News Karnataka Kannada
Friday, May 03 2024
ಮಂಗಳೂರು

ಬಂಟ್ವಾಳ: ಬೈಕ್ ಹಾಗೂ ಬಸ್ಸ್ ಮಧ್ಯೆ ಅಪಘಾತ, ಬೈಕ್ ಸವಾರನಿಗೆ ಗಾಯ

Bantwal: Bike rider injured in accident between bike and bus
Photo Credit : By Author

ಬಂಟ್ವಾಳ: ಬಸ್ಸ್ ಹಾಗೂ ಬೈಕ್ ನ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಕಬಕ-ಮಿತ್ತೂರು ನಡುವಿನ ಕೂವೆತ್ತಿಲ ತಿರುವಿನಲ್ಲಿ ನಡೆದಿದೆ.

ಬೈಕ್ ಸವಾರ ಕೂವೆತ್ತಿಲ ನಿವಾಸಿ ಟ್ಯಾಂಕರ್ ಚಾಲಕ ಜಗ್ಗ ಯಾನೆ ಜಗದೀಶ್ ಗೌಡರವರು ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡವರಾಗಿದ್ದಾರೆ.

ಬಿ.ಸಿ.ರೋಡಿಂದ ಪುತ್ತೂರಿಗೆ ಹೋಗುತ್ತಿದ್ದ ತೆರಳುತ್ತಿದ್ದ ಬಸ್ಸ್ ಹಾಗೂ ವಿರುದ್ಧ ದಿಕ್ಕಿನಿಂದ ಬಂದ ಬೈಕ್ ಮಧ್ಯೆ ಕಬಕ-ಮಿತ್ತೂರು ನಡುವಿನ ಕೂವೆತ್ತಿಲ ತಿರುವಿನಲ್ಲಿ ಡಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬೈಕ್ ಬಸ್ಸಿನ ಮುಂಭಾಗದಲ್ಲಿ ಅಡಿಭಾಗಕ್ಕೆ ನುಸುಳಿ ಸಿಲುಕಿಕೊಂಡಿದೆ.

ಜಗದೀಶ್ ರವರು ಒಂದು ವಾರದ ಹಿಂದಷ್ಟೇ ತನ್ನ ಸ್ನೇಹಿತ ಖರೀದಿಸಿದ್ದ ಹೊಸ ಬೈಕಲ್ಲಿ ಕಬಕಕ್ಕೆ ಹೋಗಿ ಹಿಂತಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಕೂಡಲೇ ಸ್ಥಳೀಯರು ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.ಅಪಘಾತದ ರಭಸಕ್ಕೆ ಬೈಕ್ ಜಖಂಗೊಂಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು