Categories: ಮಂಗಳೂರು

ಬಂಟ್ವಾಳ: ಬೆಸ್ಟ್ ಆಂಗ್ಲ ಮಾದ್ಯಮ ಶಾಲೆಯ ವತಿಯಿಂದ ವಲಯ ಮಟ್ಟ ಕ್ರೀಡಾ ಕೂಟಕ್ಕೆ ಚಾಲನೆ

ಬಂಟ್ವಾಳ: ಬೆಸ್ಟ್ ಆಂಗ್ಲ ಮಾದ್ಯಮ ಶಾಲೆ ಬಿ. ಸಿ ರೋಡ್ ಇದರ ಸಂಯುಕ್ತ ಆಶ್ರಯದಲ್ಲಿ ಮೊಡಂಕಾಪು ಇನ್ಫೆಂಟ್ ಜೀಸಸ್ ಕ್ರೀಡಾಂಗಣದಲ್ಲಿ ನಡೆದ ಬಂಟ್ವಾಳ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಕ್ರೀಡಾಕೂಟ ಸಮಾರಂಭದ ಉದ್ಘಾಟನಾ ಕಾರ್ಯಕ್ರಮವನ್ನು ಬಂಟ್ವಾಳ ಏಜುಕೇಶನ್ ಸರ್ವಿಸ್ ಟ್ರಸ್ಟಿನ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಬಿ. ರಮಾನಾಥ ರೈ ನೆರವೇರಿಸಿ ಬಳಿಕ ಬಂಟ್ವಾಳ ವಲಯ ಮಟ್ಟದ ಕ್ರೀಡಾಕೂಟದ ಧ್ವಜಾರೋಹಣವನ್ನು ಬಿ.ಸಿ ರೋಡಿನ ಬೆಸ್ಟ್ ಆಂಗ್ಲ ಮಾಧ್ಯಮ ಶಾಲೆ ಸಂಚಾಲಕರಾದ ಧನಭಾಗ್ಯ ಆರ್ ರೈ ರವರು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಕ್ರೀಡಾಜ್ಯೋತಿ ಬೆಳಗಿಸುವ ಮೂಲಕ ಕ್ರೀಡಾಕೂಟಕ್ಕೆ ಇನ್ಫೆಂಟ್ ಜೀಸಸ್ ಚರ್ಚಿನ ಮುಖ್ಯ ಗುರುಗಳು ಫಾದರ್ ವೆಲೇರಿಯನ ಡಿ’ಸೋಜಾರವರು ಚಾಲನೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಬೆಸ್ಟ್ ಆಂಗ್ಲ ಮಾಧ್ಯಮ ಶಾಲೆ ಆಡಳಿ ಅಧಿಕಾರಿ ಮಹಾಬಲ ಆಳ್ವ. ಟ್ರಸ್ಟಿನ ಸದಸ್ಯರುಗಳಾದ ರಶ್ಮಿ ಎಸ್. ಪೂಜಾ, ಸುಮ ಎಂ. ಆಳ್ವಾ, ಕಾರ್ಯಕ್ರಮದಲ್ಲಿ ಬೆಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯನಿ ಸುನಿತಾ ಬಿ. ಟಿ ರವರು ಸ್ವಾಗತವನ್ನು ಕೋರಿದರು.

ಪ್ರಮುಖರಾದ ಬಂಟ್ವಾಳ ಕ್ಷೇತ್ರದ ಶಿಕ್ಷಣಾಧಿಕಾರಿ ಜ್ಞಾನೇಶ್. ಪಿಇಸಿಒ ಸುಜಾತ, ಇಸಿಒ ಸುಧಾ. ಟಿಪಿಒ ವಿಷ್ಣು ನಾರಾಯಣ ಹೆಬ್ಬಾರ್ 3 ವಲಯದ ಸಿಆರ್ ಪಿಗಳು ನಂದಾ, ಪ್ರೇಮಲತಾ,  ಪ್ರದೀಪ್ ಬಂಟ್ವಾಳ ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರು ಸಂಘದ ಅಧ್ಯಕ್ಷರು ರತ್ನಾವತಿ, ಬಂಟ್ವಾಳ ವಲಯದ ನೋಡಲ್ ಅಧಿಕಾರಿ ಶಿವಪ್ರಸಾದ್ ರೈ. ಜಿಲ್ಲಾ ಉಪಾಧ್ಯಕ್ಷರು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ  ನವೀನ್, ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರು ಇನ್ವೆಂಟ್ ಜೀಸಸ್ ಶಾಲೆ ಮುಖ್ಯ ಗುರುಗಳು, ದೀಪಿಕಾ ಪ್ರೌಢಶಾಲೆಯ ಮುಖ್ಯ ಗುರುಗಳು, ಕ್ರೀಡಾಂಗಣವನ್ನು ಕೊಟ್ಟು ಸಹಕರಿಸಿದರು ದೀಪಿಕಾ ಪ್ರೌಢಶಾಲೆ, ಮೊಡಂಕಾಪು. ಇವರುಗಳು. ಬೆಂಜನಪದವು ಶಾಲೆಯ ಮುಖ್ಯ ಗುರುಗಳು. ಎಲ್ಲಾ 3 ವಲಯಗಳ ದೈಹಿಕ ಶಿಕ್ಷಣ ಶಿಕ್ಷಕರು ವ್ಯವಸ್ಥಾಪಕರು. ಕ್ರೀಡಾ ಜ್ಯೋತಿಯನ್ನು ರಕ್ತೇಶ್ವರಿ ದೇವಸ್ಥಾನದಿಂದ ದೀಪಿಕಾ ಪ್ರೌಢಶಾಲೆಯ ಕ್ರೀಡಾಂಗಣ ಮಾಡಂಕಾಪು ಮೆರವಣಿಗೆಯ ಮೂಲಕ ಬಂದು ಬಳಿಕ ಅದನ್ನು ಪಾರಿವಾಳಗಳನ್ನು ಬಿಡುವುದರ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು.

ಕ್ರೀಡಾ ಪ್ರತಿಜ್ಞೆಯನ್ನು ಬೆಸ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಹರ್ಷಿತ್ ಪ್ರತಿಜ್ಞೆ ವಿಧಿಯನ್ನು ವಾಚಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಬೆಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಸಹ ಶಿಕ್ಷಕಿ ಸುವನಾರವರು ನಿರೂಪಿಸಿದರು. ಕಾರ್ಯಕ್ರಮದ ವಂದನಾರ್ಪಣೆಯನ್ನು ಬೆಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಸಹ ಶಿಕ್ಷಕಿ ಸನ್ಮೆತಾ ರವರು ನೆರವೇರಿಸಿದರು.

Gayathri SG

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

3 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

3 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

4 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

4 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

4 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

4 hours ago