News Karnataka Kannada
Monday, May 06 2024
ಮಂಗಳೂರು

ಬಂಟ್ವಾಳ: ಲಾರಿ ಮತ್ತು ಪಿಕಪ್ ವಾಹನದ ಮಧ್ಯೆ ಭೀಕರ ಅಪಘಾತ

Bantwal
Photo Credit : By Author

ಬಂಟ್ವಾಳ: ಲಾರಿ ಮತ್ತು ಪಿಕಪ್ ವಾಹನದ ಮಧ್ಯೆ ಭೀಕರ ಅಪಘಾತ ಸಂಭವಿಸಿ, ಮೂವರು ಗಂಭೀರವಾಗಿ ಗಾಯಗೊಂಡು‌ ಆಸ್ಪತ್ರೆಗೆ ದಾಖಲಾದ ಘಟನೆ ಪುಂಜಾಲಕಟ್ಟೆ ಯಲ್ಲಿ ನಡೆದಿದೆ.

ಪುಂಜಾಲಕಟ್ಟೆ ಪ್ರಗತಿ ಆಸ್ಪತ್ರೆ ಮುಂಭಾಗದ ರಾಷ್ಟ್ರೀಯ ಹೆದ್ದಾರಿ ಯಲ್ಲಿ ಅಪಘಾತ ಸಂಭವಿಸಿದ್ದು, ಪಿಕಪ್ ವಾಹನದಲ್ಲಿದ್ದ ಇಬ್ಬರು ಹಾಗೂ ಲಾರಿ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ‌.

ಮಂಗಳೂರು ಕಡೆಯಿಂದ ಧರ್ಮಸ್ಥಳದ ಕಡೆಗೆ ಹೋಗುತ್ತಿದ್ದ ಲಾರಿ ಪುಂಜಾಲಕಟ್ಟೆ ಯಿಂದ ವಗ್ಗ ಕಡೆಗೆ ಹೋಗುವ ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಪಿಕಪ್ ವಾಹನದ ಬಿಡಿ ಭಾಗಗಳು ಚೆಲ್ಲಾಪಿಲ್ಲಿಯಾಗಿ ಹರಡಿದೆ. ಪಿಕಪ್ ವಾಹನದಲ್ಲಿ ಚಾಲಕ ಮತ್ತು ಪ್ರಯಾಣಿಕ ಹಾಗೂ ಲಾರಿ ಚಾಲಕನ ಮಾಹಿತಿ ಸದ್ಯ ತಿಳಿದು ಬಂದಿಲ್ಲ. ಸ್ಥಳಕ್ಕೆ ಪುಂಜಾಲಕಟ್ಟೆ ಪೋಲೀಸರು ಬೇಟಿ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು