News Karnataka Kannada
Sunday, April 28 2024
ಮಂಗಳೂರು

ಬಂಟ್ವಾಳ: ವಿಟ್ಲ ಜಾತ್ರೋತ್ಸವದಲ್ಲಿ ವ್ಯಾಪಾರಿಗಳ ಮೇಲೆ ಹಲ್ಲೆ ಪ್ರಕರಣ, ಆರೋಪಿಗಳ ಬಂಧನ

ಕಳ್ಳತನ
Photo Credit : News Kannada

ಬಂಟ್ವಾಳ: ವಿಟ್ಲ ಜಾತ್ರೋತ್ಸವದಲ್ಲಿ ವ್ಯಾಪಾರಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

ವಿಟ್ಲ ಜಾತ್ರೋತ್ಸವ ಸಂದರ್ಭದಲ್ಲಿ ವ್ಯಾಪಾರಿಗಳ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಣೇಶ್‌ ಕಡಂಬು, ಮಂಜುನಾಥ ಮತ್ತು ಇತರ ನಾಲ್ಕು ಯುವಕರ ಮೇಲೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೆತ್ತಿಕೊಂಡಿದ್ದ ಪೊಲೀಸರು ಪ್ರಮುಖ ಆರೋಪಿ ಗಣೇಶ್‌ ಕಡಂಬುನನ್ನು ಬಂಧಿಸಿ ಜೈಲಿಗಟ್ಟಿದ್ದರು. ಇನ್ನೋರ್ವ ಪ್ರಮುಖ ಆರೋಪಿ ಮಂಜುನಾಥ್‌ ಕೇರಳ ಭಾಗದಲ್ಲಿ ತಲೆಮರೆಸಿಕೊಂಡಿದ್ದಾನೆ ಎಂಬ ಮಾಹಿತಿ ದೊರೆತಿದ್ದು, ಈತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಈ ಪ್ರಕರಣದಲ್ಲಿ ಇನ್ಸ್‌ಪೆಕ್ಟರ್‌ ಹೆಚ್‌.ಇ ನಾಗರಾಜ್‌ ಇವರ ನೇತೃತ್ವದಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಂದೀಪ್‌ ಕುಮಾರ್ ಶೆಟ್ಟಿ ತಂಡ ರಚನೆ ಮಾಡಿ ತೀವ್ರವಾಗಿ ತನಿಖೆ ಚುರುಕುಗೊಳಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದರು. ಇದೀಗ ಆರೋಪಿ ಹರ್ಷಿತ್‌ ಎಂಬವನನ್ನು ಮಂಗಳೂರಿನಲ್ಲಿ ಬಂಧಿಸುವಲ್ಲಿ ವಿಟ್ಲ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.‌

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು