News Karnataka Kannada
Saturday, April 27 2024
ಮಂಗಳೂರು

ಬಂಟ್ವಾಳ: ಕರಾವಳಿ ಪ್ರಜಾಧ್ವನಿ ಯಾತ್ರಾ ಕಾರ್ಯಕ್ರಮ

Bantwal: Coastal Prajadhvani Yatra Programme
Photo Credit : News Kannada

ಬಂಟ್ವಾಳ: ದೇರಳಕಟ್ಟೆ ಎಂಬಲ್ಲಿ ಒಂದು ಸಣ್ಣ ಗ್ರಾಮೀಣ ಪ್ರದೇಶದ ಪಂಚಾಯತ್ ವ್ಯಾಪ್ತಿಯಲ್ಲಿ 5 ಮೆಡಿಕಲ್ ಕಾಲೇಜುಗಳನ್ನು ಹೊಂದಿರುವ ನಮ್ಮ ಜಿಲ್ಲೆ ಗುಜರಾತ್, ಯುಪಿಗೆ ಮಾದರಿ ಹೊರತು ನಮಗೆ ಅವರು ಎಂದೂ ಮಾದರಿಯಲ್ಲ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಹರಿಹಾಯ್ದರು.

ಕೆಪಿಸಿಸಿ ನಿರ್ದೇಶನದ ಮೇರೆಗೆ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಶನಿವಾರ ಸಂಜೆ ಪಾಣೆಮಂಗಳೂರು ಸಾಗರ್ ಹಾಲ್ ಹೊರಾಂಗಣದಲ್ಲಿ ಹಮ್ಮಿಕೊಳ್ಳಲಾದ ಕರಾವಳಿ ಪ್ರಜಾಧ್ವನಿ ಯಾತ್ರಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮೋದಿ ಸರಕಾರ ಕುಂಬಳ ಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡುತ್ತಿದೆ ಎಂದು ರಾಹುಲ್ ಗಾಂಧಿ ಘಟನೆಯನ್ನು ವಿಮರ್ಶಿಸಿದರು.

ಬಿಜೆಪಿ ಪಕ್ಷ ಕೇವಲ ಟೀ ಮಾರಿದ ಓರ್ವನೇ ಶ್ರೀಮಂತ ಬಡವನ ಬಗ್ಗೆ ಮಾತಾನಾಡುತ್ತಿದೆ ಹೊರತು ದೇಶದ ಕೋಟ್ಯಂತರ ಬಡವರಿಗಾಗಿ ಒಂದೇ ಒಂದು ಕಾರ್ಯಕ್ರಮ ಹಾಕಿಕೊಳ್ಳುವಲ್ಲಿ ವಿಫಲವಾಗಿದೆ ಎಂದು ಟೀಕಿಸಿದರು.

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ ರಮಾನಾಥ ರೈ, ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಪ್ಪ, ಎಐಸಿಸಿ ಕಾರ್ಯದರ್ಶಿ ರೋಜಿ ಎಂ ಜಾನ್, ವಿಧಾನಪರಿಷತ್ ಸದಸ್ಯ, ದ ಕ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್, ಕೆಪಿಸಿಸಿ ಸದಸ್ಯರುಗಳಾದ ಪಿಯೂಸ್ ಎಲ್ ರೋಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಎಂ ಎಸ್ ಮುಹಮ್ಮದ್, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕಾಧ್ಯಕ್ಷ ಕೆ. ಕೆ ಶಾಹುಲ್ ಹಮೀದ್, ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕಾಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಕಾನ್ ಬಿ ಸಿ ರೋಡು, ಪಂಚಾಯತ್ ರಾಜ್ ಒಕ್ಕೂಟದ ದ ಕ ಜಿಲ್ಲಾಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲು, ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸುಹೈಲ್ ಖಂದಕ್, ಎನ್ ಎಸ್ ಯು ಐ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರುಗಳಾದ ಸುರೇಶ್ ಪೂಜಾರಿ ಜೋರಾ, ಇಬ್ರಾಹಿಂ ನವಾಝ್ ಬಡಕಬೈಲು, ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ಪೂಜಾರಿ, ಬಂಟ್ವಾಳ ಪುರಸಭಾಧ್ಯಕ್ಷ ಮುಹಮ್ಮದ್ ಶರೀಫ್ ಶಾಂತಿಅಂಗಡಿ, ಲಾರೆನ್ಸ್ ಮೆನೇಜಸ್, ಅಪ್ಪಿ ಮೊದಲಾದವರು ವೇದಿಕೆಯಲ್ಲಿದ್ದರು.

ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಮಾಣಿ ಸ್ವಾಗತಿಸಿ, ವಿಧಾನಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ ಪ್ರಸ್ತಾವನೆಗೈದರು. ಮಾಣಿ ಗ್ರಾ.ಪಂ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರೂಪಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು