸಿ ಝರೀನಾ (46) ಎಂದು ಗುರುತಿಸಲಾಗಿದೆ. ಇನ್ನೊರ್ವ ಮಹಿಳೆ  ಶಫಾ (20)  ಆಕೆಯ ಪುತ್ರಿ.

ಮಣ್ಣಿನಡಿ ಸಿಲುಕಿದ್ದ ಝರಿನ್ ಅವರ ಮೃತ ದೇಹವನ್ನು ಬಂಟ್ವಾಳ ಅಗ್ನಿಶಾಮಕ ಅಧಿಕಾರಿಗಳು, ಪೊಲೀಸರು ಹಾಗೂ ಸ್ಥಳೀಯರು ಕಾರ್ಯಾಚರಣೆ ನಡೆಸಿ ಹೊರ ತೆಗೆದಿದ್ದಾರೆ.

ಬಂಟ್ವಾಳ ತಹಶೀಲ್ದಾರ್ ಎಸ್.ಬಿ.ಕೂಡಲಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು