News Karnataka Kannada
Saturday, April 27 2024
ಮಂಗಳೂರು

ಬಂಟ್ವಾಳ: ಡಿವೈಡರ್ ಗೆ ಕಾರ್ ಡಿಕ್ಕಿ, ಚಾಲಕ ಸಾವು

Car collides with divider, driver killed
Photo Credit : News Kannada

ಬಂಟ್ವಾಳ: ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಏ.7 ರಂದು ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ಬಿಸಿರೋಡಿನಲ್ಲಿ ನಡೆದಿದೆ.

ನಂದರಬೆಟ್ಟು ನಿವಾಸಿ ಸದಾಶಿವ ಆಚಾರ್ಯ ಮೃತಪಟ್ಟ ವ್ಯಕ್ತಿ. ಜೊತೆಗೆ ಸದಾಶಿವ ಅವರ ಮೊಮ್ಮಗ ಚಾಲಕ ಅಕಾಶ್, ಅಳಿಯ ಸುರೇಶ್ ಆಚಾರ್ಯ, ಮಗ ಗಣೇಶ್ ಆಚಾರ್ಯ ಅವರು ಅಲ್ಪಸ್ವಲ್ಪ ಗಾಯಗಳಿಂದ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.

ಎರ್ಟಿಗಾ ಕಾರಿನಲ್ಲಿ ಪುತ್ತೂರಿನಿಂದ ದೇವರ ಕಾರ್ಯದಲ್ಲಿ ಭಾಗಿಯಾಗಿ ವಾಪಾಸು ಮನೆಗೆ ಬರುವ ವೇಳೆ ಬಿಸಿರೋಡಿನ ಅಜ್ಜಿಬೆಟ್ಟು ಕ್ರಾಸ್ ಸಮೀಪದಲ್ಲಿ ಈ ಅವಘಡ ಸಂಭವಿಸಿದೆ. ಚಾಲಕನ ಅಜಾಗರೂಕತೆಯಿಂದ ಡಿವೈಡರ್ ಗೆ ಗುದ್ದಿದ ಕಾರು ಅ ಬಳಿಕ ಪಲ್ಟಿಯಾಗಿದೆ.

ಕಾರಿನಲ್ಲಿ ಚಾಲಕ ಸೇರಿ ನಾಲ್ಕು ಜನ ಒಂದೇ ಮನೆಯವರು ಪ್ರಯಾಣಿಸುತ್ತಿದ್ದರು.  ಪುತ್ತೂರು ಸಂಬಂಧಿಕರ ಮನೆಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬಳಿಕ ಮನೆಗೆ ಇನ್ನೇನು ಕೇವಲ 5 ನಿಮಿಷಗಳ ಕಾಲದಲ್ಲಿ ಮುಟ್ಟುವ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಂಭೀರವಾಗಿ ತಲೆಗೆ ಗಾಯವಾಗಿದ್ದ ಸದಾಶಿವ ಅವರನ್ನು ಕೈಕಂಬ ಪರ್ಲಿಯಾ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಮೃತಪಟ್ಟ ಬಗ್ಗೆ ವೈದ್ಯರು ಮಾಹಿತಿ ನೀಡಿದ್ದಾರೆ.

ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಎಸ್.ಐ.ಮೂರ್ತಿ ಅವರು ಭೇಟಿ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು