Categories: ಮಂಗಳೂರು

ಬಂಟ್ವಾಳ: ಡಾ.ಬಿ.ಆರ್ ಅಂಬೇಡ್ಕರ್ ಜನ್ಮ ದಿನಾಚರಣೆ

ಬಂಟ್ವಾಳ: ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜನ್ಮ ದಿನಾಚರಣೆಯನ್ನು ಬಂಟ್ವಾಳ ತಾಲೂಕು ಆಡಳಿತ ಸೌಧದಲ್ಲಿ ಶುಕ್ರವಾರ ಆಚರಿಸಲಾಯಿತು. ತಹಶೀಲ್ದಾರ್ ಎಸ್. ಬಿ ಕೂಡಲಗಿ ಅವರು ದೀಪ ಬೆಳಗಿ ಉದ್ಘಾಟಿಸಿ, ಅತೀ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತದ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ನಮ್ಮ ದೇಶದ ಬಹು ದೊಡ್ಡ ಆಸ್ತಿ. ಹಲವಾರು ದೇಶಗಳ ಸಂವಿಧಾನಗಳನ್ನು ಅಭ್ಯಸಿಸಿ ಅವುಗಳಲ್ಲಿರುವ ಒಳಿತನ್ನು ಕ್ರೋಢೀಕರಿಸಿ ಅತ್ಯುತ್ತಮ ಸಂವಿಧಾನವನ್ನು ಅವರು ನಮಗೆ ನೀಡಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಗ್ರೇಡ್ 2 ತಹಶೀಲ್ದಾರ್ ದಯಾನಂದ ಕೆ.ಎಸ್,ಕೇಂದ್ರ ಸ್ಥಾನಿಯ ಶಿರಸ್ತೇದಾರ್ ನರೇಂದ್ರ ನಾಥ್ ಮಿತ್ತೂರು, ಉಪತಹಸೀಲ್ದಾರ್ ರಾಜೇಶ್ ನಾಯ್ಕ್, ನವೀನ್ ಬೆಂಜನಪದವು, ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್, ಶಿಶು ಅಬಿವೃದ್ಧಿ ಯೋಜನಾಧಿಕಾರಿ ಗಾಯತ್ರಿ ಕಂಬಳಿ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್
ತಾಲೂಕು ಕಚೇರಿ ಸಿಬ್ಬಂದಿಗಳು, ಗ್ರಾಮ ಆಡಳಿತ ಆಧಿಕಾರಿಗಳು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು.

Sneha Gowda

Recent Posts

ಮದುವೆ ಮನೆಯ ಊಟ ಸೇವಿಸಿ ನೂರಾರು ಮಂದಿ ಅಸ್ವಸ್ಥ

ಮದುವೆ ಮನೆಯಲ್ಲಿ ಊಟ ಮಾಡಿದ ನೂರಾರು ಮಂದಿ ಏಕಾಏಕಿ ಅಸ್ವಸ್ಥಗೊಂಡ ಘಟನೆ ಚಿತ್ರದುರ್ಗ ತಾಲೂಕಿನ ಕಾಲ್ಗೆರೆ ಗ್ರಾಮದಲ್ಲಿ ನಡೆದಿದೆ.

6 mins ago

ಕಾಂಗ್ರೆಸ್ ಪರ ಮತ ಹಾಕಿಸಿದ್ದಕ್ಕೆ ಯುವಕನ ಕೊಲೆ

ಚುನಾವಣೆ ಮುಗಿದರೂ ಹಗೆತನ ಮುಗಿಯಲಿಲ್ಲ. ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕೆ ಯುವಕನೊಬ್ಬ ಕೊಲೆಯಾಗಿದ್ದಾನೆ. ಜಾವೀದ್ ಚಿನ್ನಮಳ್ಳಿ (25)ಹತ್ಯೆಯಾದವನು. ಕಲಬುರಗಿಯ ಅಫಜಲಪುರ…

21 mins ago

ಆನ್‌ಲೈನ್ ಟ್ರೇಡಿಂಗ್: 17.35 ಲಕ್ಷ ರೂ. ವಂಚನೆ

ಆನ್‌ಲೈನ್ ಪಾರ್ಟ್‌ಟೈಮ್ ಕೆಲಸ ಹಾಗೂ ಆನ್‌ಲೈನ್ ಟ್ರೇಡಿಂಗ್ ಮೇಸೆಜ್ ನ‌ ಬಲೆಗೆ ಬಿದ್ದ ವ್ಯಕ್ತಿಯೊಬ್ಬರು ಬರೋಬ್ಬರಿ 17.35 ಲಕ್ಷ ರೂ.…

41 mins ago

ಬಿಸಿಲಿನ ತಾಪ, ಮೇವಿನ ಕೊರತೆಯಿಂದ ಸಾವಿಗೀಡಾಗುತ್ತಿವೆ ಸಾಕುಪ್ರಾಣಿಗಳು

ಹೆಚ್ಚುತ್ತಿರುವ ಬಿಸಿಲಿನ ತಾಪ ಹಾಗೂ ಸಮರ್ಪಕ ಮೇವು ದೊರಕದೆ ಕಾಡಂಚಿನ ಗ್ರಾಮಗಳ ಜಾನುವಾರು, ಸಾಕುಪ್ರಾಣಿಗಳು ಸಾವಿಗೀಡಾಗುತ್ತಿವೆ.

1 hour ago

ದೊಡ್ಡಬಳ್ಳಾಪುರ: ಹಳೇ ದ್ವೇಷಕ್ಕೆ ಯುವಕನ ಕತ್ತು ಕುಯ್ದು ಕೊಲೆ

ಹಳೇ ದ್ವೇಷಕ್ಕೆ ನಡುರಸ್ತೆಯಲ್ಲಿ ಯುವಕನ ಕತ್ತು ಕುಯ್ದು ಕೊಲೆ ಮಾಡಿದ ಘಟನೆ ದೊಡ್ಡಬಳ್ಳಾಪುರ ಹೊರವಲಯ ನವೋದಯ ಶಾಲೆಯ ಮುಂಭಾಗದಲ್ಲಿ ನಡೆದಿದೆ.

1 hour ago

ಕೇಂದ್ರ ಸೂಚನೆ ನೀಡಿದ ಕೂಡಲೇ ರಾಜ್ಯದಲ್ಲಿ ಸಿಎಎ ಅನುಷ್ಠಾನ: ಮೋಹನ್‌ ಯಾದವ್‌

ದೇಶಾದ್ಯಂತ ಚುನಾವಣೆಗ ಅಂತ್ಯಗೊಳುವುದಕ್ಕೂ ಮುನ್ನ ವಿವಿಧ ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪ್ರಕ್ರಿಯೆ ಆರಂಭಿಸಬೇಕೆಂದು ಕೇಂದ್ರ ನಿರ್ಧರಿಸಿದೆ.

2 hours ago