News Karnataka Kannada
Saturday, May 11 2024
ಮಂಗಳೂರು

ಬಂಟ್ವಾಳ: ಬೈಕ್ ಸ್ಕಿಡ್ ಆಗಿ ಸವಾರ ಸಾವು

Bike skid, rider dies
Photo Credit : By Author

ಬಂಟ್ವಾಳ: ಬೈಕ್ ಸ್ಕಿಡ್ ಆಗಿ ರಸ್ತೆ ಬದಿಯ ಡಿವೈಡರ್ ಗೆ ಡಿಕ್ಕಿ ಹೊಡೆದು ತಲೆಗೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಸವಾರನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಇಂದು ನಡೆದಿದೆ.

ಬ್ರಹ್ಮರಕೂಟ್ಲು‌ಕಳ್ಳಿಗೆ ನಿವಾಸಿ ಮುಜಾಮಿಲ್ ಮೃತಪಟ್ಟ ಯುವಕ. ‌ನ. 9ರಂದು ರಾತ್ರಿ ವೇಳೆ ಯಮಹಾ ಬೈಕ್ ಚಲಾಯಿಸಿಕೊಂಡು ವೇಳೆ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.

ಬಂಟ್ವಾಳ ತಾಲೂಕು ತುಂಬೆ ಗ್ರಾಮದ ರಾಮಲ್ ಕಟ್ಟೆ ಎಂಬಲ್ಲಿ ಬೈಕ್ ಸ್ಕಿಡ್ ಆಗಿ ರಸ್ತೆ ಬದಿಯ ಡಿವೈಡರ್ ಗೆ ಡಿಕ್ಕಿ ಹೊಡೆದು ರಸ್ತೆ ಬಿದ್ದ ಪರಿಣಾಮ ತಲೆಗೆ ಗಂಭೀರ ವಾಗಿ ಗಾಯವಾಗಿತ್ತು. ಕೂಡಲೇ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕ ದಲ್ಲಿ ಚಿಕಿತ್ಸೆ ನೀಡಲಾಗಿತ್ತು.ಆದರೆ ತಲೆಗೆ ಅತಿಯಾದ ಏಟಾದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಮೃತಪಟ್ಟ ಘಟನೆ ನಡೆದಿದೆ.

ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು