Categories: ಮಂಗಳೂರು

ಬಂಟ್ವಾಳ: ಪರಿಸರ ಸಂರಕ್ಷಣೆ ಗಾಗಿ ಪ್ಲಾಸ್ಟಿಕ್ ಬಳಕೆಯ ವಿರುದ್ಧ ಜಾಗೃತಿ ಮತ್ತು ಸ್ವಚ್ಛತಾ ಕಾರ್ಯಕ್ರಮ

ಬಂಟ್ವಾಳ: ಪರಿಸರ ಸಂರಕ್ಷಣೆಗಾಗಿ ಪ್ಲಾಸ್ಟಿಕ್ ಬಳಕೆ ಕಡಿತಗೊಳಿಸಲು ಸ್ವಯಂ ಜಾಗೃತಿ ಅಗತ್ಯ ಎಂದು ಅಪರ ಜಿಲ್ಲಾಧಿಕಾರಿ ಕೃಷ್ಣ ಮೂರ್ತಿ ತಿಳಿಸಿದ್ದಾರೆ.

ದ.ಕ.ಜಿಲ್ಲೆ.ದ.ಕ.ಜಿಲ್ಲಾಡಳಿತ, ದ.ಕ ಜಿಲ್ಲಾ ಪಂಚಾಯತ್, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಬಂಟ್ವಾಳ ತಾಲೂಕು ಪತ್ರ ಕರ್ತರ ಸಂಘ ಮತ್ತು ಪಿಲಾತಬೆಟ್ಟು ಗ್ರಾಮ ಪಂಚಾಯತ್ ಸಹಭಾಗಿತ್ವದಲ್ಲಿ ಪರಿಸರ ಸಂರಕ್ಷಣೆ ಗಾಗಿ ಪ್ಲಾಸ್ಟಿಕ್ ಬಳಕೆಯ ವಿರುದ್ಧ ಜಾಗೃತಿ ಮತ್ತು ಸ್ವಚ್ಛತಾ ಕಾರ್ಯಕ್ರ ಮವನ್ನು ಸುವಿಧ ಸಹಕಾರಿ ಭವನ ಪೂಂಜಾಲ ಕಟ್ಟೆ ಸಭಾಂಗಣದಲ್ಲಿಂದು ಉದ್ಘಾಟಿಸಿ ಮಾತನಾಡುತ್ತಿದ್ದರು.

ಪ್ಲಾಸ್ಟಿಕ್ ಏಕೆ ಪರಿಸರಕ್ಕೆ ಹಾನಿಕಾರಕ ವೆಂದರೆ ಅದು ಮಣ್ಣಿನಲ್ಲಿ ಸೇರಲು 250 ಕ್ಕೂ ಹೆಚ್ಚು ವರ್ಷಗಳ ನ್ನು ತೆಗೆದುಕೊ ಳ್ಳುತ್ತದೆ.ಅಷ್ಟು ದೀರ್ಘ ಕಾಲ ಪರಿಸರದಲ್ಲಿ ಸೇರಿ ಹೋಗದೆ ಮನುಷ್ಯರು ಎಲ್ಲಾ ಜೀವಿಗಳ ಜೈವಿಕ ಪರಿಸರಕ್ಕೆ ಹಾನಿಯ ನ್ನುಂಟು ಮಾಡುತ್ತದೆ.ಪ್ಲಾಸ್ಟಿಕ್ ಬಳಕೆ ಯನ್ನು ಕಡಿತಗೊಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರಲ್ಲಿಯೂ ಸ್ವಯಂ ಜಾಗೃತಿ ಮೂಡಿದಾಗ ಸಾಮೂಹಿಕ ಪ್ರಯತ್ನ ಸಾಧ್ಯ.ಪರಿಸರ ಮಾಲಿನ್ಯ ತಡೆಯಲು ಜನರಲ್ಲಿ ಜಾಗೃತಿ ಮೂಡಿಸಲು ವಿವಿಧ ಸಂಘಟನೆಗಳ ಜೊತೆ ಪತ್ರ ಕರ್ತರು ವಿಶೇಷ ಕಾರ್ಯ ಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದು ಕೃಷ್ಣ ಮೂರ್ತಿ ತಿಳಿಸಿದ್ದಾರೆ.

ಪ್ಲಾಸ್ಟಿಕ್ ತ್ಯಾಜ್ಯ ತಂದ ಸ್ಥಳೀಯರಿಗೆ ಕುಚ್ಚಲು ಅಕ್ಕಿಯನ್ನು ಪ್ರೋತ್ಸಾಹಕವಾಗಿ ನೀಡಲಾಯಿತು.ಅಕ್ಕಿ ಯನ್ನು ಕೊಡುಗೆ ಯಾಗಿ ನೀಡಿದ ಬಂಟ್ವಾಳ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಶಾಂತ್ ಪೂಂಜಾಲಕಟ್ಟೆಯವರನ್ನು ಸಮಾರಂಭದಲ್ಲಿ ಗೌರವಿಸಲಾಯಿತು.

ಮುಖ್ಯ ಅತಿಥಿಗಳಾಗಿ ಮಂಗಳೂರು ಅರಣ್ಯ ವಲಯದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ದಿನೇಶ್ ಕುಮಾರ್ ಮಾತನಾಡುತ್ತಾ,ಪರಿಸರ ಸಂರಕ್ಷಣೆಯ ನಿಟ್ಟಿನಲ್ಲಿ ಪ್ಲಾಸ್ಟಿಕ್ ಬಳಕೆ ಕಡಿತಗೊಳಿಸಲು ಹಮ್ಮಿಕೊಂಡಿರುವ ಜಾಗೃತಿ ಮಹತ್ವದ್ದಾಗಿದೆ.

ಪ್ಲಾಸ್ಟಿಕ್ ಪರಿಸರದಲ್ಲಿ ಸೇರಿಕೊಂಡಾಗ ನಮಗೆ ನಾವೆ ಅಪಾಯ ವನ್ನು ತಂದು ಕೊಂಡಂತಾಗುತ್ತದೆ.ಈ ನಿಟ್ಟಿನಲ್ಲಿ ಜನರು ಪ್ಲಾಸ್ಟಿಕ್ ತ್ಯಾಜ್ಯ ವನ್ನು ಸಂಗ್ರಹಿಸುವಂತೆ ಮಾಡುವ ಮೂಲಕ ಹಮ್ಮಿಕೊಂಡಿರುವ ಜಾಗೃತಿ ಕಾರ್ಯ ಕ್ರಮ ಮಾದರಿ ಕಾರ್ಯ ಕ್ರಮ ಎಂದು ಶ್ಲಾಘಿಸಿದ ರು.ದ.ಕ. ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀ ನಿವಾಸ ನಾಯಕ್ ಇಂದಾಜೆ ಪ್ರಸ್ತಾವಿಕವಾಗಿ ಮಾತನಾಡುತ್ತಾ, ಪ್ಲಾಸ್ಟಿಕ್ ಬಳಕೆಯ ವಿರುದ್ಧ ಬಂಟ್ವಾಳ ತಾಲೂಕು ಪತ್ರ ಕರ್ತರ ಸಂಘದ ಅಧ್ಯಕ್ಷ ಪ್ರಶಾಂತ್ ಪೂಂಜಾಲಕಟ್ಟೆ ಸ್ವಯಂ ಆಸಕ್ತಿ ಯಿಂದ ಅಕ್ಕಿ ಯನ್ನು ಕೊಡುಗೆ ಯಾಗಿ ನೀಡಿರುವುದು ಮಾದರಿ ಎಂದು ಕೃತಜ್ಞತೆ ಸಲ್ಲಿಸಿದರು.

ಸಮಾರಂಭದಲ್ಲಿ ಪಿಲಾತಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಹರ್ಷಿಣಿ ಪುಷ್ಪಾನಂದ ಅಧ್ಯಕ್ಷ ತೆ ವಹಿಸಿದ್ದರು.ದ.ಕ. ಜಿಲ್ಲಾ ಕಾರ್ಯ ನಿರತ ಪತ್ರ ಕರ್ತರ ಸಂಘದ ಅಧ್ಯಕ್ಷ ಶ್ರೀ ನಿವಾಸ ನಾಯಕ್ ಇಂದಾಜೆ, ಬಂಟ್ವಾಳ ತಾಲೂಕು ಕಾರ್ಯ ನಿರತ ಪತ್ರ ಕರ್ತರ ಸಂಘದ ಅಧ್ಯಕ್ಷ ಪ್ರಶಾಂತ್ ಪೂಂಜಾಲಕಟ್ಟೆ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ತುಂಗಪ್ಪ ಬಂಗೇರ, ಪಿಲಾತಬೆಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಲಕ್ಷ್ಮೀನಾರಾ ಯಣ,ದ.ಕ ಜಿಲ್ಲಾ ಕಾರ್ಯ ನಿರತ ಪತ್ರ ಕರ್ತರ ಸಂಘದ ಸದಸ್ಯ ರಾಜೇಶ್ ದಡ್ಡಂಗಡಿ ಉಪಸ್ಥಿತರಿದ್ದರು.

ಕಾರ್ಯಕ್ರಮ ದಲ್ಲಿ ಸ್ಥಳೀಯ ರು 85.350ಕೆ.ಜಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸಿ ತಂದಿದ್ದರು.ಅವರಿಗೆ 400 ಕೆ.ಜಿ.ಅಕ್ಕಿ ವಿತರಿಸಲಾಯಿತು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪಿಲಾತಬೆಟ್ಟು ಗ್ರಾಮ ಪಂಚಾ ಯತ್ ಅಭಿವೃದ್ಧಿ ಅಧಿಕಾರಿ ಯಮಪ್ಪ ಕೊರವರು ಸ್ವಚ್ಛತಾ ಪ್ರಮಾಣ ವಚನ ಬೋಧಿಸಿದರು. ದ.ಕ.ಜಿಲ್ಲಾ ಕಾರ್ಯ ನಿರತ ಪತ್ರ ಕರ್ತರ ಸಂಘದ ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್ ಕಾರ್ಯಕ್ರಮ ನಿರೂಪಿಸಿದರು. ಬಂಟ್ವಾಳ ತಾಲೂಕು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಮೌನೇಶ್ ವಿಶ್ವ ಕರ್ಮ ವಂದಿಸಿದರು.

Sneha Gowda

Recent Posts

ಇಂದು 49 ಕ್ಷೇತ್ರಗಳಲ್ಲಿ 5ನೇ ಹಂತದ ಮತದಾನ

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನವು ಸೋಮವಾರ (ಮೇ 20) ನಡೆಯಲಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ…

1 min ago

ಇಂದಿನ ರಾಶಿ ಭವಿಷ್ಯ : ಈ ರಾಶಿಯವರಿಗೆ ಹೊಸ ಉದ್ಯೋಗ ಆಫರ್ ಬರಲಿದೆ

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ​​​​​ 20) ರಾಶಿ ಭವಿಷ್ಯದಲ್ಲಿ ಯಾರ ರಾಶಿ…

12 mins ago

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

8 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

8 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

9 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

9 hours ago