News Karnataka Kannada
Monday, May 06 2024
ಮಂಗಳೂರು

ಬಂಟ್ವಾಳ: ರಮಾನಾಥ ರೈ ಚುನಾವಣಾ ಕಚೇರಿಗೆ ಎಐಸಿಸಿ ವಕ್ತಾರ ಚರಣ್ ಸಿಂಗ್ ಸಪ್ರ ಭೇಟಿ

AICC spokesperson Charan Singh Sapra visits Ramanath Rai's election office in Bantwal
Photo Credit : News Kannada

ಬಂಟ್ವಾಳ: ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಂಟ್ವಾಳ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈ ಅವರ ಚುನಾವಣಾ ಕಚೇರಿಗೆ ಶನಿವಾರ ಮಹಾರಾಷ್ಟ್ರ ವಿಧಾನ ಪರಿಷತ್ ಸದಸ್ಯ, ಎಐಸಿಸಿ ವಕ್ತಾರ ಚರಣ್ ಸಿಂಗ್ ಸಪ್ರ ಭೇಟಿ ನೀಡಿದರು.

ರಮಾನಾಥ ರೈ ಅವರ ಚುನಾವಣಾ ಪ್ರಚಾರ ಕಾರ್ಯ ನಿರ್ವಹಣೆಯ ಕುರಿತು ಈ ವೇಳೆ ಅವರು ಮಾತುಕತೆ ನಡೆಸಿದರು. ಅಲ್ಲದೆ, ರೈ ಅವರ ಚುನಾವಣಾ ಯಶಸ್ಸಿಗೆ ಶುಭಕೋರಿದರು.

ಈ ವೇಳೆ ಕೆ.ಪಿ.ಸಿ.ಸಿ. ಸದಸ್ಯರುಗಳಾದ ಪಿಯೂಸ್ ಎಲ್. ರೊಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಮಾಜಿ ಜಿ.ಪಂ. ಸದಸ್ಯ ಪದ್ಮಶೇಖರ್ ಜೈನ್, ಕಾಂಗ್ರೆಸ್ ಚುನಾವಣಾ ಕಚೇರಿ ಉಸ್ತುವಾರಿಗಳಾದ ನಾರಾಯಣ ನಾಯ್ಕ್, ಪರಮೇಶ್ವರ ಮೂಲ್ಯ, ಪ್ರಮುಖರಾದ ಜಗದೀಶ್ ಕೊಯಿಲ, ರಿಯಾಝ್ ಕೆಳಗಿನಪೇಟೆ ಮತ್ತಿತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು