ಬಂಟ್ವಾಳ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲೂ ದೂರು ದಾಖಲಾಗಿದ್ದು, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ದೂರು ನೀಡಿದ್ದಾರೆ.
ಬೆಳ್ತಂಗಡಿಯಲ್ಲಿ ನಡೆದ ಬಿಜೆಪಿ ವಿಜಯೋತ್ಸವದಲ್ಲಿ ಶಾಸಕ ಹರೀಶ್ ಪೂಂಜಾ ಅವರು, ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, 24 ಹಿಂದೂಗಳನ್ನು ಹತ್ಯೆ ಮಾಡಿದ್ದಾರೆ ಎಂದು ಕೋಮು ಪ್ರಚೋದನಾಕಾರಿಯಾಗಿ ಮಾತನಾಡಿದ್ದಾರೆ, ಅವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ದೂರು ಅರ್ಜಿಯಲ್ಲಿ ಕೋರಲಾಗಿದೆ.
ಬಂಟ್ವಾಳ ನಗರ ವೃತ್ತ ನಿರೀಕ್ಷಕ ವಿವೇಕಾನಂದ ದೂರು ಅರ್ಜಿ ಸ್ವೀಕರಿಸಿದರು. ಈ ಸಂದರ್ಭ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಪ್ರಮುಖರಾದ ಚಂದ್ರಪ್ರಕಾಶ ಶೆಟ್ಟಿ, ಸುರೇಶ್ ನಾವೂರು, ಸುರೇಶ ಜೋರಾ ಮತ್ತಿತರರು ಇದ್ದರು.