News Karnataka Kannada
Friday, May 03 2024
ಮಂಗಳೂರು

ಬಂಟ್ವಾಳ: ಹಠಾತ್ ಹೃದಯಾಘಾತದಿಂದ ಆಟೋ ಚಾಲಕ ಸಾವು

Auto rickshaw driver dies of sudden heart attack
Photo Credit : By Author

ಬಂಟ್ವಾಳ: ಆಟೋ ರಿಕ್ಷಾ ಚಾಲಕರೋರ್ವರು ಹಠಾತ್ ಹೃದಯಾಘಾತ ಸಂಭವಿಸಿ ರಿಕ್ಷಾದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನ.9 ರಂದು ಬಂಟ್ವಾಳ ತಾಲೂಕಿನ ಮಾಣಿಯಲ್ಲಿ ನಡೆದಿದೆ.ಕಲ್ಲಡ್ಕ ಕುದ್ರೆಬೆಟ್ಟು ನಿವಾಸಿ ಜಯಕರ ಪೂಜಾರಿ ಮೃತ ಪಟ್ಟವರು.

ಜಯಕರ ಪೂಜಾರಿ ರವರು ಆಟೋ ರಿಕ್ಷಾ ಚಾಲಕರಾಗಿದ್ದು, ಪ್ರತಿದಿನ ಬೆಳಗ್ಗೆ ಕೆಲ ಮಕ್ಕಳನ್ನು ಶಾಲೆಗೆ ಬಿಡುತ್ತಿದ್ದರು. ಎಂದಿನಂತೆ ಇಂದು ಮಕ್ಕಳನ್ನು ಆಟೋ ರಿಕ್ಷಾದಲ್ಲಿ ಶಾಲೆಗೆ ಕರೆದುಕೊಂಡು ಬರುತ್ತಿದ್ದ ವೇಳೆ ಮಕ್ಕಳು ಜೆರಾಕ್ಸ್ ಶಾಪ್ ಹತ್ತಿರ ಆಟೋ ನಿಲ್ಲಿಸಲು ಸೂಚಿಸಿದ್ದು, ಈ ವೇಳೆ ಆಟೋ ರಿಕ್ಷಾ ನಿಲ್ಲಿಸಿದ್ದು, ಮಕ್ಕಳು ಜೆರಾಕ್ಸ್ ತೆಗೆದು ಹಿಂದಿರುಗಿದ ವೇಳೆ ಅವರು ಕುಸಿದು ಬಿದ್ದಿದ್ದರು ಎನ್ನಲಾಗಿದೆ. ತಕ್ಷಣ ಅವರನ್ನು ಹತ್ತಿರದ ಕ್ಲಿನಿಕ್ ಗೆ ಕರೆದೊಯ್ಯಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದರು ಎಂದು ವೈದ್ಯರು ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು