Categories: ಮಂಗಳೂರು

ಬಂಟ್ವಾಳ : ಕಾಂಗ್ರೆಸ್ ಕಾರ್ಯಕರ್ತ ವಸಂತ ಅವರು ಬಿಜೆಪಿ ಸೇರ್ಪಡೆ

ಬಂಟ್ವಾಳ : ದೇವಶ್ಯಪಡೂರು ಗ್ರಾಮದ ಕ್ರಿಯಾಶೀಲ ಕಾಂಗ್ರೆಸ್ ಕಾರ್ಯಕರ್ತ ವಸಂತ ಅವರನ್ನು ಬಿಜೆಪಿ ಕಚೇರಿಯಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಉಪಸ್ಥಿತಿಯಲ್ಲಿ ಬಿಜೆಪಿ ಶಾಲು ಹಾಕಿ , ಬಿಜೆಪಿ ಧ್ವಜವನ್ನು ನೀಡಿ ಸೇರ್ಪಡೆ ಮಾಡಲಾಯಿತು.

ಬಳಿಕ ಮಾತನಾಡಿದ ಶಾಸಕ ರಾಜೇಶ್ ನಾಯ್ಕ್,ಅವರು ದೇಶದ, ಹಿಂದುತ್ವದ ಸಂಸ್ಕೃತಿಯ ಮೇಲೆ ಪ್ರೀತಿಯಿರುವ,ಭವಿಷ್ಯದ ಚಿಂತನೆಯಿರುವ ಪ್ರತಿಯೊಬ್ಬನಿಗೂ ಬಿಜೆಪಿ ಪಕ್ಷ ಸದಾ ತೆರೆದಿರುತ್ತದೆ. ಯಾವುದೇ ರಾಜಕೀಯ ಪಕ್ಷಕ್ಕೆ ಧ್ಯೇಯ, ಬದ್ದತೆ, ಸಿದ್ದಾಂತ ಬೇಕು, ಜನರಿಗೆ ನೀಡಿದ ಭರವಸೆಯನ್ನು ಈಡೇರಿಸಬೇಕು, ಅ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಅವರು ಹೇಳಿದರು.

ಅಭಿವೃದ್ಧಿ ವಿಚಾರದಲ್ಲಿ ಮಾತನಾಡಲು ಅಧಿಕಾರ ಇಲ್ಲದವರು, ಪ್ರಸ್ತುತ ದಿನಗಳಲ್ಲಿ ಟೀಕೆ ಟಿಪ್ಪಣಿ ಮಾಡುತ್ತಿರುವ ಕಾಂಗ್ರೇಸ್ ಪಕ್ಷ ಡೆಪೋಸಿಟ್ ಇಲ್ಲದ ಹೀನಾಯ ಸ್ಥಿತಿಗೆ ತಲುಪಿದೆ. ಬಿಜೆಪಿಯ ಬೆಳವಣಿಗೆಯನ್ನು ನೋಡಿ ಬೇರೆ ಬೇರೆ ಪಕ್ಷದ ನಾಯಕರು , ಕಾರ್ಯಕರ್ತರು ಬಿಜೆಪಿಯತ್ತ ಒಲವು ತೋರಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲದ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ, ಒಳಚರಂಡಿ ನಿಗಮ‌ಮಂಡಳಿ ಸದಸ್ಯೆ ಸುಲೋಚನ ಜಿ.ಕೆ.ಭಟ್, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುದರ್ಶನ ಬಜ, ಪ್ರಮುಖರಾದ ಪುಷ್ಪರಾಜ ಚೌಟ, ಪುರುಷೋತ್ತಮ ಶೆಟ್ಟಿ, ಪ್ರಕಾಶ್ ಅಂಚನ್, ಸದಾನಂದ ನಾವೂರ, ಕಮಲಾಕ್ಷಿ ಕೆ.ಪೂಜಾರಿ, ಗೋಪಾಲ ಸುವರ್ಣ, ಪ್ರಮೋದ್ ಕುಮಾರ್ ಅಜ್ಜಿಬೆಟ್ಟು, ಮೋನಪ್ಪ ದೇವಸ್ಯ, ಉಪಸ್ಥಿತರಿದ್ದರು.

Sneha Gowda

Recent Posts

ಬಾಳೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಕೋರಿ ರಾಷ್ಟ್ರೀಯ ಹೆದ್ದಾರಿ ಬಂದ್ ಚಳುವಳಿ

ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಚಾಮರಾಜನಗರದ ಸತ್ಯಮಂಗಲಂ ಮುಖ್ಯ ರಸ್ತೆಯಲ್ಲಿ ಜಮಾಯಿಸಿದ ಸಂಘದ ಪದಾಧಿಕಾರಿಗಳು…

12 mins ago

ಗಾಳಿ ಸಮೇತ ಭಾರಿ ಮಳೆ : ನೆಲಕಚ್ಚಿದ ಮರಗಳು

ಧಾರವಾಡದಲ್ಲಿ ಶನಿವಾರ ಗಾಳಿ ಸಮೇತ ಮಳೆಯಾಗಿದ್ದು, ಅಲ್ಲಲ್ಲಿ ಮರಗಳು ನೆಲಕಚ್ಚಿದ ಬಗ್ಗೆ ವರದಿಯಾಗಿದೆ. ಬೆಳಿಗ್ಗೆಯಿಂದ ವಿಪರೀತ ಬಿಸಿಲಿನ ವಾತಾವರಣವಿತ್ತು

36 mins ago

ಮನುಷ್ಯನ ಆರೋಗ್ಯಕ್ಕೆ ಕ್ರೀಡೆಗಳು ಅತ್ಯಂತ ಸಹಕಾರಿ : ತಮ್ಮಯ್ಯ

ಕ್ರೀಡೆಗಳು ಮನುಷ್ಯನ ಆರೋಗ್ಯವನ್ನು ಸುಸ್ಥಿರವಾಗಿ ಕಾಪಾಡುವ ಜೊ ತೆಗೆ ಮನಸ್ಸನ್ನು ಹತೋಟಿಗಿಡುವ ಬಹುದೊಡ್ಡ ಸಾಧನ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ…

48 mins ago

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು- ತಮ್ಮಯ್ಯ

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು. ಆ ನಿಟ್ಟಿನಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಬೇಕೆಂದು ಶಾಸಕ ಎಚ್.ಡಿ. ತಮ್ಮಯ್ಯ ಅವರು ಹೇಳಿದ್ದಾರೆ. ನಗರದ ಬಸವನಹಳ್ಳಿಯ…

58 mins ago

ಮಕ್ಕಳು ಬೇಸಿಗೆ ರಜೆಯಲ್ಲಿ ಶಿಕ್ಷಣದಿಂದ ವಂಚಿತರಾಗಬಾರದು : ಶಿಕ್ಷಕ ಬಾಲಾಜಿ

ಬೇಸಿಗೆ ರಜೆಯಲ್ಲಿ ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಸಂಸ್ಥೆಗಳ ಬೇಸಿಗೆ ತರಬೇತಿ ಶಿಬಿರಗಳಿಗೆ ಮುಂದಿನ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಕಳಿಸುವುದು ಸಾಮಾನ್ಯ.…

1 hour ago

ಚರಂಡಿ ಸ್ವಚ್ಛಗೊಳಿಸುವಂತೆ ಸಾರ್ವಜನಿಕರ ಆಗ್ರಹ

ಪಟ್ಟಣದ ವಿವಿಧ ವಾರ್ಡ್‌ಗಳು ಹಾಗೂ ಪ್ರಮುಖ ವೃತ್ತಗಳಲ್ಲಿನ ಚರಂಡಿಗಳು ಕಟ್ಟಿಕೊಂಡು ದುರ್ನಾತ ಬೀರುತ್ತಿದ್ದು, ಜನರು ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ. ಅಧಿಕಾರಿಗಳ…

1 hour ago