ಬಂಟ್ವಾಳ: ಕಾರು ಡಿಕ್ಕಿ ಹೊಡೆದು ಪಾದಚಾರಿ ಯುವತಿಯೋರ್ವಳು ಮೃತಪಟ್ಟ ಘಟನೆ ಇಂದು ರಾತ್ರಿ ಸುಮಾರು 6.30 ಕ್ಕೆ ರಾಷ್ಟ್ರೀಯ ಹೆದ್ದಾರಿ 75 ರ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ನಡೆದಿದೆ.
ವೀರಕಂಭ ಗ್ರಾಮದ ಬಾಯಿಲ ನಿವಾಸಿ ಶೇಖರ ಪೂಜಾರಿ ಅವರ ಪುತ್ರಿ ಪಾವನ ( 23) ಮೃತಪಟ್ಟ ಯುವತಿ. ಬಿಸಿರೋಡಿನ ಸ್ಕ್ಯಾನಿಂಗ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಸಂಜೆ ಕೆಲಸ ಬಿಟ್ಟು ಬಿಸಿರೋಡಿನಿಂದ ಬಸ್ ಮೂಲಕ ಊರಿಗೆ ಹೋಗಿದ್ದಳು. ಯುವತಿ ದಾಸಕೋಡಿ ಎಂಬಲ್ಲಿ ಬಸ್ಸ್ ನಿಂದ ಇಳಿದು ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುವ ವೇಳೆ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ಯುವತಿ ರಸ್ತೆ ಬದಿಯ ತೋಡಿಗೆ ಎಸೆಯಲ್ಪಟ್ಟಿದ್ದಾಳೆ. ಕಾರು ಕೂಡ ಪಲ್ಟಿಯಾಗಿದೆ ಎಂದು ಹೇಳಲಾಗಿದೆ. ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿಡಲಾಗಿದೆ.
ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾಂಕ್ರೀಟ್ ರಸ್ತೆಯಲ್ಲಿ ಅತೀ ವೇಗದ ಚಾಲನೆ ಅಪಘಾತಕ್ಕೆ ಕಾರಣವಾಗುತ್ತಿದೆ ಎಂಬ ಆರೋಪ ಸ್ಥಳೀಯರಿಂದ ಕೇಳಿಬಂದಿದೆ.
ನೀರಿನ ಟ್ಯಾಂಕ್ನಲ್ಲಿ ಬಿದ್ದು ಮೂವರು ಎಂಜಿನಿಯರ್ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್ನ ಎಚ್ಎಸ್ಎಂ ಪ್ಲಾಂಟ್ನಲ್ಲಿ ನಡೆದಿದೆ.
ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.
ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್ ಪಂದ್ಯದಲ್ಲಿ ಅಲ್ರೌಂಡ್ ಪ್ರದರ್ಶನದ ಫಲವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು…
ಧರ್ಮ ದಂಗಲ್ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…
ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…
ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.