ಮಂಗಳೂರು

ಬಂಟ್ವಾಳ: ಶೈಕ್ಷಣಿಕ ಸಮಸ್ಯೆ, ವಿದ್ಯಾರ್ಥಿವೇತನ ಕೋರಿ ಎಬಿವಿಪಿ ಪ್ರತಿಭಟನೆ

ಬಂಟ್ವಾಳ: 2021-22ನೇ ಸಾಲಿನ ಶೈಕ್ಷಣಿಕ ವರ್ಷದ ಬಾಕಿ ಇರುವ ವಿದ್ಯಾರ್ಥಿವೇತನವನ್ನು ಕೂಡಲೇ ಬಿಡುಗಡೆ ಮಾಡುವಂತೆ ಮತ್ತು ಯುಯುಸಿಎಂಎಸ್ ತಂತ್ರಾಂಶವನ್ನು ಸರಿಪಡಿಸಿ ಫಲಿತಾಂಶ ಪ್ರಕಟಿಸುವಂತೆ ರಾಜ್ಯಾದ್ಯಂತ ನಡೆಯುತ್ತಿರುವ ಎಬಿವಿಪಿ ಪ್ರತಿಭಟನೆಯ ಭಾಗವಾಗಿ ಬಂಟ್ವಾಳ ಆಡಳಿತ ಸೌಧದ ಮುಂಭಾಗ ಗುರುವಾರ ಎಬಿವಿಪಿಯಿಂದ ಪ್ರತಿಭಟನೆ ನಡೆಯಿತು.

ಈ ಸಂದರ್ಭ ಮುಖ್ಯಮಂತ್ರಿಗಳಿಗೆ ತಹಸೀಲ್ದಾರ್ ಕಚೇರಿ ಮೂಲಕ ಮನವಿ ಸಲ್ಲಿಸಲಾಯಿತು.

ಮಂಗಳೂರು ವಿಭಾಗ ಸಂಚಾಲಕ ಹರ್ಷಿತ್ ಕೊಯ್ಲ, ಜಿಲ್ಲಾ ಸಹಸಂಚಾಲಕ ದಿನೇಶ್ ಕೊಯಿಲ, ನಗರ ಕಾರ್ಯದರ್ಶಿ ಪ್ರತೀಕ್, ತಾಲೂಕು ಸಾಮಾಜಿಕ ಜಾಲತಾಣದ ಸುಶಾಂತ್ ಸಹಿತ ವಿವಿಧ ಕಾಲೇಜು ವಿದ್ಯಾರ್ಥಿಗಳು ಭಾಗಿಯಾಗಿದ್ದರು. ತಹಸೀಲ್ದಾರ್ ಪರವಾಗಿ ಪ್ರಥಮ ದರ್ಜೆ ಸಹಾಯಕ ಪ್ರಸನ್ನ ಮನವಿ ಸ್ವೀಕರಿಸಿದರು.

Ashika S

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

6 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

6 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

6 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

7 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

7 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

7 hours ago