News Karnataka Kannada
Sunday, May 12 2024
ಮಂಗಳೂರು

ಬಂಟ್ವಾಳ: ಪುಣಚದಲ್ಲಿ ಆಟೋರಿಕ್ಷಾ ಪಲ್ಟಿ, ಚಾಲಕ ಸಾವು

Bantwal: Auto-rickshaw overturns in Punacha, driver killed
Photo Credit : News Kannada

ಬಂಟ್ವಾಳ: ಚಲಿಸುತ್ತಿದ್ದ ಆಟೋರಿಕ್ಷಾಕ್ಕೆ ಅಡ್ಡಲಾಗಿ ಬಂದ ದನವನ್ನು ತಪ್ಪಿಸುವ ವೇಳೆ ನಿಯಂತ್ರಣ ತಪ್ಪಿ ಆಟೋರಿಕ್ಷಾದಿಂದ ರಸ್ತೆಗೆ ಎಸೆಯಲ್ಪಟ್ಟ ಚಾಲಕ ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಪುಣಚದಲ್ಲಿ ಮಂಗಳವಾರ ನಡೆದಿದೆ. ಜಗನ್ನಾಥ ಪೈಸಾರಿ(57) ಮೃತಪಟ್ಟ ದುರ್ದೈವಿ ಚಾಲಕ.

ಮಂಗಳವಾರ ಮಧ್ಯಾಹ್ನ ಊಟ ಮುಗಿಸಿದ ಬಳಿಕ ಪುಣಚದ ಅಟೋರಿಕ್ಷಾ ಪಾರ್ಕಿಂಗ್ ಸ್ಥಳಕ್ಕೆ ಬರುತ್ತಿದ್ದ ಸಂದರ್ಭದಲ್ಲಿ ಮಣಿಲ ಎಂಬಲ್ಲಿ ದುರ್ಘಟನೆ ಸಂಭವಿಸಿದ್ದು, ಅಟೋರಿಕ್ಷಾ ರಸ್ತೆಗೆ ಪಲ್ಟಿಯಾಗಿ ಬಿದ್ದ ಕಾರಣ,ತಲೆಗೆ ಗಂಭೀರ ಗಾಯವಾಗಿದ್ದು, ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರೆನ್ನಲಾಗಿದೆ.

ತುಳು ನಾಟಕ ರಂಗದಲ್ಲಿ ಹಾಸ್ಯ ಅಭಿನಯದ ಮೂಲಕ ಮಿಂಚಿದ್ದ ಅವರು, ಕಳೆದ ಮೂವತ್ತು ವರ್ಷಗಳಿಂದ ಆಟೋರಿಕ್ಷಾ ಚಾಲಕರಾಗಿ’ರಿಕ್ಷಾ ಜಗ್ಗಣ್ಣ’ಎಂದೇ ಗುರುತಿಸಲ್ಪಟ್ಟಿದ್ದರು. ಮೃತರ ಮನೆಗೆ ಹಲವಾರು ಮಂದಿ ಭೇಟಿ ನೀಡಿ ಸಂತಾಪ ಸೂಚಿಸಿದರು. ಮೃತರು ಪತ್ನಿ, ಪುತ್ರಿ, ಪುತ್ರ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು