Categories: ಮಂಗಳೂರು

ಬಂಟ್ವಾಳ: ಕಾಂಗ್ರೆಸ್ ಗ್ಯಾರಂಟಿ ಎಂಬುದು ಗಾದೆ ಮಾತಿನಂತಿದೆ – ರಾಜೇಶ್ ನಾಯ್ಕ್

ಬಂಟ್ವಾಳ: ಜನರನ್ನು ಮೋಸ ಮಾಡುವ, ಜನರನ್ನು ಗೊಂದಲಕ್ಕೆ ಸಿಲುಕಿಸುವ ಹೇಳಿಕೆಗಳನ್ನು ನೀಡುವ ಕೆಲಸ ಕಾಂಗ್ರೇಸ್ ಪಕ್ಷ ದಿಂದ ನಡೆಯುತ್ತಿದೆ, ಇಂತಹ ಸುಳ್ಳಿನ ಮಾತಿಗೆ ಜನ ಮರುಳಾಗದೆ ಅಭಿವೃದ್ಧಿ ಮತ್ತು ರಾಷ್ಟ್ರೀಯತೆಗೆ ಒತ್ತು ನೀಡಿ ಆಡಳಿತ ನಡೆಸುವ ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವಲ್ಲಿ ಎಲ್ಲರೂ ಜತೆಯಾಗಿ ಕೆಲಸ ಮಾಡಿ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಿಳಿಸಿದರು.

ಅಮ್ಮುಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 8 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳನ್ನು ಉದ್ಘಾಟನೆ ಹಾಗೂ ಶಿಲಾನ್ಯಾಸ ನೆರವೇರಿಸಿದ ಬಳಿಕ ಬೆಂಜನಪದವಿನಲ್ಲಿ ಶ್ರೀ ಪೊಳಲಿ ರಿಕ್ಷಾ ಭವನವನ್ನು ಉದ್ಘಾಟಿಸಿ, ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದರು.

ಕಾಂಗ್ರೆಸ್ ಗ್ಯಾರಂಟಿ ಎಂಬುದು ಗಾದೆ ಮಾತಿನಂತಿದೆ ಬಿಜೆಪಿ ಪಕ್ಷದ ಅಭಿವೃದ್ಧಿ ಕಾರ್ಯಗಳನ್ನು ಕಂಡು ಸಹಿಸಲಾರದೆ ಗೊಂದಲಕ್ಕೆ ಸಿಲುಕಿರುವ ಕಾಂಗ್ರೆಸ್ ಪಕ್ಷ ಸುಳ್ಳಿನ ಹೇಳಿಕೆಗಳನ್ನು ನೀಡುತ್ತಿದೆ ಎಂದು ಹೇಳಿದರು. ಹಲವು ಕಾಲದ ಬೇಡಿಕೆಯಾದ ರಿಕ್ಷಾ ನಿಲ್ದಾಣವನ್ನು ಆದ್ಯತೆಯ ನೆಲೆಯಲ್ಲಿ ಒದಗಿಸುವ ಕೆಲಸ ಮಾಡಲಾಗಿದೆ, ಮುಂದಿನ ದಿನಗಳಲ್ಲಿ ಇದರ ನಿರ್ವಹಣೆ ಮತ್ತು ಸ್ವಚ್ಚತೆಯನ್ನು ಕಾಯ್ದುಕೊಂಡು ಜನರ ಸೇವೆ ಮಾಡಿ ಎಂದು ಅವರು ತಿಳಿಸಿದರು.

ವೇದಿಕೆಯಲ್ಲಿ ಭಾರತೀಯ ಮಜ್ದೂರು ಸಂಘದ ನಿಕಟಪೂರ್ವರಾಜ್ಯಾಧ್ಯಕ್ಷ ವಿಶ್ವನಾಥ ಶೆಟ್ಟಿ, ಬೆಂಜನಪದವು ಶ್ರೀ ಭದ್ರಕಾಳಿ ದೇವಸ್ಥಾನದ ಧರ್ಮದರ್ಶಿ ರಮೇಶ್ ಬಿ‌. ಬೆಂಜನಪದವು ಕೊರಗತನಿಯಜ್ಜ ಕಟ್ಟೆಯ ಧರ್ಮದರ್ಶಿ ವಿಜಯ, ಭಾರತೀಯ ಮಜ್ದೂರು ಸಂಘದ ಸಂಘಟನಾ ಕಾರ್ಯದರ್ಶಿ ವಸಂತ ಕುಮಾರ್ ‌ಮಣಿಹಳ್ಳ, ಉಪಾಧ್ಯಕ್ಷ ನಾರಾಯಣ ಪೂಜಾರಿ, ಬಂಟ್ವಾಳ ತಾಲೂಕು ಅಧ್ಯಕ್ಷ ವಿಶ್ವನಾಥ ಚೆಂಡ್ತಿಮಾರ್, ಕಳ್ಳಿಗೆ ಗ್ರಾ.ಪಂ.ಅಧ್ಯಕ್ಷೆ ಯಶೋಧ ಜಾರಂದಗುಡ್ಡೆ, ಅಮ್ಮುಂಜೆ ಗ್ರಾ.ಪಂ.ಅಧ್ಯಕ್ಷ ವಾಮನ ಆಚಾರ್ಯ, ಉಪಾಧ್ಯಕ್ಷೆ ಪ್ರಮೀಳಾ,ಬಡಗಬೆಳ್ಳೂರು ಗ್ರಾಮಪಂಚಾಯತ್ ಅಧ್ಯಕ್ಷ ಪ್ರಕಾಶ್ ಆಳ್ವ, ಅಮ್ಮುಂಜೆ ಗ್ರಾಮಪಂಚಾಯತ್ ಸದಸ್ಯರಾದ ರಾಧಕೃಷ್ಣ ತಂತ್ರಿ, ಕಾರ್ತಿಕ್ ಬಳ್ಳಾಲ್, ಲಕ್ಮೀ, ಬಾಗೀರಥಿ, ರವೀಂದ್ರ ಸುವರ್ಣ, ರೋನಾಲ್ಡ್ ಡಿ.ಸೋಜ, ಕಲ್ಪನೆ ರಿಕ್ಷಾ ಚಾಲಕರ ಸಂಘದ ಗೌರವಾಧ್ಯಕ್ಷ ಕಮಲಾಕ್ಷ ಪೂಜಾರಿ, ಕಲ್ಪನೆ ರಿಕ್ಷಾ ಚಾಲಕರ ಸಂಘದ ಅಧ್ಯಕ್ಷ ಉದಯಕುಮಾರ್, ಪ್ರಮುಖರಾದ ಸಂದೀಪ್ ಬೆಂಜನಪದವು, ಜನಾರ್ದನ ಬಾರಿಂಜೆ,ಸುರೇಶ್ ಬೆಂಜನಪದವು, ರಾಮಚಂದ್ರ ಆಚಾರ್ಯ ಬೆಂಜನಪದವು ಮತ್ತಿತರರು ಉಪಸ್ಥಿತರಿದ್ದರು.

ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಅಮ್ಟಾಡಿ ಡಾ| ಕೃಷ್ಣ ಮೂರ್ತಿ, ರಿಕ್ಷಾ ಚಾಲಕ ಗುರುವಪ್ಪ ಅವರನ್ನು ಇದೇ ಸಂದರ್ಭ ಗೌರವಿಸಲಾಯಿತು.

Ashika S

Recent Posts

ಹಾಸನ ವಿಡಿಯೋ ಪ್ರಕರಣ: ಸುಳ್ಳು ದೂರಿನ ಒತ್ತಡ

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…

12 mins ago

ಮದುವೆ ರದ್ದು, ಕೋಪದಿಂದ ಅಪ್ರಾಪ್ತ ಬಾಲಕಿಯ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ

ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.

28 mins ago

ಅಕ್ಷಯ ತೃತೀಯದಂದು ಲಕ್ಷ್ಮಿ ಮತ್ತು ಕುಬೇರನಿಗೆ ವಿಶೇಷ ಪೂಜೆ

ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…

53 mins ago

ಅಕ್ಷಯ ತೃತೀಯ ದಿನದಂದು ಚಿನ್ನ, ಬೆಳ್ಳಿ ದರ ಪಟ್ಟಿ ಹೀಗಿದೆ!

ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…

1 hour ago

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

9 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

9 hours ago