Categories: ಮಂಗಳೂರು

ಬಂಟ್ವಾಳ: ಅನಾರೋಗ್ಯದಿಂದ ಬಜರಂಗ ದಳ ಕಾರ್ಯಕರ್ತ ಸಾವು

ಬಂಟ್ವಾಳ: ಅನಾರೋಗ್ಯದಿಂದ ಬಜರಂಗ ದಳ ಕಾರ್ಯಕರ್ತ ಸಾವನ್ನಪ್ಪಿದ ಘಟನೆ ಬಂಟ್ವಾಳದ ಮಣಿನಾಲ್ಕೂರು ಗ್ರಾಮದ ನೇಲ್ಯಪಲ್ಕೆ ಎಂಬಲ್ಲಿ ನಡೆದಿದೆ. ನಿತಿನ್ ಪೂಜಾರಿ(3೦) ಮೃತ ಯುವಕ. ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ನಿತಿನ್ ಮೂರು ದಿನಗಳಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ನಿನ್ನೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ನಿತಿನ್ ಗೆ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಈ ವೇಳೆ ಲಿವರ್ ಸಮಸ್ಯೆಯ ಬಗ್ಗೆ ವೈದ್ಯರು ಹೇಳಿದ್ದಾರೆ. ಖಾಸಗಿ ಬಸ್ ಚಾಲಕರಾಗಿ ಕೆಲಸ ಮಾಡುತ್ತಿದ್ದ ನಿತಿನ್ ಅವಿವಾಹಿತರಾಗಿದ್ದರು. ಬಜರಂಗದಳ ಸಂಘಟನೆಗಳಲ್ಲಿ ಸಕ್ರೀಯರಾಗಿದ್ದರು. ಇನ್ನು ನಿತಿನ್ ಸಾವಿನಲ್ಲಿ ವೈದ್ಯರ ನಿರ್ಲಕ್ಷ್ಯದ ಆರೋಪ ಕೇಳಿ ಬಂದಿದೆ.ಈ ಹಿನ್ನೆಲೆ ಮೃತ ನಿತಿನ್ ಶವವನ್ನು ಆಸ್ಪತ್ರೆ ಬಳಿ ಇಟ್ಟು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Gayathri SG

Recent Posts

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

4 hours ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

4 hours ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

5 hours ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

5 hours ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

6 hours ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

6 hours ago