ಬಂಟ್ವಾಳ: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಎಸ್ಸಿ- ಎಸ್ಟಿ ಘಟಕದ ವತಿಯಿಂದ ಡಾ ಬಿ ಆರ್ ಅಂಬೇಡ್ಕರ್ ಅವರ 132ನೇ ಜನ್ಮ ದಿನಾಚರಣೆಯನ್ನು ಬಿ ಸಿ ರೋಡಿನ ಕಾಂಗ್ರೆಸ್ ಚುನವಣಾ ಕಚೇರಿಯಲ್ಲಿ ಆಚರಿಸಲಾಯಿತು.
ಈ ಸಂದರ್ಭ ಪಕ್ಷ ಪ್ರಮುಖರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಜನಾರ್ದನ ಚೆಂಡ್ತಿಮಾರ್, ರಾಜ ಚೆಂಡ್ತಿಮಾರ್, ಸದಾಶಿವ ಬಂಗೇರ, ಜಯಂತಿ ಪೂಜಾರಿ, ಪ್ರೀತಿರಾಜ್ ದ್ರಾವಿಡ್ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು, ಪರಿಶಿಷ್ಟ ಸಂಘಟನೆಯ ಮುಖಂಡರುಗಳು ಭಾಗವಹಿಸಿದ್ದರು.