News Karnataka Kannada
Sunday, April 28 2024
ಮಂಗಳೂರು

ಬಂಟ್ವಾಳ : ಗ್ರಾಮ ವಿಕಾಸ ಯಾತ್ರೆಯ ಸಮಾರೋಪದಲ್ಲಿ ಭಾಗವಹಿಸಲಿರುವ ಅಣ್ಣಾಮಲೈ

Annamalai calls for a Congress-free Karnataka
Photo Credit : By Author

ಬಂಟ್ವಾಳ : ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ನೇತೃತ್ವದಲ್ಲಿ 12 ದಿನಗಳ ಕಾಲ ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಂಚರಿಸಿದ ಗ್ರಾಮ ವಿಕಾಸ ಯಾತ್ರೆ- ಶಾಸಕರ ನಡಿಗೆ ಗ್ರಾಮಗಳ ಕಡೆಗೆ ಪಾದಯಾತ್ರೆಯ ಸಮಾರೋಪ ಬಸ್ತಿಪಡ್ಡುವಿನಲ್ಲಿ ಸಂಜೆ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಪೊಲೀಸ್ ಎಸ್ಪಿ ಅಣ್ಣಾಮಲೈ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 2 ರ ಬಳಿಕ ಕೈಕಂಬ ಜಂಕ್ಷನ್ ನಿಂದ ಬಂಟ್ವಾಳ ಬಸ್ತಿಪಡುವಿನವರೆಗೆ ಬೃಹತ್ ಪಾದಯಾತ್ರೆ ನಡೆಯಲಿದ್ದು, ಮಾಜಿಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸೇರಿದಂತೆ ರಾಜ್ಯ ಮಟ್ಟದ ಹಲವು ನಾಯಕರು ಈ ಪಾದಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ. ಸಂಜೆ 4 ಗಂಟೆಗೆ ಬಸ್ತಿಪಡುವಿನ ವಿಶಾಲವಾದ ಮೈದಾನದಲ್ಲಿ ಸಮಾರೋಪ ಕಾರ್ಯಕ್ರಮ ನಡೆಯಲಿದ್ದು, ಸುಮಾರು 25 ಸಾವಿರ ಕಾರ್ಯಕರ್ತರು ಸಮಾರೋಪ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ ಎಂದು ಪಾದಯಾತ್ರೆ ಸಂಚಾಲಕ ದೇವದಾಸ್ ಶೆಟ್ಟಿ ತಿಳಿಸಿದ್ದಾರೆ.

ಪೊಲೀಸ್ ಅಧಿಕಾರಿಯಾಗಿ ಸೂಪರ್ ಕಾಪ್ ಎಂದು ಖ್ಯಾತಿಯಾಗಿದ್ದ ಅಣ್ಣಾಮಲೈ ಈಗ ರಾಜಕಾರಣಿಯಾಗಿ ಬದಲಾಗಿದ್ದು, ಈಗಾಗಲೇ ಹಲವು ವಿಚಾರಗಳಿಂದ ಸುದ್ದಿಯಲ್ಲಿದ್ದಾರೆ. ಅವರ ಆಗಮನ ಬಿಜೆಪಿ ಕಾರ್ಯಕರ್ತರಲ್ಲಿ ಹುರುಪು ಹೆಚ್ಚಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು